ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನ

|
Google Oneindia Kannada News

ಬೆಂಗಳೂರು, ಸೆ. 18: ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ(55) ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಅವರು ಕೆಲವು ದಿನಗಳಿಂದ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ 10.31ಕ್ಕೆ ಕೊನೆಯುಸಿರೆಳೆದಿದ್ದಾರೆ.

ಕೋವಿಡ್ ಸೋಂಕು ತಗುಲಿದ್ದ ಅವರಿಗೆ ನ್ಯುಮೋನಿಯಾ ಕೂಡಾ ಬಾಧಿಸುತ್ತಿತ್ತು ಸೆಪ್ಟೆಂಬರ್‌ 2ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಮನೀಶ್ ರೈ ಹೇಳಿದ್ದಾರೆ.

ಅಶೋಕ್ ಗಸ್ತಿ ನಿಧನಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Ashok Gasti Rajya Sabha Member Passes Away

ರಾಯಚೂರು ಮೂಲದ ಅಶೋಕ್‌ ಗಸ್ತಿ ಜೂನ್‌ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ರಾಜ್ಯಸಭಾ ಸದಸ್ಯರಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವರಿಗೆ ಕೋವಿಡ್ ಅಡ್ಡಿ ಪಡಿಸಿತ್ತು.

ಅಶೋಕ್‌ ಗಸ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಜುಲೈ 22ರಂದು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದರು. ತಳಮಟ್ಟದಿಂದ ಬಿಜೆಪಿ ಪಕ್ಷ ಸಂಘಟನೆಗೆ ಕೆಲಸ ಮಾಡಿದ್ದ ಅಶೋಕ್ ಗಸ್ತಿ ಅವರನ್ನು ರಾಜ್ಯಸಭೆಗೆ ಪಕ್ಷ ಆಯ್ಕೆ ಮಾಡಿತ್ತು.

Recommended Video

Nepalದ ಹೊಸ ಪುಸ್ತಕಗಳಳಲ್ಲಿ ಭಾರತವನ್ನು ಸೇರಿಸಿಕೊಂಡ ಭೂಪಟ | Oneindia Kannada

ರಾಜ್ಯಸಭಾ ಟಿಕೆಟ್ ಪಡೆಯಲು ಭಾರಿ ಪೈಪೋಟಿ ನಡೆದಿತ್ತು. ಅಂತಹ ಸಂದರ್ಭದಲ್ಲಿ ಹೈಕಮಾಂಡ್ ಅಶೋಕ್ ಗಸ್ತಿ ಅವರ ಹೆಸರು ಘೋಷಣೆ ಮಾಡಿದ್ದು ಹಲವರ ಅಚ್ಚರಿಗೆ ಕಾರಣವಾಗಿತ್ತು. ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗಬೇಕು ಎಂಬ ಸಂದೇಶವನ್ನು ಪಕ್ಷ ರವಾನೆ ಮಾಡಿತ್ತು.

English summary
Ashok Gasti Member of Parliament from Rajya Sabha passed away at 10:31 pm on Thursday(Sept 17) He was 55 years old. He was diagnosed with severe COVID19 pneumonia said Dr Manish Rai, Hospital Director
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X