Bengaluru: ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆಗೆ ವಿಧಾನಸಭೆಯಲ್ಲಿ ಒಪ್ಪಿಗೆ: ಭೂಮಿಗೆ ಬಂಗಾರದ ಬೆಲೆ ನಿರೀಕ್ಷೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಬದಲಾಗಿದ್ದು. ಇದೀಗ ಬೆಂಗಳೂರಿನ ಆಸ್ತಿದಾರರು ಹಾಗೂ ಬೆಂಗಳೂರಿನ ಸುತ್ತಿಮುತ್ತಲಿನ ಪ್ರದೇಶದವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಮೇಲೆ ಬೆಂಗಳೂರು ಆಡಳಿತ ಹಾಗೂ ವ್ಯಾಪ್ತಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಗಳು ಆಗಲಿವೆ ಎಂದು ರಾಜ್ಯ ಸರ್ಕಾರವು ಹೇಳಿತ್ತು. ಅದರಂತೆ ಇದೀಗ ಮಹತ್ವದ ಬದಲಾವಣೆಗಳು ಆಗುತ್ತಿವೆ.
ಬೆಂಗಳೂರಿನಲ್ಲಿ ಈ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇತ್ತು. ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಐದು ಪಾಲಿಕೆಗಳ ರಚನೆ ಆಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯನ್ನು ಹಿಂದಿನ ಬಿಬಿಎಂಪಿ ವ್ಯಾಪ್ತಿಯ ಆಚೆಗೂ ವಿಸ್ತರಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ 'ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಮಸೂದೆ-2025' ಅನ್ನು ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾಗಿದೆ.

ಈ ಮೂಲಕ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಂತೆ ಬೆಂಗಳೂರಿನ ಹೊರ ವಲಯದಲ್ಲಿ ಇರುವ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಇನ್ನು ವಿಧಾನಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಮಸೂದೆ ಮಂಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಆಡಳಿತಕ್ಕೆ ಜಿಬಿಎ ರಚನೆಯಾದ ಸಂದರ್ಭದಲ್ಲಿಯೇ ಬೆಂಗಳೂರಿಗೆ ಹೊಸ ಪ್ರದೇಶಗಳು ಸೇರ್ಪಡೆ ಆಗುವ ಬಗ್ಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದರು.
ಮೂರು ತಿಂಗಳ ಗಡುವು!
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹೊಸದಾಗಿ ಸೇರಿಸಲಾಗಿರುವ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಪ್ರದೇಶಗಳ ಮರು ವಿಂಗಡಣೆ ಮಾಡುವುದಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಾಲ ಮಿತಿಯನ್ನು ಫಿಕ್ಸ್ ಮಾಡಲಾಗಿದೆ. ಅಲ್ಲದೇ ಬೆಂಗಳೂರಿನ ಐದು ನಗರಪಾಲಿಕೆಯ ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಕನಿಷ್ಠ 6 ತಿಂಗಳ ಮೊದಲು ಜನಗಣತಿಯ ಫಲಿತಾಂಶಗಳು ಲಭ್ಯವಿದ್ದರೆ ಹಾಗೂ ಪ್ರತಿ ಜನಗಣತಿಯ ಬಳಿಕ ನಗರಪಾಲಿಕೆಯ ಮುಂದಿನ ಸಾರ್ವತ್ರಿಕ ಚುನಾವಣೆಯ ಮೊದಲು ಹೊಸ ಪುನರ್‌ವಿಂಗಡಣೆ ಪ್ರಕ್ರಿಯೆ ನಡೆಸಬೇಕು ಎಂದು ನಿರ್ಧರಿಸಲಾಗಿದೆ. ಈಗ ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ವಿಂಗಡಣೆಯನ್ನು ಮಾಡಲಾಗುತ್ತಿದ್ದು, ಇದೇ ಮಾದರಿಯಲ್ಲಿ ಮುಂದುವರಿಯುವುದಕ್ಕೆ ಸಂಬಂಧಿಸಿದಂತೆ ಮಸೂದೆಯಲ್ಲಿ ಉಲ್ಲೇಖ ಮಾಡಲಾಗಿದೆ.
ಮುಂದುವರಿದು ಗ್ರೇಟರ್ ಬೆಂಗಳೂರು ನಗರಪಾಲಿಕೆಗಳಿಗೆ ನೇಮಕವಾದ ಸದಸ್ಯ ಪದಾವಧಿಯವರೆಗೆ ಆಯಾ ವಿಧಾನಸಭೆ ಕ್ಷೇತ್ರ ಮಟ್ಟದ ಸಮಾಲೋಚನಾ ಮತ್ತು ಸಮನ್ವಯ ಸಮಿತಿಗೆ ನಾಮನಿರ್ದೇಶಿತ ಸದಸ್ಯರು ಸಹ ಆಗಿರಲಿದ್ದಾರೆ ಎಂದು ಮಸೂದೆಯಲ್ಲಿ ನಮೂದಿಸಲಾಗಿದೆ.
ಮೊದಲೇ ಅಪ್ಡೇಟ್ಸ್ ಕೊಟ್ಟಿದ್ದ ಡಿ.ಕೆ ಶಿವಕುಮಾರ್: ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆ ಆಗಲಿದ್ದು, ವಿವಿಧ ಭಾಗಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಈಗಾಗಲೇ ಅಪ್ಡೇಟ್ಸ್ ಕೊಟ್ಟಿದ್ದರು. ಅಲ್ಲದೇ ಯಾವುದೇ ಕಾರಣಕ್ಕೂ ಭೂಮಿ ಮಾರಾಟ ಮಾಡಬೇಡಿ ಎಂದೂ ಹೇಳಿದ್ದರು. ಅವರು ಕೊಟ್ಟಿದ್ದ ಭವಿಷ್ಯದ ಭರವಸೆ ಇಂದು ಸಹಕಾರವಾಗಿದೆ.












Click it and Unblock the Notifications