• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಸರ್ಕಾರಕ್ಕೆ ವಿವಿಧ ಬೇಡಿಕೆ ಇಟ್ಟ ಆಶಾ ಕಾರ್ಯಕರ್ತೆಯರು

|
Google Oneindia Kannada News

ಬೆಂಗಳೂರು, ಜೂನ್ 29: ಕೊರೊನಾ ವೈರಸ್‌ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಇದೇ ವೇಳೆ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ, 42 ಸಾವಿರ ಆಶಾ ಕಾರ್ಯಕರ್ತೆಯರು ಸಾಮೂಹಿಕ ರಾಜೀನಾಮೆಗೆ ನೀಡುವುದಾಗಿ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ವಿವಿಧ ಹೀಗಿವೆ

* ಈ ಹಿಂದಿನ ಸರ್ಕಾರ ಬಾಕಿ ಉಳಿಸಿಕೊಂಡಿದ್ದ ವೇತನವನ್ನು ನೀಡಬೇಕು

* ತಮ್ಮ ವೇತನವನ್ನ 12 ಸಾವಿರಕ್ಕೆ ನಿಗದಿ ಮಾಡಬೇಕು

* ಸರ್ವೆ, ಹೆರಿಗೆ ಹೀಗೆ ಇನ್ನಿತರ ಕೆಲಸಗಳಿಗೆ ಹೆಚ್ಚುವರಿ ಹಣ ನೀಡಲಾಗುತ್ತಿತ್ತು. ಆದರೆ, ಇದನ್ನ ಈಗ ನಿಲ್ಲಿಸಲಾಗಿದೆ. ಈ ವೇತನವನ್ನೂ ನೀಡಬೇಕು

* ಕೊರೊನಾ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ನೀಡಬೇಕು.

ಈ ನಾಲ್ಕು ಪ್ರಮುಖ ಬೇಡಿಕೆಗಳನ್ನು ಒಳಗೊಂಡಂತೆ ಕೆಲವು ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದೆ ಇಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು AIUTUC (ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್) ವತಿಯಿಂದ ಹೋರಾಟ ಮಾಡಲಾಗುತ್ತಿದೆ.

ಜುಲೈ 10ರೊಳಗೆ ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದಿರುವ ಅವರು, ಇಲ್ಲದಿದ್ದರೆ ರಾಜ್ಯಾದ್ಯಂತ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದಿದ್ದಾರೆ.

ನಾಳೆ (ಮಂಗಳವಾರ) ರಾಜ್ಯಾದ್ಯಂತ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಗುತ್ತಿದೆ.

English summary
Asha workers have told the government to fulfill some of their demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X