ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆದೇಶ ನೀಡಿದರೂ ರಜೆ ಕೊಡದ ಶಾಲೆಗಳು: ಶಿಕ್ಷಣ ಸಚಿವ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 11: ಕೊರೊನಾ ವೈರಸ್ ಭೀತಿಯಿಂದ ಬೆಂಗಳೂರಿನ ಕೆಲವು ಭಾಗಗಳ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದರೆ, ಈ ಆದೇಶವನ್ನು ಸರಿಯಾಗಿ ಎಲ್ಲ ಶಾಲೆಗಳು ಪಾಲಿಸುತ್ತಿಲ್ಲ.

ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದಾರೆ. ''ಸರ್ಕಾರದ ಆದೇಶ ಪಾಲಿಸುವುದು ಶಾಲೆಗಳ ಕರ್ತವ್ಯ. ಆದರೆ, ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಆದೇಶಕ್ಕೆ ಗೌರವ ನೀಡದೆ, ತಮ್ಮದೆ ಸಾಮ್ರಾಜ್ಯ ಕಟ್ಟಿಕೊಂಡಿವೆ.'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರ್ಗಿಯ ಅಜ್ಜನಿಗೆ ಕೊರೊನಾ ವೈರಸ್ ಶಂಕೆಕಲಬುರ್ಗಿಯ ಅಜ್ಜನಿಗೆ ಕೊರೊನಾ ವೈರಸ್ ಶಂಕೆ

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ನಿಯಮ ತಂದಿದೆ. 'ಮಕ್ಕಳ ಹಿತಕ್ಕಿಂತ ನಿಮ್ಮ ಪ್ರತಿಷ್ಟೆ ಮುಖ್ಯವಲ್ಲ' ಎಂದು ಸುರೇಶ್ ಕುಮಾರ್ ಖಾಸಗಿ ಶಾಲೆಯ ಆಡಳಿತ ಮಂಡಳಿಗಳಿಗೆ ಕಿವಿಮಾತು ಹೇಳಿದ್ದಾರೆ.

Education Minister Suresh Kumar Warning To All Private Schools

ಸರ್ಕಾರದ ಆದೇಶದಂತೆ ನಡೆದುಕೊಳ್ಳದೆ ರಜೆ ನೀಡದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಟೆಕ್ಕಿ ಮಗಳಿಗೆ ಕೊರೊನಾ: ಶಾಲೆಯ 1700 ಸಹಪಾಠಿಗಳಿಗೆ ತಪಾಸಣೆ!ಬೆಂಗಳೂರಿನ ಟೆಕ್ಕಿ ಮಗಳಿಗೆ ಕೊರೊನಾ: ಶಾಲೆಯ 1700 ಸಹಪಾಠಿಗಳಿಗೆ ತಪಾಸಣೆ!

ಬೆಂಗಳೂರಿಗೂ ಕೊರೊನಾ ವೈರಸ್ ಕಾಲಿಟ್ಟಿದೆ. ಮುಂಜಾಗ್ರತೆ ಕ್ರಮವಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪ್ರಾಥಮಿಕ ಶಾಲೆ, ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಆದೇಶ ಬರುವವರೆಗೆ ಶಾಲೆಗಳಿಗೆ ರಜೆ ಇರುತ್ತದೆ.

English summary
Coronavirus in karnataka: Education minister Suresh Kumar warns all bengaluru private schools should be closed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X