• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾಕ್ಕೆ ಬೆಂಗಳೂರು ಲಸಿಕೆ?: ಪ್ರಯತ್ನ ನಡೆಸಿವೆ 45 ಸ್ಟಾರ್ಟ್‌ಅಪ್‌ಗಳು

|

ಬೆಂಗಳೂರು, ಮೇ 14: ಮಾರಕ ಕೊರೊನಾ ವೈರಸ್‌ ಸೋಂಕಿಗೆ ಲಸಿಕೆ ಕಂಡು ಹಿಡಿಯಲು ಇಡೀ ಜಗತ್ತಿನ ವಿಜ್ಞಾನಿಗಳು, ತಜ್ಞರು ಹಾಗೂ ಔಷಧ ಕಂಪನಿಗಳು ಪ್ರಯತ್ನ ನಡೆಸಿವೆ. ಅದೇ ರೀತಿ ಐಟಿ, ಬಿಟಿ ತಂತ್ರಜ್ಞಾನದ ಕೇಂದ್ರಸ್ಥಾನವೆಂದು ಕರೆಸಿಕೊಂಡಿರುವ ಬೆಂಗಳೂರಿನಲ್ಲಿಯೂ ಕೊರೊನಾ ವೈರಸ್‌ಗೆ ಲಸಿಕೆ ಕಂಡಿಹಿಡಿಯಲು ಪ್ರಯತ್ನಗಳು ಆರಂಭವಾಗಿವೆ. ಇಷ್ಟೆ ಅಲ್ಲ ಅತ್ಯಂತ ಕರಾರುವಾಕ್ ಹಾಗೂ ತ್ವರಿತವಾಗಿ ಸೋಂಕು ಪತ್ತೆ ಹಚ್ಚಲು ಅನುಕೂಲವಾಗುವ ತಂತ್ರಜ್ಞಾನವನ್ನು ಕಂಡುಹಿಡಿಯಲು ಯುವ ವಿಜ್ಞಾನಿಗಳು ಪ್ರಯತ್ನ ನಡೆಸಿದ್ದಾರೆ.

ಬೆಂಗಳೂರಿನಲ್ಲಿಯೆ ಸರಿ ಸುಮಾರು 45 ಸ್ಟಾರ್ಟ್‌ಅಪ್ ಕಂಪನಿಗಳು ಕೊರೊನಾ ವೈರಸ್‌ ಹಿಂದೆ ಬಿದ್ದಿವೆ. ಶತಾಯ ಗತಾಯ ಕೊರೊನಾ ಸಂಕಷ್ಟದಿಂದ ದೇಶ ಹೊರಬರುವಂತಾಗಲು ಪ್ರಯತ್ನ ನಡೆಸಿವೆ. ರಾಜ್ಯ ಜೈವಿಕ ತಂತ್ರಜ್ಞಾನ ಇಲಾಖೆಯ "ಬೆಂಗಳೂರು ಬಯೋ ಇನೋವೇಷನ್ ಸೆಂಟರ್‌' ನಲ್ಲಿ ಕೋವಿಡ್‌ಗೆ ಲಸಿಕೆ ಕಂಡು ಹಿಡಿಯಲು ನಿರಂತರ ಪ್ರಯತ್ನಗಳು ನಡೆದಿವೆ. ಕೆಲವು ಸಂಸ್ಥೆಗಳು ಈಗಾಗಲೇ ಕ್ಲಿನಿಕಲ್ ಹಂತವನ್ನು ಪೂರ್ಣಗೊಳಿಸಿದ್ದು, ಬೆಂಗಳೂರು ಕೊರೊನಾ ವೈರಸ್‌ ವಿರದ್ಧದ ಹೋರಾಟದಲ್ಲಿ ಜಾಗತಿಕ ಮನ್ನಣೆ ಗಳಿಸಿಕೊಳ್ಳುವ ಸಾಧ್ಯತೆಗಳು ಕಾಣುತ್ತಿವೆ.

ಐದು ನಿಮಿಷಗಳಲ್ಲಿ ಕೋವಿಡ್ ಫಲಿತಾಂಶ

ಐದು ನಿಮಿಷಗಳಲ್ಲಿ ಕೋವಿಡ್ ಫಲಿತಾಂಶ

ಜೈವಿಕ ತಂತ್ರಜ್ಞಾನ ಕ್ಷೇತ್ರದ ಕಂಪನಿಯೊಂದು ಕೇವಲ 5 ನಿಮಿಷದಲ್ಲಿ ಕೋವಿಡ್ ಸೋಂಕು ಪರೀಕ್ಷೆ ಮಾಡುವ ಯಂತ್ರ ಸಿದ್ಧಪಡಿಸಿದ್ದರೆ, ಮತ್ತೊಂದು ಕಂಪನಿ ಸೋಂಕು ಪತ್ತೆ ಜತೆಗೆ ಸ್ಯಾಂಪಲ್ ಅನ್ನು ತಕ್ಷಣವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಯಂತ್ರ ಸಂಶೋಧಿಸಿದೆ. ಅದೇ ರೀತಿ ಹಲವು ಕಂಪನಿಗಳು ನಾನಾ ರೀತಿಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. ಬೆಂಗಳೂರು ಬಯೋ ಇನೋವೇಷನ್‌ ಸೆಂಟರ್‌ ವ್ಯಾಪ್ತಿಯಲ್ಲಿ ಸ್ಟಾರ್ಟ್ಅಪ್‌ಗಳು ಇಂತಹ ಯಶಸ್ಸು ಸಾಧಿಸುತ್ತಿರುವುದು ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಅತ್ಯಂತ ಉತ್ತಮ ಬೆಳವಣಿಗೆ. ಆರೋಗ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಆರ್ಥಿಕ ವಹಿವಾಟು ಮುಂದುವರಿಸಲು 5 ನಿಮಿಷದ ಪರೀಕ್ಷೆಯಿಂದ ಸಾಧ್ಯವಾಗಲಿದೆ.

ಕೊರೊನಾ ವೈರಸ್‌ಗೆ ಆಯುರ್ವೇದ ಔಷಧ: 1 ವಾರದಲ್ಲಿ ಪ್ರಯೋಗ ಆರಂಭ

ಒಂದೇ ಬಾರಿಗೆ 8 ಮಾದರಿ ಪರೀಕ್ಷೆ

ಒಂದೇ ಬಾರಿಗೆ 8 ಮಾದರಿ ಪರೀಕ್ಷೆ

ಎಸ್‌ಎನ್‌ ಲೈಫ್‌ಸೈನ್ಸ್‌ ಪ್ರೋಗ್ರಾಂಬಲ್‌ ರೊಬೊಟಿಕ್‌ ಯಂತ್ರವು ಕಫ ಅಥವಾ ಸ್ವ್ಯಾಬ್‌ಗಳ ಕ್ಲಿನಿಕಲ್ ಮಾದರಿಯ ಆರ್‌ಎನ್‌ಎ ಪ್ರತ್ಯೇಕಿಸುವ ಕೆಲಸ ಮಾಡುತ್ತದೆ, ಏಕಕಾಲದಲ್ಲಿ ಎಂಟು ಮಾದರಿಗಳ ಟೆಸ್ಟ್‌ ಮಾಡುವುದು ಈ ಯಂತ್ರದ ವಿಶೇಷತೆ. ಜತೆಗೆ ಪ್ರತಿ ಮಾದರಿಯ ಆರ್‌ಎನ್‌ಎ ಪ್ರತ್ಯೇಕಿಸುವ ವೆಚ್ಚವೂ ಕೂಡ ಈಗಿನ 500 ರೂ. ಗಳಿಂದ 150 ರೂಗಳಿಗೆ ಇಳಿಕೆಯಾಗಲಿದೆ.

ಎಸ್‌ಎನ್‌ ಲೈಫ್‌ಸೈನ್ಸ್ , ನಿಯೋಮ್‌ ಟೆಕ್ನಾಲಜಿಸ್‌ ಪ್ರೈವೇಟ್ ಲಿಮಿಟೆಡ್, ಹೈಬ್ರಿನೋಮಿಕ್ಸ್ ಲೈಫ್‌ಸೈನ್ಸ್ ಅಂಡ್ ಡಯಾಗ್ನಾಸ್ಟಿಕ್ಸ್ ಎಲ್ಎಲ್ ಪಿ (ಎಚ್ಎಲ್ ಡಿ) ಹಾಗೂ ಗೆಲೊರಿ ಟಿಎಕ್ಸ್ ಫಾರ್ಮಾಸಿಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ತಮ್ಮ ಸಂಶೋಧನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಾತ್ಯಕ್ಷಿಕೆಗಳನ್ನು ಕೊಟ್ಟಿದ್ದಾರೆ.

ಸ್ಥಳೀಯ ತಂತ್ರಜ್ಞಾನದಿಂದ ಸೋಂಕು ಪತ್ತೆಗೆ ಪ್ರಯತ್ನ

ಸ್ಥಳೀಯ ತಂತ್ರಜ್ಞಾನದಿಂದ ಸೋಂಕು ಪತ್ತೆಗೆ ಪ್ರಯತ್ನ

ಈಗಾಗಲೇ ಸೋಂಕು ಪತ್ತೆ ತಂತ್ರಜ್ಞಾನ ಅಭಿವೃದ್ಧಿಪಡಿಸಿರುವ ಕಂಪನಿಗಳು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಯಶಸ್ಸು ಸಾಧಿಸಿವೆ. ಇದೀಗ ಕೊವಿಡ್ ಸೋಂಕು ಪರೀಕ್ಷೆಗೆ ಸೋಂಕಿತರ ಗಂಟಲು ದ್ರವ ನೀಡುವಂತೆ ಕೇಳಿಕೊಂಡಿವೆ. ಈ ಪ್ರಯೋಗ ಯಶಸ್ವಿಯಾದರೆ ಸ್ಥಳೀಯವಾಗಿ ಸಿದ್ಧಪಡಿಸಿದ ತಂತ್ರಜ್ಞಾನದಿಂದಲೇ ಸೋಂಕು ಪತ್ತೆ ಮಾಡಬಹುದು. ಆದರೆ, ಪಾಸಿಟಿವ್ ಬಂದಿರುವ ರೋಗಿಯ ಗಂಟಲು ದ್ರವವನ್ನು ಸಂಗ್ರಹಿಸುವುದು ಮತ್ತು ಪ್ರಯೋಗದ ಬಳಿಕ ವಿಲೇವಾರಿ ಮಾಡುವುದು ಅತ್ಯಂತ ಸವಾಲಿನ ಕೆಲಸ. ಇದಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕಂಪನಿಗೆ ಅಗತ್ಯವಿರುವ ಗಂಟಲು ದ್ರವ ಮಾದರಿಯನ್ನು ಒದಗಿಸುವ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳುವ ಭರವಸೆ ಕೊಟ್ಟಿದೆ.

ಬೆಂಗಳೂರಿಗೆ ಬರಲಿದ್ದಾರೆ 30 ಸಾವಿರ ಜನ; ಬಿಬಿಎಂಪಿಗೆ ದೊಡ್ಡ ಸವಾಲು

ಕಡಿಮೆ ವೆಚ್ಚ ಹಾಗೂ ತ್ವರಿತ ಸೋಂಕು ಪತ್ತೆ

ಕಡಿಮೆ ವೆಚ್ಚ ಹಾಗೂ ತ್ವರಿತ ಸೋಂಕು ಪತ್ತೆ

ಕೊವಿಡ್ ಸೋಂಕಿಗೆ ಲಸಿಕೆ, ಔಷಧ ಕಂಡುಹಿಡಿಯುವುದರ ಜತೆಗೆ ಕಡಿಮೆ ವೆಚ್ಚದಲ್ಲಿ ಮತ್ತು ತ್ವರಿತವಾಗಿ ಸೋಂಕು ಪತ್ತೆ ಮಾಡುವುದಕ್ಕೆ ಮೊದಲ ಆದ್ಯತೆ ಕೊಟ್ಟು ಸ್ಟಾರ್ಟ್‌ಅಪ್ ಕಂಪನಿಗಳು ಪ್ರಯತ್ನ ನಡೆಸಿವೆ. ಈಗಾಗಲೇ ಕೆಲವು ಸ್ಟಾರ್ಟ್‌ಅಪ್‌ಗಳು ಕ್ಲಿನಿಕಲ್ ಟೆಸ್ಟ್ ಹಂತದಲ್ಲಿದ್ದರೆ, ಇನ್ನು ಕೆಲವು ಸಂಶೋಧನೆ ಮುಗಿಸಿ ನಿಯಂತ್ರಣ ಪ್ರಾಧಿಕಾರಗಳ ಒಪ್ಪಿಗೆಗಾಗಿ ಕಾಯುತ್ತಿವೆ. ಒಟ್ಟಿನಲ್ಲಿ ಕರ್ನಾಟಕದ ಸಂಸ್ಥೆಗಳು ಸೋಂಕಿನ ವಿರುದ್ಧ ಹೋರಾಡಲು ಜಗತ್ತಿಗೆ ಪರಿಹಾರ ಒದಗಿಸುವತ್ತ ಹೆಜ್ಜೆ ಹಾಕಿವೆ.

ಸ್ಟಾರ್ಟ್‌ಅಪ್‌ ಕಂಪನಿಗಳಿಗೆ ಸರ್ಕಾರದ ಬೆಂಬಲ

ಸ್ಟಾರ್ಟ್‌ಅಪ್‌ ಕಂಪನಿಗಳಿಗೆ ಸರ್ಕಾರದ ಬೆಂಬಲ

ಬೆಂಗಳೂನ 45 ಸ್ಟಾರ್ಟ್ಅಪ್‌ಗಳು ಕೊವಿಡ್ ಸೋಂಕಿಗೆ ಔಷಧ ಕಂಡುಹಿಡಿಯುವ ಮತ್ತು ತ್ವರಿತವಾಗಿ ಸೋಂಕು ಪತ್ತೆ ಮಾಡುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಪ್ರಯತ್ನಗಳಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಾಯ, ಸಹಕಾರ ಕೊಡುತ್ತಿದೆ.

ಎಸ್‌ಎನ್‌ ಲೈಫ್‌ಸೈನ್ಸಸ್, ಕಫ ಅಥವಾ ಸ್ವ್ಯಾಬ್ ಮಾದರಿಯಿಂದ ಆರ್‌ಎನ್‌ಎ ಬೇರ್ಪಡಿಸುವ ಪ್ರೋಗ್ರಾಂಬಲ್ ರೊಬೊಟಿಕ್ ಯಂತ್ರಗಳ ಮೂಲಕ ತ್ವರಿತವಾಗಿ ಸೋಂಕು ಪತ್ತೆ ಮಾಡುವ ವಿಧಾನದ ಪ್ರಯತ್ನಗಳು ನಡೆದಿವೆ.

ಎಲ್ಲ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಡಿಸಿಎಂ ಚರ್ಚೆ

ಎಲ್ಲ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಡಿಸಿಎಂ ಚರ್ಚೆ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಎಲ್ಲ 45 ಸ್ಟಾರ್ಟ್‌ಅಪ್‌ ಕಂಪನಿಗಳೊಂದಿಗೆ ಡಿಸಿಎಂ ಡಾ. ಅಶ್ವಥ್‌ ನಾರಾಯಣ ಈಗಾಗಲೇ ಚರ್ಚೆ ನಡೆಸಿದ್ದಾರೆ. ಸರ್ಕಾರದ ಸಹಾಯ, ಸೌಲಭ್ಯ ಕೊಡಲು ಅನಕೂಲವಾಗುವಂತೆ ಸಮಿತಿಯೊಂದನ್ನು ರಚಿಸಲು ಸೂಚಿಸಿದ್ದಾರೆ. ಕೊರೊನಾ ವೈರಸ್‌ ಕುರಿತಂತೆ ನಡೆದಿರುವ ಎಲ್ಲ ಬೆಳವಣಿಗೆಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಬಿಬಿಸಿ ಎಂ.ಡಿ ಡಾ. ಜಿತೇಂದ್ರ ಕುಮಾರ್, ಡಾ. ಶರತ್ ಚಂದ್ರ, ಡಾ. ವಿಶಾಲ ರಾವ್ ಸೇರಿದಂತೆ ಇತರ ವಿಜ್ಞಾನಿಗಳು ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲಿಯೆ ಕ್ಲಿನಿಕಲ್ ಟೆಸ್ಟ್‌ನಿಂದ ಪ್ರಾಯೋಗಿಕ ಬಳಕೆ ಆರಂಭವಾಗುವ ಸಾಧ್ಯತೆಗಳಿವೆ.

English summary
Efforts to vaccinate the coronavirus have begun in Benagluru startup companies. There are about 45 startup companies in Bengaluru developing coronavirus vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X