ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಷಿಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಉಷಾರಾಣಿಗೆ 15ಲಕ್ಷ ಬಹುಮಾನ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 28: ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಗೇಮ್ಸ್ ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ 15 ಲಕ್ಷ ರು. ಚೆಕ್ ವಿತರಿಸಿದರು.

ಸದಾಶಿವನಗರ ಬಿಡಿಎ ಕ್ವಾಟ್ರಸ್ ನಲ್ಲಿ ಮಂಗಳವಾರ ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

ಏಷ್ಯನ್ ಗೇಮ್ಸ್ 2018: ಸ್ಟೀಪಲ್ ಚೇಸರ್ ಸುಧಾ ಸಿಂಗ್ ಗೆ ಬೆಳ್ಳಿಯ ಪದಕ

ಬಳಿಕ ಮಾತಾನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಕ್ರೀಡಾ ಇಲಾಖೆಯಿಂದ 15 ಲಕ್ಷ ರು. ಚೆಕ್ ನೀಡಲಾಗಿದೆ.

Asian games Kabaddi silver medalist Usharani receives Rs.15 lakhs from state govt

ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಪದಕ ಗೆದ್ದವರಿಗೆ ಪೊಲೀಸ್ ಇಲಾಖೆಯಲ್ಲಿ ಹುದ್ದೆ‌ ನೀಡುವ ನಿಯಮಾವಳಿಯನ್ನು ಸಡಿಲಗೊಳಿಸಲಾಗುತ್ತಿದ್ದು, ಉಷಾರಾಣಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ ಬಿ ದರ್ಜೆ ಹುದ್ದೆ ನೀಡಲಾಗುವುದು ಎಂದು ಭರವಸೆ‌ ನೀಡಿದರು.

ಏಷ್ಯನ್ ಗೇಮ್ಸ್: ಫೈನಲ್ ಪ್ರವೇಶಿಸಿದ ಪಿವಿ ಸಿಂಧು

ಮುಂದಿನ‌ ದಿನಗಳಲ್ಲಿ ಚಿನ್ನ ಗೆಲ್ಲುವಂತಾಗಲಿ ಎಂದು ಆಶಿಸಿದರು. ಇದೇ ಕ್ರೀಡಾಕೂಟದಲ್ಲಿ ಟೆನ್ನಿಸ್‌ ಡಬಲ್ಸ್‌ನಲ್ಲಿ ಚಿನ್ನ ಗೆದ್ದಿರುವ ರೋಹನ್ ಬೋಪಣ್ಣ ಹಾಗೂ ಫೌದ್ ಮಿರ್ಜಾ ಅವರಿಗೂ ಶೀಘ್ರವೇ ಸನ್ಮಾನಿಸಲಾಗುವುದು ಎಂದರು.

ಈ ವೇಳೆ ಸರಕಾರದ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ ನೀಲಮಣಿ ರಾಜು, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಇದ್ದರು.

English summary
Deputy Chief Minister Dr. G.Parameshwar has handed over Rs.15 lakhs cheque as honour to Asian games Kabaddi silver medalist Usharani on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X