ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆಪ್ಟೆಂಬರ್ 23 ರಂದು ಆಶಾ ಕಾರ್ಯಕರ್ತೆಯರಿಂದ ರಾಜ್ಯಮಟ್ಟದ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 22: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಸೆ.23 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯಮಟ್ಟದ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ತಮಗೆ ನೀಡುತ್ತಿರುವ ಗೌರವ ಧನವನ್ನು 12 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

1786 ಆಶಾ ಕಾರ್ಯಕರ್ತೆಯರ ನೇಮಕಕ್ಕೆ ಒಪ್ಪಿಗೆ1786 ಆಶಾ ಕಾರ್ಯಕರ್ತೆಯರ ನೇಮಕಕ್ಕೆ ಒಪ್ಪಿಗೆ

ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಮತ್ತು ಮೈಸೂರಿನಿಂದ ಸುಮಾರು 500-600 ಆಶಾ ಕಾರ್ಯಕರ್ತೆಯರು ಬುಧವಾರ ನಡೆಯುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೋಳ್ಳಲಿದ್ದಾರೆ ಎಂದು ಎಐಟಿಯುಸಿ ಸದಸ್ಯ ದುರ್ಗೇಶ್ ಪ್ರಕಾಶ್ ತಿಳಿಸಿದ್ದಾರೆ.

Asha Workers To Protest In Bengaluru On Sep 23, Demanding Hike In Minimum Wage

ಮೇಲಿಂದ ಮೇಲೆ ಎಲ್ಲ ಆರೋಗ್ಯ ಎಲ್ಲ ಆರೋಗ್ಯ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಿಸಬೇಕು. ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಜರ್‌ಗಳನ್ನು ಸಮರ್ಪಕವಾಗಿ ನೀಡಬೇಕು. ಈಗಾಗಲೇ ಘೋಷಿಸಿರುವ 3 ಸಾವಿರ ರು. ಕೋವಿಡ್ ವಿಶೇಷ ಪ್ರೋತ್ಸಾಹಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು ಎಂಬುವು ಆಶಾ ಕಾರ್ಯಕರ್ತೆಯರ ಬೇಡಿಕೆಗಳಾಗಿವೆ.

ಕೊರೊನಾ ವಾರಿಯರ್ಸ್ ಎಂದೇ ಕರೆಸಿಕೊಳ್ಳುತ್ತಿರುವ ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಡಿಮೆ ಪ್ರೋತ್ಸಾಹ ಧನ ಪಡೆದು ಕೆಲಸ ಮಾಡುತ್ತಿದ್ದಾರೆ.

Recommended Video

RCB ಮೇಲೆ ಯಾಕಿಷ್ಟು ಕೋಪ ಗುರು | Oneindia Kannada

ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಮುಷ್ಕರ ಸ್ಥಗಿತಗೊಳಿಸಿ 50 ದಿನ ಕಳೆದರೂ ಸರ್ಕಾರದ ಕಡೆಯಿಂದ ಯಾವ ಅಧಿಕೃತ ಘೋಷಣೆಯೂ ಬಂದಿಲ್ಲ. ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಸರ್ಕಾರ ಏನನ್ನೂ ಘೋಷಣೆ ಮಾಡಿಲ್ಲ ಇದು ಅವರ ಆಕ್ರೋಶಕ್ಕೆ ಕಾರಣವಾಗಿದೆ.

English summary
Asha health workers are on the warpath again. The devastating coronavirus outbreak and ‘empty promises’ have pushed this all-female army to breaking point.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X