ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಡಿಕೆ ಶಿವಕುಮಾರ್ ಬೆಂಬಲ!
ಬೆಂಗಳೂರು, ಜುಲೈ 8: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆಶಾ ಕಾರ್ಯಕರ್ತೆಯರು ಜುಲೈ 10ರಿಂದ ತಮ್ಮ ಕೆಲಸ ಸ್ಥಗಿತಗೊಳಿಸಲಿದ್ದಾರೆ.
ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ಮಾಡಲು ತೀರ್ಮಾನಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ನಿವೇದಿಸಿಕೊಂಡರು.@KPCCPresident @DKShivakumar #Ashaworkers @BSYBJP pic.twitter.com/SlNX9stkhZ
— oneindiakannada (@OneindiaKannada) July 8, 2020
ಈ ವೇಳೆ ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿರುವ ಡಿ.ಕೆ ಶಿವಕುಮಾರ್ ನಿಮಗೆ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೂ ಮುಷ್ಕರ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದು, ರಾಜ್ಯಾದ್ಯಂತ ಸುಮಾರು 45 ಸಾವಿರಕ್ಕೂ ಹೆಚ್ಚು ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.












Click it and Unblock the Notifications