• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಆರೋಗ್ಯ ವಿಚಾರಿಸಿದ ಗೃಹ ಸಚಿವರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 12; ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ಪತನಗೊಂಡಿತ್ತು. ಅಪಘಾತದಲ್ಲಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿ ಬುಧವಾರದಂದು ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದರು.

ಬಿಪಿನ್ ರಾವತ್ ಸಾವಿಗೆ ಸಂಭ್ರಮಿಸಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ; ಬಂಧನ ಸಾಧ್ಯತೆಬಿಪಿನ್ ರಾವತ್ ಸಾವಿಗೆ ಸಂಭ್ರಮಿಸಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ; ಬಂಧನ ಸಾಧ್ಯತೆ

ಗೃಹ ಸಚಿವರು ವರುಣ್ ಸಿಂಗ್ ತಂದೆ ಹಾಗೂ ತಾಯಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಸಚಿವರ ಜೊತೆಯಲ್ಲಿ ಉಪಸ್ಥಿತರಿದ್ದರು.

ಹೆಲಿಕಾಪ್ಟರ್ ದುರಂತ; ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಬಗ್ಗೆ ತಿಳಿಯಿರಿಹೆಲಿಕಾಪ್ಟರ್ ದುರಂತ; ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಬಗ್ಗೆ ತಿಳಿಯಿರಿ

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ ಗೃಹ ಸಚಿವರು, ಕರ್ನಾಟಕ ಸರಕಾರವು, ಹೆಚ್ಚಿನ ಚಿಕಿತ್ಸೆಯೂ ಸೇರಿದಂತೆ ಎಲ್ಲ ರೀತಿಯ ಸಹಾಯ ಹಾಗೂ ನೆರವು, ನೀಡಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಬಗ್ಗೆ ಸಂಸತ್ತಿಗೆ ರಾಜನಾಥ್ ಸಿಂಗ್ ಮಾಹಿತಿಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಬಗ್ಗೆ ಸಂಸತ್ತಿಗೆ ರಾಜನಾಥ್ ಸಿಂಗ್ ಮಾಹಿತಿ

ಶೇ 45ರಷ್ಟು ಸುಟ್ಟಗಾಯ; ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕಿಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ತಮಿಳುನಾಡಿನ ವೆಲ್ಲಿಂಗಟನ್‌ನಲ್ಲಿನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹಳೇ ಏರ್ ಪೋರ್ಟ್ ರಸ್ತೆಯಲ್ಲಿರುವ ಕಮಾಂಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ವೆಲ್ಲಿಂಗಟನ್‌ನಲ್ಲಿನ ಸೇನಾ ಆಸ್ಪತ್ರೆಯಲ್ಲಿ ಚೆನ್ನೈನಿಂದ ಆಗಮಿಸಿದ್ದ ಹಿರಿಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಶೇ 45ರಷ್ಟು ಸುಟ್ಟಗಾಯಗಳಾಗಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ದೇಶದ ಜನರು ಪ್ರಾರ್ಥಿಸುತ್ತಿದ್ದಾರೆ.

ವಾಯುಪಡೆಯ ಹೆಲಿಕಾಪ್ಟರ್ ಎಂಐ-17ವಿ5 ದುರಂತದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನಲ್ಲಿದ್ದ 14 ಜನರಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ತಮಿಳುನಾಡು ಸರ್ಕಾರ ವರುಣ್ ಸಿಂಗ್‌ಗೆ ಹೆಚ್ಚಿನ ಚಿಕಿತ್ಸೆಯನ್ನು ನೀಡಲು ಕೊಯಮತ್ತೂರಿನಲ್ಲಿ ಅಗತ್ಯ ವ್ಯವಸ್ಥೆಯನ್ನು ಮಾಡಿತ್ತು. ಅವರ ಚಿಕಿತ್ಸೆಗಾಗಿಯೇ ಹಿರಿಯ ವೈದ್ಯರನ್ನು ಒಳಗೊಂಡ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಆದರೆ ವರುಣ್ ಸಿಂಗ್ ತಂದೆಯು ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲು ತಿರ್ಮಾನಿಸಿದ್ದರು. ಶುಕ್ರವಾರ ಅವರನ್ನು ವೆಲ್ಲಿಂಗಟನ್‌ನಲ್ಲಿನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ತಮ್ಮ ಶೌರ್ಯ, ಸಾಹಸಕ್ಕಾಗಿ ಈ ವರ್ಷದ ಸಂತಂತ್ರ ದಿನಾಚರಣೆಯಂದು ಶೌರ್ಯ ಚಕ್ರ ಪ್ರಶಸ್ತಿಯನ್ನು ಪಡೆದಿದ್ದರು. 2020ರ ಅಕ್ಟೋಬರ್ 12ರಂದು ತಾಂತ್ರಿಕ ದೋಷ ಕಂಡು ಬಂದಿದ್ದ 'ತೇಜಸ್' ಯುದ್ಧ ವಿಮಾನವನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದದ್ದರು ವರುಣ್ ಸಿಂಗ್.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ತಮ್ಮ ಶೌರ್ಯ, ಸಾಹಸಕ್ಕಾಗಿ 2021ರ ಸ್ವತಂತ್ರ ದಿನಾಚರಣೆಯಂದು ಶೌರ್ಯ ಚಕ್ರ ಪ್ರಶಸ್ತಿ ಪಡೆದಿದ್ದರು. ತಾಂತ್ರಿಕ ದೋಷ ಕಂಡು ಬಂದಿದ್ದ ತೇಜಸ್ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ್ದರು.

ಎಲ್‌ಸಿಎ ಸ್ಕ್ವಾಡ್ರನ್‌ನಲ್ಲಿ ಪೈಲೆಟ್ ಆಗಿದ್ದ ವರುಣ್ ಸಿಂಗ್ ವೈಮಾನಿಕ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿದ್ದಕ್ಕೆ ಭಾರತದ 3ನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಶೌರ್ಯಚಕ್ರ ಪ್ರಶಸ್ತಿ ಪಡೆದಿದ್ದರು. ಕಠಿಣ ಪರಿಸ್ಥಿತಿಯಲ್ಲಿಯೂ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸುವ ಧೈರ್ಯ ತೋರಿದ್ದರು.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿನಲ್ಲಿರುವ ವಾಯುಪಡೆಯ ತರಬೇತಿ ಶಿಬಿರದಲ್ಲಿ ಮೊದಲು ಪರೀಕ್ಷಾ ಪೈಲೆಟ್ ಆಗಿದ್ದರು. ಹಗುರ ಯುದ್ಧ ವಿಮಾನ ತೇಜಸ್ ನಿರ್ವಹಣೆ ನೋಡಿಕೊಳ್ಳುತ್ತಿದ್ದರು. ಕಳೆದ ಬುಧವಾರ ಜನರಲ್‌ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್‌ನ ಸಂಪರ್ಕ ಅಧಿಕಾರಿಯಾಗಿ ವರುಣ್ ಸಿಂಗ್ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಹೆಲಿಕಾಪ್ಟರ್‌ನಲ್ಲಿಯೇ ಪ್ರಯಾಣ ಮಾಡತ್ತಿದ್ದರು.

   HD Kumaraswamy : ಯಡಿಯೂರಪ್ಪನಿಗಿರೋ ಸೌಜನ್ಯ ಕಾಂಗ್ರೆಸ್ ನವರಿಗಿಲ್ಲ | Oneindia Kannada
   English summary
   Karnataka home minister Araga Jnanendra on Sunday visited the Commad Hospital in Bengaluru and enquired health of group captain Varun Singh who is undergoing treatment at the hospital. Varun Singh was survived in helicopter crash in Tamil Nadu.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X