ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೂರು ನೀಡಲು ಬಂದ ಮಹಿಳೆ ಮೇಲೆ ಹಲ್ಲೆ: ಎಎಸ್‌ಐ ರೇಣುಕಯ್ಯ ಅಮಾನತು

|
Google Oneindia Kannada News

ಬೆಂಗಳೂರು, ಜನವರಿ 29: ಯಾರಿಂದಲೋ ತೊಂದರೆಯಾಗಿದೆ ಎಂದು ಅಳಲು ತೋಡಿಕೊಂಡು ದೂರು ನೀಡಲು ಹೋಗಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಎಎಸ್‌ಐ ರೇಣುಕಯ್ಯ ಅವರನ್ನು ಅಮಾನತು ಮಾಡಲಾಗಿದೆ.

ಡಿಸಿಪಿ ಅಣ್ಣಾಮಲೈ ಖಡಕ್ ಆದೇಶ ಹೊರಡಿಸಿದ್ದಾರೆ. ದೂರು ನೀಡಲು ಠಾಣೆಗೆ ಅಳುತ್ತಾ ಬಂದಿದ್ದ ಇಬ್ಬರು ಮಹಿಳೆಯರ ದೂರದನ್ನು ಆಲಿಸದೆ ಅವರನ್ನು ಕತ್ತು ಹಿಡಿದು ಠಾಣೆಯಿಂದ ಹೊರ ಹಾಕಿದ್ದು ಅಲ್ಲದೆ ಅವರ ಮೇಲೆ ರೇಣುಕಯ್ಯ ಹಾಗೂ ಪೇದೆಯೊಬ್ಬರು ಹಲ್ಲೆ ನಡೆಸಿದ್ದರು. ಘಟನೆ ಜನವರಿ 20 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ, ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ.

ASI Renukaiah suspended attack on woman

ಮೈಸೂರು ಎಸ್ಪಿ ಅಮಿತ್ ಸಿಂಗ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ ಮೈಸೂರು ಎಸ್ಪಿ ಅಮಿತ್ ಸಿಂಗ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ

ಅಲ್ಲಿದ್ದವರೇ ವಿಡಿಯೋವನ್ನು ಚಿತ್ರೀಕರಿಸಿದ್ದರು. ಈ ವಿಡಿಯೋ ಬಿಡುಗಡೆಗೊಳ್ಳುತ್ತಿದ್ದಂತೆಯೇ ಡಿಸಿಪಿ ಅಣ್ಣಾಮಲೈ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ತನಿಖೆ ನಡೆಯುತ್ತಿದೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅಲ್ಲಿಯವರೆಗೆ ಅಮನಾತು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸರ ದುರ್ವತನೆಗೆ ಅಣ್ಣಾಮಲೈ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

English summary
A woman came to Kumaraswamy police station to lodge a complaint, But ASI refuses to file FIR and assaulted her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X