• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಪೊಲೀಸರಿಂದ ಉಡ ಮಾರಾಟಗಾರರ ಬಂಧನ

|

ಬೆಂಗಳೂರು, ಡಿಸೆಂಬರ್ 12: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೋರಮಂಗಲ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಶಕ್ತಿ(26), ಮಲ್ಲರಾಜು(55), ಗೋಪಿ(28) ಬಂಧಿತ ಆರೋಪಿಗಳಾಗಿದ್ದಾರೆ. ಇವರು ರಾಜಸ್ಥಾನದಲ್ಲಿ ಅತಿ ವಿರಳವಾಗಿ ಸಿಗುವ ವನ್ಯಜೀವಿಗಳನ್ನು ಸೆರೆ ಹಿಡಿದು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಉತ್ತರ ಕನ್ನಡ: ಮಟ್ಕಾ ಹೈಟೆಕ್ ಆಟಕ್ಕೆ ಯುವಜನರೇ ದಾಳ

ಸ್ಪೈನಿ ಬಾಲದ ೧೦ ಹಲ್ಲಿಗಳನ್ನು ಮಾರಾಟಕ್ಕೆ ತಂದಿದ್ದರು. ರಾಜಸ್ಥಾನದಿಂದ ಹಲ್ಲಿಗಳನ್ನು ಬೆಂಗಳೂರಿಗೆ ತರಲಾಗಿತ್ತು. ಸೂಕ್ತ ಮಾಹಿತಿ ಕಲೆ ಹಾಕಿದ ಕೋರಮಂಗಲ ಪೊಲೀಸರು ಅರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.

ವನ್ಯ ಜೀವಿಗಳ ಬಗೆಗೆ ತೀವ್ರ ಕಟ್ಟೆಚ್ಚರ ವಹಿಸಿರುವ ಪೊಲೀಸರು ಪಕ್ಕಾ ಮಾಹಿತಿಯನ್ನು ತೆಗೆದುಕೊಂಡಿದ್ದರು. ಇವರೆಲ್ಲರೂ ರಾಜಸ್ಥಾನ ಮೂಲದವರಾಗಿದ್ದಾರೆ. ಈ ಮೂರು ಆರೋಪಿಗಳನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

English summary
Koramangala police have arrested a man accused of illegally selling wildlife in Bangalore city. The police raided and arrested him on certain information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X