ಅರ್ಕಾವತಿ ಫೈಟ್ : ಸರ್ಕಾರದಿಂದ 1 ಲಕ್ಷ ಪುಟಗಳ ದಾಖಲೆ ಸಲ್ಲಿಕೆ
ಬೆಂಗಳೂರು, ಫೆ.9 : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಪ್ರತಿಕ್ಷಗಳು ದಾಖಲೆ ಬಿಡುಗಡೆ ಮಾಡುತ್ತಿವೆ. ಇತ್ತ ರಾಜ್ಯ ಸರ್ಕಾರ ಇಂದು ಡಿನೋಟಿಫಿಕೇಶನ್ ಕುರಿತ ಒಂದೂವರೆ ಲಕ್ಷ ಪುಟದ ದಾಖಲೆಯನ್ನು ನ್ಯಾಯಮೂರ್ತಿ ಕೆಂಪಣ್ಣ ಅವರ ವಿಚಾರಣಾ ಆಯೋಗಕ್ಕೆ ಸಲ್ಲಿಕೆ ಮಾಡಲಿದೆ.
ಭಾನುವಾರ ನವದೆಹಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಸೋಮವಾರ ದಾಖಲೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿನ ಪ್ರತಿಪಕ್ಷಗಳು ಅನಾರೋಗ್ಯದಿಂದ ಬಳಲುತ್ತಿವೆ. ಸರ್ಕಾರದ ಉತ್ತಮ ಕೆಲಸವನ್ನು ಸಹಿಸಲಾಗದೆ ಅರ್ಕಾವತಿ ಹಗರಣದ ಕತೆ ಕಟ್ಟುತ್ತಿವೆ ಎಂದು ಆರೋಪಿಸಿದ್ದಾರೆ.

ಅರ್ಕಾವತಿ ಡಿನೋಟಿಫಿಕೇಷನ್ ಹಗರಣಗಳು ನಡೆದಿರುವುದು ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಬರೆದಿರುವ ಪುಸ್ತಕದಲ್ಲಿ ಹುಳಿ ಉಪ್ಪು ಖಾರ ಯಾವುದೂ ಇಲ್ಲ ಎಂದು ಲೇವಡಿ ಮಾಡಿದರು. [ಅರ್ಕಾವತಿ ಹಗರಣದಲ್ಲಿ ಸಿಂಗ್ ಪಾಲಿದೆ]
ಬರಲಿಗೆ ಮತ್ತೊಂದು ಅರ್ಕಾವತಿ ಪುಸ್ತಕ : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ 490 ಪುಟಗಳ ಪುಸ್ತಕವನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಸದ್ಯ, ಕಾಂಗ್ರೆಸ್ ಸಹ ಕಿರು ಪುಸ್ತಕವನ್ನು ಹೊರತರಲಿದೆ. [ಅರ್ಕಾವತಿ ಕರ್ಮಕಾಂಡ : ಕುಮಾರಸ್ವಾಮಿ ಪುಸ್ತಕದಲ್ಲೇನಿದೆ?]
ಬಿಜೆಪಿ ಮತ್ತು ಜೆಡಿಎಸ್ ಅರ್ಕಾವತಿ ಹಗರಣಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪುದಾರಿಗೆ ಎಳೆಯುತ್ತಿವೆ. ಸುಳ್ಳು ದಾಖಲೆಗಳನ್ನು ಬಿಡುಗಡೆ ಮಾಡಿದ ಅದನ್ನು ಸತ್ಯವೆಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ಆದ್ದರಿಂದ ವಾಸ್ತವಾಂಶಗಳನ್ನು ಒಳಗೊಂಡ ಕಿರು ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತದೆ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಹೇಳಿದ್ದಾರೆ.
ಹಗರಣದ ತನಿಖೆಗೆ ನ್ಯಾ.ಕೆಂಪಣ್ಣ ಆಯೋಗವನ್ನು ಸರ್ಕಾರ ರಚನೆ ಮಾಡಿದೆ. ಅಲ್ಲಿಗೆ ದಾಖಲಾತಿಗಳನ್ನು ನೀಡುವ ಬದಲು ಪ್ರತಿಪಕ್ಷಗಳು ಹೇಳಿಕೆ ನೀಡುತ್ತಿವೆ. ಮಾಜಿ ಸಿಎಂ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಧನಂಜಯ ಅವರು ಆರೋಪಿಸಿದ್ದಾರೆ.
-
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್ -
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ












Click it and Unblock the Notifications