ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗ್ರಾಮಾಂತರದಿಂದ ಅಶ್ವತ್ಥ್ ನಾರಾಯಣ್ ಕಣಕ್ಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 26: ಬಹಳ ಕುತೂಹಲ ಕೆರಳಿಸಿದ್ದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶ್ವತ್ಥ್ ನಾರಾಯಣ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ರಾಜ್ಯ ಬಿಜೆಪಿ ವಕ್ತಾರ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಠ್ ನಾರಾಯಣ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಸೋಮವಾರ ತಡರಾತ್ರಿ ಕೇಂದ್ರ ಚುನಾವಣಾ ಆಯ್ಕೆ ಸಮಿತಿ ಘೋಷಿಸಿತು.ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ.ಸುರೇಶ್ ಅವರು ಸ್ಪರ್ಧಿಸಿದ್ದಾರೆ.

ತೇಜಸ್ವಿನಿಗೆ ತಪ್ಪಿದ ಟಿಕೆಟ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯತೇಜಸ್ವಿನಿಗೆ ತಪ್ಪಿದ ಟಿಕೆಟ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ

ಕರ್ನಾಟಕದಲ್ಲಿ ಏಪ್ರಿಲ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರವೇ ಕೊನೇ ದಿನವಾಗಿದ್ದು, ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

Ashwath Narain to contest as BJP candidate from Bagnalore Rural

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಕಣಕ್ಕಿಳಿಸುತ್ತಾರೆ ಎಂಬ ನಿರೀಕ್ಷೆ ಸುಳ್ಳಾಗದ್ದು, ಈ ಕ್ಷೇತ್ರದಿಂದ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

English summary
Lok Sabha elections 2019: Ashwath Narain to contest from BJP candidate from Bagnalore Rural Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X