Get Updates
Get notified of breaking news, exclusive insights, and must-see stories!

ಟ್ರಾಫಿಕ್‌ ನಿರ್ವಹಣೆಗೆ ಹೆಚ್ಚು ಪೊಲೀಸರ ನಿಯೋಜಿಸಿ: ಸಿಎಂಗೆ ಎಎಪಿ ಪತ್ರ

ಬೆಂಗಳೂರು, ನವೆಂಬರ್ 08: ದಂಡ ವಸೂಲಿಗೆ ಹೆಚ್ಚು ಬಳಕೆಯಾಗುತ್ತಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರನ್ನು ವಾಹನ ಸಂಚಾರ ದಟ್ಟಣೆ ಸಮಸ್ಯೆ ನಿರ್ವಹಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು, ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಯು ಇಲ್ಲಿನ ಜನತೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದನ್ನು ಬಗೆಹರಿಸಬೇಕಾದ ಸಂಚಾರಿ ಪೊಲೀಸ್‌ ಸಿಬ್ಬಂದಿಗಳು ದಂಡ ವಸೂಲಿ ಮಾಡಲೆಂದೇ ಹೆಚ್ಚಾಗಿ ಬಳಕೆ ಆಗುತ್ತಿರುವುದು ದುರದೃಷ್ಟಕರ ಎಂದರು.

ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲೆಂದು ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ತಪ್ಪಿತಸ್ಥರಿಗೆ ಮನಗೇ ನೋಟಿಸ್‌ ಕಳುಹಿಸುವ ವ್ಯವಸ್ಥೆ ಕೂಡ ಜಾರಿಯಲ್ಲಿದೆ. ಆದರೂ ಕೂಡ ಬಹುತೇಕ ಸಂಚಾರಿ ಪೊಲೀಸರು ವಾಹನ ಸವಾರರನ್ನು ಅಡ್ಡಗಟ್ಟಿ ದಂಡ ವಿಧಿಸುವುದರಲ್ಲೇ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇದರಿಂದಾಗಿ, ಟ್ರಾಫಿಕ್‌ ಜಾಮ್‌ ಆಗುವುದನ್ನು ತಡೆಯುವುದಕ್ಕೆ ಸಂಚಾರಿ ಪೊಲೀಸರ ಕೊರತೆ ಕಂಡು ಬರುತ್ತಿದೆ ಎಂದು ವಿವರಿಸಿದರು.

Assignment more traffic police for traffic management in Bengaluru AAP Letter to CM

ಪಾದಾಚಾರಿ ಅತಿಕ್ರಮಣ ತೆರವು ಮಾಡಲು ಆಗ್ರಹ

ಪಾದಚಾರಿ ಮಾರ್ಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಜನರ ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುವುದು ಸಂಚಾರಿ ಪೊಲೀಸರ ಜವಾಬ್ದಾರಿ. ಆದರೆ ಬೆಂಗಳೂರಿನ ಅನೇಕ ರಸ್ತೆಗಳ ಪಾದಚಾರಿ ಮಾರ್ಗಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿದ್ದರೂ ಸಂಚಾರಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಪಾದಚಾರಿಗಳಿಗೆ ಸಮಸ್ಯೆ ತಂದೊಡ್ಡಿದೆ. ಇದರಿಂದ ಜನರು ರಸ್ತೆಗಳಲ್ಲಿ ಸಂಚರಿಸುತ್ತಾರೆ, ಇದು ರಸ್ತೆ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ ಎಂದರು.

ಗೃಹರಕ್ಷಕ ದಳದ ಸಿಬ್ಬಂದಿಗಳು ನಿಷ್ಕ್ರಿಯರಾಗಿದ್ದು, ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಂಡು ಬರುತ್ತಿದ್ದ ಟ್ರಾಫಿಕ್‌ ವಾರ್ಡನ್‌ಗಳು ಕೂಡ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿಲ್ಲ. ಗೂಗಲ್‌ ಮ್ಯಾಪ್‌ ಹಾಗೂ ಡ್ರೋನ್‌ಗಳನ್ನು ಬಳಸಿಕೊಂಡು ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ಘೋಷಣೆಗಳು ಕೇವಲ ಘೋಷಣೆಗಳಾಗಿಯೇ ಉಳಿದಿವೆ ಎಂದು ಆರೋಪಿಸಿದರು.

ಅಧಿಕಾರಿಗಳನ್ನು ಅಮಾನತು ಕ್ರಮ ಕೈಗೊಳ್ಳಿ

ವಾಹನ ದಟ್ಟಣೆಯ ಪೀಕ್ ಅವರ್ ಗಳಲ್ಲಿ ಭಾರೀ ಸರಕು ವಾಹನಗಳನ್ನು ಲಂಚ ಪಡೆದು ಬೆಂಗಳೂರಿನ ಒಳಗೆ ಪ್ರವೇಶಿಸಲು ಇಲಾಖೆ ಅನುಮಿತಿ ನೀಡಿದೆ. ಎಸಿಪಿ ಅಧಿಕಾರಿಗಳು ಇನ್ಸಪೆಕ್ಟರ್‌ಗಳು ಹಾಗೂ ಪೊಲೀಸರ ವಿರುದ್ಧ ಈಗಾಗಲೇ ಭ್ರಷ್ಟಾಚಾರ ನಿಯಂತ್ರಣ ದಳದಲ್ಲಿ ಎಫ್ಐಆರ್ ಆಗಿವೆ. ಹೀಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ಈ ಕಳಂಕಿತ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+