8 ದಿನಗಳ ಪೊಲೀಸ್ ಕಸ್ಟಡಿಗೆ ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿ

2013 ನವೆಂಬರ್ ನಲ್ಲಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬೆಂಗಳೂರು, ಮಾರ್ಚ್ 7: 2013 ನವೆಂಬರ್ ನಲ್ಲಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಸೋಮವಾರವಷ್ಟೆ ಮಧುಕರ್ ರೆಡ್ಡಿಯನ್ನು ಕಡಪದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಇಂದು ರೆಡ್ಡಿಯನ್ನು ಬೆಂಗಳೂರಿನ ಆರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಎ ರಾಘವೇಂದ್ರ ಮಧುಕರ್ ರೆಡ್ಡಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.[ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್ ರೆಡ್ಡಿ ಬೆಂಗಳೂರಿಗೆ]

ATM attacker Madhukar Reddy sent to 8 days police custody for further inquiry

ಪೊಲೀಸರು ಮಧುಕರ್ ರೆಡ್ಡಿಯನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ನ್ಯಾಯಾಧೀಶರು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.

2013ರ ನವೆಂಬರಿನಲ್ಲಿ ಬೆಂಗಳೂರಿನಲ್ಲಿ ಎಟಿಎಂಗೆ ನುಗ್ಗಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಎಂಬುವರ ಮೇಲೆ ಮಧುಕರ್ ರೆಡ್ಡಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಈತನನ್ನು ಫೆಬ್ರವರಿಯಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು.[ಎಟಿಎಂನಲ್ಲಿ ಜ್ಯೋತಿ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯ ಬಂಧನ]

ಇದೀಗ ಆರೋಪಿ ಬೆಂಗಳೂರಿನ ಹಲಸೂರು ಪೊಲೀಸರ ವಶದಲ್ಲಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಸೋಮವಾರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+