ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್ ರೆಡ್ಡಿ ಬೆಂಗಳೂರಿಗೆ

ಬೆಂಗಳೂರು, ಮಾರ್ಚ್. 06 : 2013 ನವೆಂಬರ್ ನಲ್ಲಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಅವರ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮಧುಕರ್ ರೆಡ್ಡಿಯನ್ನು ಸೋಮವಾರ ಕಡಪದಿಂದ ಬೆಂಗಳೂರಿಗೆ ಕರೆತರಲಾಗಿದೆ.

ಬೆಂಗಳೂರಿನಲ್ಲಿ ಎಟಿಎಂಗೆ ನುಗ್ಗಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಎಂಬುವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಮಧುಕರ್ ರೆಡ್ಡಿಯನ್ನು ಫೆಬ್ರವರಿಯಲ್ಲಿ ಆಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಸಿದ್ದರು. ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.[ಎಟಿಎಂನಲ್ಲಿ ಜ್ಯೋತಿ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯ ಬಂಧನ]

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದು ಮಂಗಳವಾರ ನ್ಯಾಯಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. [ಎಟಿಎಂ ಹಲ್ಲೆ ಪ್ರಕರಣಕ್ಕೆ 3 ವರ್ಷ: ತನಿಖೆ ನೆನೆಗುದಿಗೆ]

ATM attacker Madhukar Reddy brought to Bengaluru by city police for further inquiry

ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಈ ಹಿಂದೆ ಕೆಲವಾರು ಅಪರಾಧ ಪ್ರಕರಣಗಳಲ್ಲಿ ಆಂಧ್ರಪ್ರದೇಶದ ಕಡಪಾ ಜೈಲಿನಲ್ಲಿ ಬಂಧಿಯಾಗಿದ್ದ ಈತ ಅಲ್ಲಿಂದ ತಪ್ಪಿಸಿಕೊಂಡಿದ್ದ.

ಆನಂತರವೇ ಆತ ಬೆಂಗಳೂರಿನಲ್ಲಿ ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕಿ ಜ್ಯೋತಿ ಉದಯ್ ಅವರ ಮೇಲೆ ಎಟಿಎಂ ಕಿಯೋಸ್ಕ್ ನಲ್ಲಿ ಮಾರಣಾಂತಿಕ ಮೇಲೆ ಹಲ್ಲೆ ನಡೆಸಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+