ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ?: ಡಿ.ಕೆ. ಶಿವಕುಮಾರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 28: ಹಿಂದಿ ಭಾಷೆಯ ವಿವಾದವು ಪ್ರಾದೇಶಿಕ ಭಾಷೆಗಳ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿದ್ದು, ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದೆ. ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ, ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ. ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ ಇದೆ. ಧ್ವಜ, ಸ್ವಾಭಿಮಾನವಿದೆ ಭಾಷೆ ಎಂದರೆ ಸ್ವಾಭಿಮಾನ ಪ್ರಶ್ನೆಯಾಗಿದೆ ಎಂದರು.

ನಮ್ಮ ನೋಟಿನಲ್ಲಿ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ ಮುದ್ರಣ ಮಾಡಲಾಗಿದೆ. ಈ ನೋಟು ರಾಜ್ಯ ಸೇರಿದಂತೆ ರಾಷ್ಟ್ರದಲ್ಲಿ ಚಲಾವಣೆಯಾಗುತ್ತದೆ.

As a Kannadiga, Our Language Is a Matter of Self-Respect-DK Shivakumar

ಹೀಗಾಗಿ ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದರು. ದೇಶದ ಉತ್ತರ ಭಾಗದಲ್ಲಿ ಹಿಂದಿ ಭಾಷೆ ಮಾತನಾಡುತ್ತಿದ್ದು, ಆ ಭಾಷೆಗೆ ಯಾವ ರೀತಿ ಗೌರವ ನೀಡಬೇಕೋ ಅದನ್ನು ನೀಡಲಾಗುತ್ತಿದೆ. ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರ ಸಚಿವರು ಯಾರಾದರೂ ಈ ಬಗ್ಗೆ ಚರ್ಚೆ ಮಾಡಿದರೆ ಅದಕ್ಕೆ ಉತ್ತರ ನೀಡೋಣ ಎಂದರು.

As a Kannadiga, Our Language Is a Matter of Self-Respect-DK Shivakumar

Recommended Video

Hardik Pandya ಪಂದ್ಯ ಮುಗಿದಾದ ನಂತರ ಹೀಗಾ ಹೇಳೋದು | Oneindia Kannada

ನಮ್ಮ ನೆಲ, ಜಲ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಮೊದಲ ಪ್ರಾತಿನಿಧ್ಯ ಕನ್ನಡ ಭಾಷೆಯಾಗಿರುತ್ತದೆ. ನಂತರ ನಾವು ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕಿನ ಪ್ರಕಾರ ಬೇರೆ ಭಾಷೆಗಳನ್ನು ಬಳಸಬಹುದು. ನಮ್ಮ ಕೆಲವು ಸಂಸದರು ಹಿಂದಿ ಹಾಗೂ ಇಂಗ್ಲಿಷ್ ಭಾಷೆ ತಿಳಿದಿದ್ದರೂ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾರೆ. ನನ್ನ ಸಹೋದರ ಹಲವು ಬಾರಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ವಿರೋಧಪಕ್ಷದ ನಾಯಕರಾಗಿರುವ ಕಾರಣ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದರು.

English summary
KPCC president DK Sivakumar said that The issue of Hindi language is being debated in the country and our country is in many languages
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X