ಮಾಜಿ ಸಿಎಂ ದೊಡ್ಡವ್ರಾ ಡಿಸಿಎಂ ದೊಡ್ಡವ್ರಾ?
ಬೆಂಗಳೂರು, ಜ.21 : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಲ್ಲಿ ಪ್ರಬಲ ಪೈಪೋಟಿ ಆರಂಭವಾಗಿದೆ. ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಇನ್ನೊಬ್ಬ ಆಕಾಂಕ್ಷಿ ಮಾಜಿ ಡಿಸಿಎಂ ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಮಾಜಿ ಸಿಎಂ ಡಿವಿ ಸದಾನಂದ ಗೌಡ "ಮಾಜಿ ಸಿಎಂಗಿಂತ ಮಾಜಿ ಡಿಸಿಎಂ ದೊಡ್ಡವರಲ್ಲ" ಎಂದು ಹೇಳುವ ಮೂಲಕ ತಾವು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂಬ ಸಂದೇಶ ಕಳುಹಿಸಿದ್ದಾರೆ. ತಾವು ಯಾವುದೇ ಕ್ಷೇತ್ರದಿಂದಲೂ ಸ್ಪರ್ಧಿಸಲು ಸಿದ್ಧವಿರುವುದಾಗಿ ಅವರು ತಿಳಿಸಿದ್ದಾರೆ.

ಪಕ್ಷ ಸಂಘಟನೆಗಾಗಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ರಾಜ್ಯಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ಆದ್ದರಿಂದ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಇದರಲ್ಲಿ ತಪ್ಪೇನು ಇಲ್ಲ ಎಂದು ಗೌಡರು ವಿವರಣೆ ನೀಡಿದ್ದಾರೆ. ಹಿರಿತನದ ಆಧಾರದಲ್ಲಿಯೂ ನನಗೆ ಟಿಕೆಟ್ ಲಭಿಸಬೇಕೆಂದು ಅವರು ಹೇಳಿದ್ದಾರೆ. [ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸುವೆ : ಡಿವಿಎಸ್]
ಡಿವಿ ಸದಾನಂದ ಗೌಡರು ಹೊರಗಿನಿಂದ ಬಂದವರು ಅವರಿಗೆ ಟಿಕೆಟ್ ನೀಡಬಾರದು ತಾವು ಬೆಂಗಳೂರಿನವನು ನಮಗೆ ಟಿಕೆಟ್ ನೀಡಬಹುದು ಎಂದು ಅಶೋಕ್ ಕೆಲವು ದಿನಗಳ ಹಿಂದೆ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಗೌಡರು, ವೆಂಕಯ್ಯ ನಾಯ್ಡು, ಸುಷ್ಮಾ ಸ್ವರಾಜ್ ಕರ್ನಾಟಕದವರೆ? ಅವರು ರಾಜ್ಯದಲ್ಲಿ ಸ್ಪರ್ಧಿಸಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕ್ಷೇತದ ಹಾಲಿ ಸಂಸದ ಡಿಬಿ ಚಂದ್ರೇಗೌಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಆದ್ದರಿಂದ ಇಬ್ಬರು ಒಕ್ಕಲಿಗ ನಾಯಕರ ನಡುವೆ ಕ್ಷೇತ್ರದ ಟಿಕೆಟ್ ಗಾರಿ ಭಾರಿ ಪೈಪೋಟಿ ಆರಂಭವಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಪಕ್ಷದ ನಾಯಕರ ಪಾಲಿಗೂ ಸವಾಲಾಗಿದೆ. [ಬಿಜೆಪಿಗೆ ಕಗ್ಗಂಟಾಗಿರುವ ಕ್ಷೇತ್ರ]
ಬಿಜೆಪಿ ನಾಯಕರು ತಯಾರಿಸಿ ಕೇಂದ್ರ ನಾಯಕರಿಗೆ ಕಳುಹಿಸಿರುವ ಪ್ರಥಮ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಗಳನ್ನು ಸೂಚಿಸಿಲ್ಲ. ಆರ್ ಅಶೋಕ್ ಮತ್ತು ಡಿವಿ ಸದಾನಂದ ಗೌಡರ ನಡುವೆ ಕೆಜೆಪಿಯಿಂದ ಮಾತೃ ಪಕ್ಷಕ್ಕೆ ಮರಳಿರುವ ಶೋಭಾ ಕರಂದ್ಲಾಜೆ ಅವರು ಉತ್ತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಆದ್ದರಿಂದ ಬೆಂಗಳೂರು ಉತ್ತರ ಬಿಜೆಪಿ ಪಾಲಿಗೆ ಬಿಸಿತುಪ್ಪವಾಗಿದೆ. [ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಅಂದಹಾಗೆ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಯಶವಂತಪುರ, ಮಹಾಲಕ್ಷ್ಮೀ ಲೇ ಔಟ್, ಕೆ.ಆರ್.ಪುರಂ, ಹೆಬ್ಬಾಳ, ಬ್ಯಾಟರಾಯನಪುರ, ಮಲ್ಲೇಶ್ವರಂ, ಪುಲಕೇಶಿ ನಗರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತದೆ.
@OneindiaKannada anyway this time both small n Big will loose...
— Vivekananda D.V (@vivekananda_d_v) January 21, 2014 











Click it and Unblock the Notifications