ಆಸ್ಪತ್ರೆಯಿಂದ ಮನೆ ಸೇರಿದ ಜ್ಯೋತಿ ಉದಯ್
ಬೆಂಗಳೂರು, ಡಿ.21: ನಗರ ಜೆ.ಸಿ.ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಹಲ್ಲೆಗೊಳಗಾಗಿದ್ದ ಜ್ಯೋತಿ ಉದಯ್ ಅವರು ಶನಿವಾರ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದಾರೆ. ಆಸ್ಪತ್ರೆಯಿಂದ ಮನೆ ಸೇರುವ ಮುನ್ನ ಸುದ್ದಿಗಾರರೊಂದಿಗೆ ಹಲ್ಲೆ ಹಾಗೂ ನಂತರದ ಸಾವು ಬದುಕಿನ ನಡುವಿನ ಹೋರಾಟದ ಬಗ್ಗೆ ವಿವರಿಸಿದರು. ಮನೆ ತಲುಪಿದ ಮೇಲೆ ಮಗಳ ಮೂರನೇ ಹುಟ್ಟುಹಬ್ಬ ಆಚರಣೆ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದರು.
'ನಾನು ಎಂದಿನಂತೆ ಎಟಿಎಂ ನಿಂದ ಹಣ ತೆಗೆಯುತ್ತಿದ್ದೆ. ಆ ವೇಳೆಗೆ ಬಂದ ಅಪರಿಚಿತನೊಬ್ಬ ಹಣ ಕೊಡು ಎಂದು ಒತ್ತಾಯಿಸಿದ . ನಾನು ನಿರಾಕರಿಸಿ, ಕಿರುಚಲು ಯತ್ನಿಸಿದಾಗ ಅವನ ಕೈಯಿಂದ ನನ್ನ ಬಾಯಿಯನ್ನು ಮುಚ್ಚಿದ. ಗನ್ ಹಿಡಿದು ಹೆದರಿಸಿದಾಗ ನಾನು ಹೆದರಲಿಲ್ಲ. ಆದರೆ, ಬಳಿಕ ಅವನು ಬ್ಯಾಗ್ ನಿಂದ ಮಾರಕಸ್ತ್ರ ತೆಗೆದು ನನಗೆ ಬಡಿದ ಅನಂತರ ಏನಾಯಿತೆಂದು ನನಗೆ ತಿಳಿದಿಲ್ಲ' ಎಂದು ಗೋಷ್ಠಿಯಲ್ಲಿ ಕಣ್ಣಿರಿಟ್ಟರು.
ಆಸ್ಪತ್ರೆಯ ಉಪಾಧ್ಯಕ್ಷ ಡಾ.ವೆಂಕಟರಮಣ ಅವರು ಮಾತನಾಡಿ, 'ಜ್ಯೋತಿ ಉದಯ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಜನವರಿ 15ರ ನಂತರ ಅವರು ನಡೆದಾಡುವ ಸ್ಥಿತಿಗೆ ಬರಲಿದ್ದಾರೆ. ಜ್ಯೋತಿ ಅವರಿಗೆ ಫಿಸಿಯೋಥೆರಪಿ ಮಾಡಲಾಗಿದ್ದು, ಮತ್ತೊಮ್ಮೆ ಫಿಸಿಯೋಥೆರಪಿಗಾಗಿ ಅವರು ಆಸ್ಪತ್ರೆಗೆ ಭೇಟಿ ನೀಡಬೇಕಾಗುತ್ತದೆ' ಎಂದು ತಿಳಿಸಿದರು.

ಸುಮಾರು 2 ಅಥವಾ ಮೂರು ತಿಂಗಳ ಬಳಿಕ ಅವರು ತಮ್ಮ ಕೆಲಸಕ್ಕೆ ಮರಳಬಹುದು. ಆದರೆ, ದಿನಕ್ಕೆ ಎರಡರಿಂದ ಮೂರು ಗಂಟೆಗಳ ಕಾಲ ಮಾತ್ರ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಡಾ.ವೆಂಕಟರಮಣ ಹೇಳಿದರು.
ಎಟಿಎಂ ಕೇಂದ್ರಕ್ಕೆ ನ.19 ರಂದು ಬೆಳಗ್ಗೆ 7.15 ರ ಸುಮಾರಿಗೆ ಹಣ ಡ್ರಾ ಮಾಡಲು ಬಂದ ಕಾರ್ಪೊರೇಷನ್ ಬ್ಯಾಂಕ್ ನ ವ್ಯವಸ್ಥಾಪಕಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ನಡೆದಿತ್ತು. ಕೆಂಗೇರಿ ಬಳಿ ಇರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ಕೆಲ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆ ನಡೆದು ಸುಮಾರು ಒಂದು ತಿಂಗಳು ಕಳೆದಿದ್ದರೂ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಆರೋಪಿಯ ಭಾವಚಿತ್ರ ಹೊರತುಪಡಿಸಿ ಆತನ ಬಗ್ಗೆ ಯಾವುದೇ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ. ಹಿಂದೂಪುರದಲ್ಲಿ ಜ್ಯೋತಿ ಅವರ ಮೊಬೈಲ್ ಅನ್ನು ಮಾರಾಟ ಮಾಡಿ ಅಲ್ಲಿಂದ ಕಾಲ್ಕಿತ್ತ ನಂತರ ಆತನ ಯಾವುದೇ ಸುಳಿವು ಪೊಲೀಸರಿಗೆ ಲಭ್ಯವಾಗಿಲ್ಲ. ಈ ಮುಂಚೆ 1 ಲಕ್ಷ ರುಪಾಯಿ ಬಹುಮಾನ ಘೋಷಿಸಿದ್ದ ಪೊಲೀಸರು, ಇದೀಗ ಅದನ್ನು 5 ಲಕ್ಷ ರುಪಾಯಿಗೆ ಏರಿಸಲಾಗಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications