ಬೆಂಗಳೂರು: ದಂಪತಿಯನ್ನು ಬಲಿತೆಗೆದುಕೊಂಡ ರಸ್ತೆ ಗುಂಡಿ
ಬೆಂಗಳೂರು, ಅಕ್ಟೋಬರ್ 03: ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ತಮಿಳುನಾಡಿನ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆ ಫ್ಲೈ ಓವರ್ ಬಳಿ ನಡೆದಿದೆ.
ಆಂಥೋನಿ ಜೋಸೆಫ್ (55) ಮತ್ತು ಸಗಾಯ ಮೇರಿ (53) ಮೃತ ದುರ್ದೈವಿಗಳು. ದಂಪತಿ ತಮ್ಮ ಸ್ಕೂಟಿಯಲ್ಲಿ ಜೆಜೆ ನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಕೆಟ್ ಫ್ಲೈಓವರ್ ಬಳಿ ರಸ್ತೆಯಲ್ಲಿ ದೊಡ್ಡ ಗುಂಡಿಯೊಂದನ್ನು ಕಂಡು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ವೇಗವಾಗಿ ಬಂದ ತಮಿಳುನಾಡಿನ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನೆಲಕ್ಕೆ ಬಿದ್ದ ದಂಪತಿಗಳು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆ ರಸ್ತೆಯಲ್ಲೂ ಹೆಚ್ಚಾಗಿರುವ ಗುಂಡಿಗಳು ಇನ್ನೆಷ್ಟು ಜನರನ್ನು ಬಲಿತೆಗೆದುಕೊಳ್ಳುತ್ತದೋ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ!












Click it and Unblock the Notifications