ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

50 ವರ್ಷಗಳಲ್ಲೇ ದಾಖಲೆ ಬರೆದ ಬೆಂಗಳೂರು ಚಳಿ: ಮೇ 14ರವರೆಗೂ ಇದೇ ನಡುಕ

|
Google Oneindia Kannada News

ಬೆಂಗಳೂರು, ಮೇ 13: ಬೆಂಗಳೂರಿನಲ್ಲಿ ಕಳೆದ 50 ವರ್ಷಗಳಲ್ಲೇ ಅತ್ಯಂತ ಚಳಿ ದಿನ ದಾಖಲಾಗಿದ್ದು, ಮೇ ತಿಂಗಳಲ್ಲಿ ಎರಡನೇ ಬಾರಿಗೆ ಚಳಿ ದಿನ ದಾಖಲಿಸಿದೆ. ಗುರುವಾರ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ, ಮಳೆಯಿಂದ ಬೆಂಗಳೂರಿನ ಜನತೆಗೆ ಬೇಸಿಗೆಯಲ್ಲೂ ಮಳೆ, ಚಳಿಗಾಲದ ಅನುಭವವಾಗಿದೆ.

ಮೇ 14, 1972ರಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 22.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು ಈವರೆಗಿನ ದಾಖಲೆಯಾಗಿತ್ತು. ಮೇ ತಿಂಗಳಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ದಾಖಲಾಗುತ್ತದೆ. ಗುರುವಾರ ಸಂಜೆ 5.30ರ ವೇಳೆಗೆ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ಕುಸಿತ ಕಂಡು 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯ ಕನಿಷ್ಠ ತಾಪಮಾನಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ದಾಖಲಾಗಿದ್ದು,19.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಭಾರತೀಯ ಹವಾಮಾನ ಇಲಾಖೆ ದಾಖಲೆ ಪ್ರಕಾರ ಹಿಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ತಾಪಮಾನ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಆಗಿತ್ತು. ಮೇ 11 ರಂದು ನಗರದಲ್ಲಿ 24.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು, ಇದು ಕಳೆದ ಹತ್ತು ವರ್ಷದಲ್ಲೇ ಬೆಂಗಳೂರಿನಲ್ಲಿ ದಾಖಲಾದ ಚಳಿ ದಿನವಾಗಿತ್ತು.

Asani cyclone effect: Bengaluru sees second coldest May day in 50 years

ಅಸಾನಿ ಚಂಡಮಾರುತದ ಪ್ರಭಾವವೇ ಬೆಂಗಳೂರಿನಲ್ಲಿ ತಾಪಮಾನ ಕಡಿಮೆಯಾಗಲು ಕಾರಣ ಎಂದು ಭಾರತೀಯ ಹವಾಮಾನ ಇಲಾಖೆಗಳು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಅಸನಿ ಚಂಡಮಾರುತ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

"ಆಂಧ್ರ ಪ್ರದೇಶದ ಕರಾವಳಿ ಭಾಗದ ಮೇಲೆ ಅಪ್ಪಳಿಸಿದ ಅಸಾನಿ ಚಂಡಮಾರುತ ದುರ್ಬಲಗೊಳ್ಳುತ್ತಿದ್ದು, 31.48 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಅಸಾನಿ ಚಂಡ ಮಾರುತದ ಪ್ರಭಾವದಿಂದಾಗಿ ದೂರದ ಪ್ರದೇಶಗಳಲ್ಲೂ ವಾತಾವರಣದಲ್ಲಿ ಬದಲಾವಣೆಯಾಗಿದೆ" ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ಹೇಳಿದರು.

Asani cyclone effect: Bengaluru sees second coldest May day in 50 years

ಮೋಡ ಕವಿದ ವಾತಾವರಣ ಮತ್ತು ಚಳಿ ಗಾಳಿ ಬೀಸಿದ ಪರಿಣಾಮ ಈಶಾನ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳಲ್ಲಿ ತಾಪಮಾನ ಕಡಿಮೆಯಾಗಿದ್ದು, ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 14ರವರೆಗೂ ಚಳಿ ವಾತಾವರಣ:
ಹವಾಮಾನ ಇಲಾಖೆ ಪ್ರಕಾರ ಮೇ 14ರವರೆಗೆ ಇದೇ ವಾತಾವರಣ ಮುಂದುವರೆಯಲಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ನಂತರ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Recommended Video

ನಲ್ಪಾಡ್ vs ರಮ್ಯಾ ಕೋಲ್ಡ್ ವಾರ್ ಶುರು! | Oneindia Kannada

English summary
Thursday was the second coldest day in May for Bengaluru in the last 50 years as the city’s maximum temperature dropped by a staggering 11 degrees Celsius.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X