ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ವ್ಯವಸ್ಥೆ ಹೇಗಿದೆ?

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ಕೊರೊನಾ ಎರಡನೇ ಅಲೆಯಿಂದ ನಗರದ ಜನರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭೇಟಿ ನೀಡಿದ್ದು, ಜನರ ಸ್ಯಾಂಪಲ್‌ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ಫಲಿತಾಂಶ ಕೊಡಬೇಕು ಎಂದು ಸೂಚಿಸಿದರು.

Recommended Video

ಬೆಂಗಳೂರಿನ ಆಸ್ಪತ್ರೆಗಳಲ್ಲಿ Corona ಸೋಂಕಿತರಿಗೆ ವ್ಯವಸ್ಥೆ ಹೇಗಿದೆ? | Oneindia Kannada

ಬುಧವಾರ ಬೆಳಿಗ್ಗೆಯಿಂದಲೇ ಮಲ್ಲೇಶ್ವರದ ಕೆ.ಸಿ ಜನರಲ್‌ ಆಸ್ಪತ್ರೆ, ರಾಜಾಜಿನಗರದ ಇಎಸ್‌ಐ, ಲೈಫ್‌ಸೆಲ್ ಲ್ಯಾಬ್, ವಿಕ್ಟೋರಿಯಾ ಹಾಗೂ ಕಿದ್ವಾಯಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು; ಅಲ್ಲಿನ ಕೋವಿಡ್ ವ್ಯವಸ್ಥೆ, ಚಿಕಿತ್ಸೆ, ಲ್ಯಾಬ್, ಲಸಿಕೆ ಇತ್ಯಾದಿ ಅಂಶಗಳನ್ನು ಪರಿಶೀಲನೆ ನಡೆಸಿದರು. ಪ್ರತಿ ದಿನವೂ ಲ್ಯಾಬ್‌ಗಳಿಗೆ ಕನಿಷ್ಠ 3 ಬ್ಯಾಚ್‌ಗಳಲ್ಲಿ ಮಾದರಿಗಳನ್ನು ಕಳಿಸಬೇಕು ಹಾಗೂ ಆ ಮಾದರಿ ಸ್ವೀಕರಿಸಿದ 24 ಗಂಟೆಯೊಳಗೆ ಲ್ಯಾಬ್‌ಗಳು ಫಲಿತಾಂಶ ಕೊಡಬೇಕು ಎಂದು ಆಸ್ಪತ್ರೆಗಳ ಹಿರಿಯ ವೈದ್ಯಾಧಿಕಾರಿಗಳು, ಆಡಳಿತ ವರ್ಗದವರಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಕೊರೊನಾ ಕರ್ಫ್ಯೂ; ಪೊಲೀಸರಿಗೆ ಗೃಹಸಚಿವರ ಕಟ್ಟುನಿಟ್ಟಿನ ಸೂಚನೆಕೊರೊನಾ ಕರ್ಫ್ಯೂ; ಪೊಲೀಸರಿಗೆ ಗೃಹಸಚಿವರ ಕಟ್ಟುನಿಟ್ಟಿನ ಸೂಚನೆ

ಗಂಟಲ ದ್ರವ ಮಾದರಿ ಕೊಟ್ಟ 24 ಗಂಟೆಯೊಳಗೆ ಫಲಿತಾಂಶ ಸಿಕ್ಕರೆ ಸೋಂಕಿಗೆ ಒಳಗಾದವರು ತಕ್ಷಣವೇ ಚಿಕಿತ್ಸೆ ಪಡೆಯಬಹುದು. ಆಗ ಜೀವಕ್ಕೆ ಹಾನಿಯಾಗುವುದಿಲ್ಲ ಎಂದು ಡಿಸಿಎಂ ಮನವರಿಕೆ ಮಾಡಿಕೊಟ್ಟರು. ಇದೇ ಸಂದರ್ಭ ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆಗೆ ಏನು ವ್ಯವಸ್ಥೆ ಇದೆ ಎಂದು ವಿವರಿಸಿದರು. ಮುಂದೆ ಓದಿ...

 ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ

ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಕೋವಿಡ್ ಮೆಡಿಕಲ್ ಕಿಟ್‌ ಪೂರೈಕೆಯಲ್ಲಿ ಕೊರತೆ ಇದೆ. ಖರೀದಿಯಲ್ಲಿ ಕೊಂಚ ಏರುಪೇರಾಗಿದೆ. ಅದೆಲ್ಲವನ್ನೂ ಸರಿಪಡಿಸಲಾಗುತ್ತದೆ ಎಂದ ಅವರು, ಇಲ್ಲಿ ಆಮ್ಲಜನಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ 8 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕವಿದೆ. ನಿತ್ಯವೂ 4 ಸಾವಿರ ಲೀಟರ್‌ ಬಳಕೆ ಆಗುತ್ತಿದೆ ಎಂದು ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ.ವೆಂಕಟೇಶಯ್ಯ ಮಾಹಿತಿ ನೀಡಿದರು.

ಸೋಂಕು ಬಂದಾಗ ಜನರು ನಿರ್ದಿಷ್ಟ ಆಸ್ಪತ್ರೆಯೇ ಬೇಕು ಅಂತ ಹುಡುಕಬಾರದು. ಕೆ.ಸಿ ಜನರಲ್‌ನಲ್ಲಿ 120 ವೆಂಟಿಲೇಟರ್ ಇದೆ. 450 ಬೆಡ್‌ಗಳಿವೆ, ಅದರಲ್ಲಿ 180ಕ್ಕೂ ಹೆಚ್ಚು ಹಾಸಿಗೆಗಳನ್ನು ಕೋವಿಡ್ʼಗೆ ಮೀಸಲಿಡಲಾಗಿದೆ. ಇನ್ನೂ 100 ಬೆಡ್ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದರು.

 ಇಎಸ್‌ಐನಲ್ಲಿ ಹಾಸಿಗೆ ಲಭ್ಯವಿದೆ

ಇಎಸ್‌ಐನಲ್ಲಿ ಹಾಸಿಗೆ ಲಭ್ಯವಿದೆ

ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ 420 ಹಾಸಿಗೆಗಳಿದ್ದು, ಅವುಗಳಲ್ಲಿ ಕೋವಿಡ್ ಸೋಂಕಿತರಿಗೆ 120 ಬೆಡ್‌ ಮೀಸಲಿಡಲಾಗಿದೆ. ಇನ್ನೂ 60 ಹಾಸಿಗೆ ಮೀಸಲು ಇಡಲು ಸೂಚಿಸಲಾಯಿತು. ಆಸ್ಪತ್ರೆಗೆ ಆರ್‌ಎನ್‌ಎ ಎಕ್ಸ್‌ಟ್ರ್ಯಾಕ್‌ ಮಿಷನ್‌ ಹಾಗೂ ವೆಂಟಿಲೇಟರ್‌ಗೆ ಅಳವಡಿಸಲಾಗುವ ಯೂಮಿಡಿಫಯರ್ ಯಂತ್ರದ ಅಗತ್ಯ ಇದ್ದು, ಅವುಗಳನ್ನು ಶೀಘ್ರವೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಕೊರೊನಾ ಚಿಂತಾಜನಕ ಸ್ಥಿತಿಯಲ್ಲಿ ರಾಜ್ಯ: ಸರಕಾರಕ್ಕೆ ಎಚ್ಡಿಕೆ 7 ಪ್ರಶ್ನೆಗಳುಕೊರೊನಾ ಚಿಂತಾಜನಕ ಸ್ಥಿತಿಯಲ್ಲಿ ರಾಜ್ಯ: ಸರಕಾರಕ್ಕೆ ಎಚ್ಡಿಕೆ 7 ಪ್ರಶ್ನೆಗಳು

 ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 750 ಹಾಸಿಗೆ

ಈ ಆಸ್ಪತ್ರೆಯಲ್ಲಿ 750 ಹಾಸಿಗೆಗಳುಳ್ಳ ಕೋವಿಡ್ ಆಸ್ಪತ್ರೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 350 ಬೆಡ್‌ಗಳ ಆಸ್ಪತ್ರೆ ಇದ್ದು, ಉಳಿದ 400 ಹಾಸಿಗೆಗಳನ್ನು ದಿನಕ್ಕೆ 50 ಬೆಡ್‌ನಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲೇ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗುತ್ತಿದೆ. ಈಗಾಗಲೇ ಇಲ್ಲಿ 50 ವೆಂಟಿಲೇಟರ್‌ಗಳಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

 ಎಲ್ಲ ಚಿತಾಗಾರಗಳಲ್ಲಿ ಕೋವಿಡ್‌ ಮೃತರ ಅಂತ್ಯಕ್ರಿಯೆ

ಎಲ್ಲ ಚಿತಾಗಾರಗಳಲ್ಲಿ ಕೋವಿಡ್‌ ಮೃತರ ಅಂತ್ಯಕ್ರಿಯೆ

"ಬೆಳಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಜತೆ ಮಾತುಕತೆ ನಡೆಸಿದೆ. ಕೆಲ ಆಯ್ದ ಚಿತಾಗಾರಗಳಲ್ಲಿ ಮಾತ್ರ ಕೋವಿಡ್‌ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಕಾರಣಕ್ಕೆ ನಗರದಲ್ಲಿ ಅಂತ್ಯಸಂಸ್ಕಾರಕ್ಕೆ ತೀವ್ರ ಸಮಸ್ಯೆಯಾಗಿತ್ತು. ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ" ಎಂದರು. ಇಂದಿನಿಂದ ನಗರದ ಎಲ್ಲ 13 ಚಿತಾಗಾರಗಳಲ್ಲೂ ಕೋವಿಡ್‌ ಮೃತರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು. ಇನ್ನು ಈ ಸಮಸ್ಯೆ ಉಂಟಾಗುವುದಿಲ್ಲ. ಮೃತರ ಗೌರವಯುತ ಅಂತ್ಯಕ್ರಿಯೆಗೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

English summary
DCM Ashwath Narayan visited several hospitals in bengaluru and examined facilities for covid patients,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X