RCB Stampede: ಕಾಲ್ತುಳಿತದಲ್ಲಿ ಮೃತಪಟ್ಟ ಆರ್‌ಸಿಬಿ ಫ್ಯಾನ್ಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿ

ಆರ್‌ಸಿಬಿ (RCB) ತಂಡ ಐಪಿಎಲ್‌ ಕಪ್‌ ಗೆದ್ದಿರುವ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಅದ್ಧೂರಿ ಸಂಭ್ರಮಾಚರಣೆ ವೇಳೆ ದೊಡ್ಡ ದುರಂತವೇ ನಡೆದು ಹೋಗಿದೆ. ಆರ್‌ಸಿಬಿ ಆಟಗಾರರನ್ನು ನೋಡಲು ಜನಸ್ತೋಮವೇ ಹರಿದುಬಂದ ಹಿನ್ನೆಲೆ ಕಾಲ್ತುಳಿತ ಸಂಭವಿಸಿ, ಹಲವರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡಿ, ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದ್ದಾರೆ.

ಐಪಿಎಲ್ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ. ಕನ್ನಡಿಗರ ಜನಪ್ರಿಯ ಆರ್‌ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ, ಅಭಿನಂದನಾ ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣ ಎಂದು ಆರೋಪ ಮಾಡಿದ್ದಾರೆ.

Ashoka Urges 25 lakh Rupees Compensation For Death During RCB Celebration Stampede

ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ, ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದೆ ಇರುವುದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ ಎಂದು ದೂರಿದ್ದಾರೆ.

ವಾರಾಂತ್ಯದಲ್ಲಿ ಕಾರ್ಯಕ್ರಮ ಮಾಡಬಹುದಿತ್ತು

ಚಾಂಪಿಯನ್ ಆರ್‌ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನೂ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ. ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು. ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ ಎಂದು ಅಶೋಕ್‌ ಹೇಳಿದ್ದಾರೆ.

ನಿನ್ನೆ ರಾತ್ರಿಯಿಂದಲೂ ಬೆಂಗಳೂರಿನೆಲ್ಲೆಡೆ ಸಂಭ್ರಮಾಚರಣೆ ಜೋರಾದ ಹಿನ್ನೆಲೆ ಫ್ಯಾನ್ಸ್‌ಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಇಂದು ಕೂಡ ಬೆಂಗಳೂರಿನಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಪೊಲೀಸರು ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ರಾಜ್ಯ ಸರ್ಕಾರ ಕೂಡ ಈ ಕಾರ್ಯಕ್ರಮ ಆಯೋಜನೆ ಬಗ್ಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕಿತ್ತು ಎಂಬ ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಸಂಭ್ರಮದ ಬೆನ್ನಲ್ಲೇ ಸೂತಕದ ವಾತಾವರಣ ನಿರ್ಮಾಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+