ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಕಲಾ ಪರಿಷತ್‌ನಲ್ಲಿ ಆರ್ಟಿಸನ್ಸ್ ಬಜಾರ್‌ಗೆ ನಟಿ ಭವ್ಯ ಚಾಲನೆ

|
Google Oneindia Kannada News

ಬೆಂಗಳೂರು ಫೆಬ್ರವರಿ 21: 'ಕರ್ನಾಟಕ ಚಿತ್ರಕಲಾ ಪರಿಷತ್‌ ಕಲೆ, ಚಿತ್ರ ಕಲೆ ಹಾಗೂ ಕಲಾ ಪ್ರಕಾರಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುತ್ತಾ ಬಂದಿದೆ' ಎಂದು ಹಿರಿಯ ನಟಿ ಭವ್ಯ ಹೇಳಿದರು.

ನಗರದ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಗುರುವಾರದಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಆರ್ಟಿಸನ್ಸ್ ಬಜಾರ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಲೆಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಸ್ಥಾಪಿತವಾಗಿರುವ ಈ ಪರಿಷತ್ತು ಕಲಾ ಪ್ರಕಾರಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ. ಈ ವೇದಿಕೆಯನ್ನು ಕಲಾವಿದರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾರ್ಚ್‌ 1 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತು ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ.

ಎಲ್ಲರ ಗಮನ ಸೆಳೆಯುವಂತಿದೆ

ಎಲ್ಲರ ಗಮನ ಸೆಳೆಯುವಂತಿದೆ

'ದೇಶದ ಮೂಲೆ ಮೂಲೆಗಳಿಂದ ಆಗಮಿಸಲಿರುವ ಕಲಾವಿದರ ಕೈಚಳಕದ ಕಲಾಕೃತಿಗಳನ್ನು ನೋಡುವ ಮತ್ತು ಕೊಂಡುಕೊಳ್ಳುವ ಉತ್ತಮ ಅವಕಾಶವನ್ನು ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಹಾಗೂ ಚಿತ್ತಾರ ಇಡುತ್ತಿದೆ. ನಗರದ ಮಧ್ಯಭಾಗದ ಕರಕುಶಲ ವಸ್ತುಗಳಿಗೊಸ್ಕರವೇ ಬಹಳಷ್ಟು ಪ್ರಸಿದ್ದಿಯನ್ನು ಹೊಂದಿರುವ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಇಂತಹದೊಂದು ವಿಶಿಷ್ಟ್ಯ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು ಎಲ್ಲರ ಗಮನ ಸೆಳೆಯುವಂತಿದೆ ಎಂದು ಹೇಳೀದರು.

ಸಂಪೂರ್ಣ ದಿನದ ಶಾಪಿಂಗ್‌ ನ ಅನುಭವ

ಸಂಪೂರ್ಣ ದಿನದ ಶಾಪಿಂಗ್‌ ನ ಅನುಭವ

ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಆಯೋಜಕರಾದ ಅಫ್ತಾಬ್‌ ಅವರು ಮಾತನಾಡಿ, ಮುಂಬರುವ ಹಬ್ಬದ ಹಾಗೂ ಮದುವೆ ಸೀಸನ್‌ ಗೆ ಹಾಗೂ ಒಂದು ಸಂಪೂರ್ಣ ದಿನದ ಶಾಪಿಂಗ್‌ ನ ಅನುಭವ ಪಡೆಯಲು ಈ ಮೇಳ ಸೂಕ್ತ ಆಯ್ಕೆಯಾಗಿರಲಿದೆ. ನೂರಕ್ಕೂ ಹೆಚ್ಚು ಸ್ಟಾಲ್‌ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ತರಹೇವಾರಿ ಕರಕುಶಲ ವಸ್ತುಗಳು

ತರಹೇವಾರಿ ಕರಕುಶಲ ವಸ್ತುಗಳು

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ನೂರಾರು ಬಗೆಯ ಉತ್ಪನ್ನಗಳು

ನೂರಾರು ಬಗೆಯ ಉತ್ಪನ್ನಗಳು

ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ ಎಂದು ಹೇಳಿದರು.

English summary
Artisons Bazar Show Starts In Bengaluru Chitrakala Parishath. Old Kannada Film Actoress Bhavya Inaugurates the Show.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X