ಎಟಿಎಂ ಹಲ್ಲೆ : ಆರೋಪಿ ಸುಳಿವಿಗೆ 1 ಲಕ್ಷ ಬಹುಮಾನ
ಬೆಂಗಳೂರು, ನ. 21 : ದುಷ್ಕರ್ಮಿಯಿಂದ ಹಲ್ಲೆಗೊಳಗಾದ ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕಿ ಜ್ಯೋತಿ ಉದಯ್ ಅವರ ಮೊಬೈಲ್ ಪೋನ್ ಆಂಧ್ರಪ್ರದೇಶದಲ್ಲಿ ಪತ್ತೆಯಾಗಿದೆ. ಆರೋಪಿಯಿಂದ ಮೊಬೈಲ್ ಖರೀದಿಸಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಟಿಎಂನಲ್ಲಿ ಹಲ್ಲೆ ಮಾಡಿದ ಆರೋಪಿಯ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಬೆಂಗಳೂರು ಪೊಲೀಸರು ಘೋಷಿಸಿದ್ದಾರೆ.
ಜ್ಯೋತಿ ಉದಯ್ ಮೇಲಿನ ಹಲ್ಲೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರಿಗೆ ಆರೋಪಿ, ಹಲ್ಲೆ ನಡೆಸಿ ತೆಗೆದುಕೊಂಡು ಹೋದ ಜ್ಯೋತಿ ಅವರ ಮೊಬೈಲ್ ಅನ್ನು ಆತ, ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರದಲ್ಲಿ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಮೊಬೈಲ್ ಖರೀದಿಸಿದ್ದ ವ್ಯಕ್ತಿಯನ್ನು ಸದ್ಯ ಅವರು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳವಾರ ನಡೆದ ಜ್ಯೋತಿ ಉದಯ್ ಅವರ ಹಲ್ಲೆ ಪ್ರಕರಣದ ಆರೋಪಿಯ ಪತ್ತೆಗಾಗಿ ಬೆಂಗಳೂರು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಆರೋಪಿಯ ಕುರಿತು ಮಾಹಿತಿ ದೊರೆತರೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಆರೋಪಿಯ ಸುಳಿವು ನೀಡಿದವರಿಗೆ 1 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಆರೋಪಿ ಬೇರೆ ರಾಜ್ಯಗಳಲ್ಲಿ ತಲೆ ಮರಿಸಿಕೊಂಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಆತ ಜ್ಯೋತಿ ಉದಯ್ ಅವರ ಮೊಬೈಲ್ ಅನ್ನು ಮಾರಾಟ ಮಾಡಿರುವುದರಿಂದ ಆಂಧ್ರಪ್ರದೇಶದಲ್ಲಿ ಇರಬಹುದು ಎಂದು ಹುಡುಕಾಟ ಮುಂದುವರೆಸಿದ್ದಾರೆ. ಮೊಬೈಲ್ ಖರೀದಿಸಿದ ವ್ಯಕ್ತಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸಾರ್ವಜನಿಕರು ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕರೆ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
9480801011
9480801012
9480801101












Click it and Unblock the Notifications