ಇಂದು ಓಕಳಿಪುರದ ಅಷ್ಟಪಥ ಎರಡನೇ ಹಂತದ ಲೋಕಾರ್ಪಣೆ

ಬೆಂಗಳೂರು ಮಾರ್ಚ್ 13: ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಕಾರಿಡಾರ್‌ನ ಎರಡನೇ ಹಂತದ ಲೋಕಾರ್ಪಣೆ ಬುಧವಾರ ನೆರವೇರಲಿದೆ. ಈ ಕಾರಿಡಾರ್‌ ಗಾಂಧಿನಗರ, ಮೆಜೆಸ್ಟಿಕ್, ಬೆಂಗಳೂರು ನಗರ ರೈಲ್ವೆ ನಿಲ್ದಾಣ, ಮಲ್ಲೇಶ್ವರ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ ಹಾಗೂ ಮಾಗಡಿ ರಸ್ತೆ ಹೀಗೆ ಬೆಂಗಳೂರು ನಗರ, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಲಿದೆ.

ಪ್ರಮುಖ ವಸತಿ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳ ನಡುವಿನ ಏಕೈಕ ಕೊಂಡಿಯಾಗಲಿದೆ. ಯೋಜನೆಗೆ ಭೂಸ್ವಾಧೀನಕ್ಕಾಗಿ 165.65 ಕೋಟಿ ವೆಚ್ಚ ಮಾಡಲಾಗಿದೆ. ರೈಲ್ವೆ ಕೆಳಸೇತುವೆಗಾಗಿ ನಾಲ್ಕು ಆರ್‌ಸಿಸಿ ಬಾಕ್ಸ್‌ಗಳ ಅಳವಡಿಕೆ ಮತ್ತು ಪಾದಚಾರಿಗಳಿಗಾಗಿ ಪ್ರತ್ಯೇಕ ಎರಡು ಆರ್‌ಸಿಸಿ ಬಾಕ್ಸ್‌ ನಿರ್ಮಾಣವನ್ನು 87.60 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ.

Ashtapatha second phase of Okalipura will be inaugurated today

ಬಿಬಿಎಂಪಿ ವತಿಯಿಂದ ಎರಡು ಫ್ಲೈಓವರ್‌ ಹಾಗೂ ಒಂದು ಕೆಳಸೇತುವೆಯ ನಿರ್ಮಾಣ, ಪಾದಚಾರಿ ಮೇಲು ಸೇತುವೆ ನಿರ್ಮಾಣ, ನೆಲ ಮಟ್ಟದ ರಸ್ತೆಗಳು, ನೆಲಮಟ್ಟದಲ್ಲಿ ಸಣ್ಣ ಸಣ್ಣ ದ್ವೀಪಗಳನ್ನು ನಿರ್ಮಿಸಿ ಸಸ್ಯ, ತೋಟಗಾರಿಕೆ ಕೈಗೊಳ್ಳಲಾಗಿದೆ. ಇದಕ್ಕಾಗಿ 102.84 ಕೋಟಿ ವೆಚ್ಚ ಮಾಡಲಾಗಿದೆ.

ಸರಿ ಸುಮಾರು ಕಳೆದೊಂದು ದಶಕದಿಂದ ನಡೆಯುತ್ತಿದ್ದ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಸಿಗ್ನಲ್ ಮುಕ್ತ ಕಾರಿಡಾರ್‌ ಕಾಮಗಾರಿ ಮುಕ್ತಾಯಗೊಂಡಿದೆ. ಮಜೆಸ್ಟಿಕ್‌ ಸಮೀಪದ ಓಕಳಿಪುರ ಜಂಕ್ಷನ್‌ನಲ್ಲಿ ಕಳೆದ 2013-14ರಲ್ಲಿ ಎಂಟು ಲೈನ್‌ನ ಸಿಗ್ನಲ್ ಫ್ರೀ ಕಾರಿಡಾರ್‌ ನಿರ್ಮಾಣ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿತ್ತು.

ಇದೇ ಸಂದರ್ಭದಲ್ಲಿ ಸುಭಾಷ್‌ ನಗರದ ಕೆಂಪೇಗೌಡ ಬಸ್‌ ನಿಲ್ದಾಣದ ಬಳಿ ನಿರ್ಮಾಣವಾಗಿರುವ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಕೂಡ ಲೋಕಾರ್ಪಣೆ ಮಾಡಲಾಗುತ್ತಿದೆ. ಒಟ್ಟು ಮೊತ್ತ 2.65ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ. ಜಂಕ್ಷನ್‌ ಅಭಿವೃದ್ಧಿಗೆ 1.40 ಕೋಟಿ, ಕಂಚಿನ ಪ್ರತಿಮೆಗೆ 1.25 ಕೋಟಿ ವೆಚ್ಚವಾಗಿದೆ. ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆಯ ಎತ್ತರ 15 ಅಡಿಗಳು ಇದೆ.

ಈ ಜಂಕ್ಷನ್‌ನಲ್ಲಿ ಒಟ್ಟು ನಾಲ್ಕು ರಸ್ತೆಗಳು ಹಾದು ಹೋಗುತ್ತಿದ್ದು, ಮುಖ್ಯವಾಗಿ ರಾಜಾಜಿನಗರ ಹಾಗೂ ಮಲ್ಲೇಶ್ವರ ಕಡೆಗೆ ಸಂಪರ್ಕ ಕಲ್ಪಿಸಿಕೊಡುತ್ತದೆ. ಜಂಕ್ಷನ್‌ನಲ್ಲಿ ಪಾದಚಾರಿಗಳು ಹಾಗೂ ಬಸ್‌ ತಂಗುದಾಣಕ್ಕೆ ಬರುವ ಪ್ರಯಾಣಿಕರು ವಿಶ್ರಮಿಸಲು ವಿಶೇಷವಾಗಿ ವಿನ್ಯಾಸಗೊಳಿಸಿದ ಸುಸಜ್ಜಿತ ಆಸನಗಳ ವ್ಯವಸ್ಥೆ, ಮನರಂಜಿಸುವ ಕಾರಂಜಿಗಳು, ಆಕರ್ಷಕ ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ಜಂಕ್ಷನ್‌ ಸುತ್ತಮುತ್ತ ಹಸಿರು ಗಿಡಗಳನ್ನು ನೆಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+