Byrathi Basavaraj: ಬಿಜೆಪಿ ಶಾಸಕ ಬೈರತಿ ಬಸವರಾಜ ಯಾವುದೇ ಕ್ಷಣದಲ್ಲಾದರೂ ಬಂಧನ ಸಾಧ್ಯತೆ, ಏನಿದು ಪ್ರಕರಣ ?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜಗೆ ಸಂಕಷ್ಟ ಎದುರಾಗಿದೆ. ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯಾಗಿರುವ ಕೃಷ್ಣರಾಜಪುರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಏನಿದು ಪ್ರಕರಣ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ಬೈರತಿ ಅವರು ಐದನೇ ಆರೋಪಿಯಾಗಿದ್ಗದು ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.

ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜ
ಇನ್ನು ಈ ಪ್ರಕರಣದಲ್ಲಿ ಬೈರತಿ ಬಸವರಾಜ ಅವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಅವರ ಬಂಧನಕ್ಕ ಸಿಐಡಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಗೋವಾ ಹಾಗೂ ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಶಾಸಕರ ಬಂಧನಕ್ಕೆ ಸಂಬಂಧಿಸಿದಂತೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೊಡುವುದಕ್ಕೆ ಹೈಕೋರ್ಟ್ ಹಾಗೂ ಬಂಧನದಿಂದ ರಕ್ಷಣೆ ಕೊಡುವುದಕ್ಕೆ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಬೈರತಿ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಬೈರತಿ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ವಿವಿಧ ರಾಜ್ಯಗಳಲ್ಲಿ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಬೈರತಿ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಬಸವರಾಜ ಅವರು ಸಲ್ಲಿಸಿದ್ದ ಅರ್ಜಿಯನ್ನು ಶಾಸಕರು-ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ಮಂಗಳವಾರ ವಜಾಗೊಳಿಸಿ ಆದೇಶಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ 4,236 ಪುಟಗಳ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸದ್ಯದ ದೋಷಾರೋಪ ಪಟ್ಟಿಯಿಂದ ಬೈರತಿ ಅವರ ಹೆಸರನ್ನು ಹೊರಗಿಡಲಾಗಿದೆ ಅಥವಾ ಸೇರಿಸಲಾಗಿಲ್ಲ.
ಏನಿದು ಪ್ರಕರಣ ?
ಬೆಂಗಳೂರಿನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಿನಿ ಅವೆನ್ಯೂ ರಸ್ತೆಯಲ್ಲಿರುವ ಸೇಫ್ ಮೆಡಿಕಲ್ ಸ್ಟೋ ಮುಂಭಾಗದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಕು ಶಿವುನನ್ನು 2025ರ ಜುಲೈ 15ರಂದು 8ರಿಂದ 9 ಜನರಿದ್ದ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಪ್ರಕರಣದಲ್ಲಿ ಬೈರತಿ ಬಸವರಾಜ ಅವರ ಹೆಸರು ಸಹ ಕೇಳಿ ಬಂದಿದ್ದು, ಸದ್ಯ ಶಾಸಕರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ: ಇನ್ನು ಬೈರತಿ ಬಸವರಾಜ್ ಅವರು ಕೃಷ್ಣರಾಜಪುರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ. ಇದಕ್ಕೂ ಮೊದಲು ಅವರು ಕಾಂಗ್ರೆಸ್ ಪಕ್ಷದಲ್ಲಿದ್ದರು. ಕೃಷ್ಣರಾಜಪುರದಲ್ಲಿ ಹಿಡಿತ ಸಾಧಿಸಿರುವ ಅವರು ಸತತವಾಗಿ ಈ ಕ್ಷೇತದಿಂದ ಗೆಲವು ಸಾಧಿಸುತ್ತಿದ್ದಾರೆ. ಆದರೆ ಅವರಿಗೆ ಇದೀಗ ದೊಡ್ಡ ಸಂಕಷ್ಟ ಎದುರಾಗಿದೆ.












Click it and Unblock the Notifications