ಪ್ರಚಾರದ ವೇಳೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ, ಹತ್ಯೆಗೆ ಯತ್ನ

ಬೆಂಗಳೂರು, ನವೆಂಬರ್ 19: ಜೆಡಿಎಸ್ ಮುಖಂಡ ಬಸವರಾಜ್ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಹತ್ಯೆಗೆ ಮುಂದಾಗಿದ್ದ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

ಯಶವಂತಪುರ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರ ಪರ ಪ್ರಚಾರ ಮಾಡುತ್ತಿದ್ದಾಗ ಜೆಡಿಎಸ್ ಮುಖಂಡ ಬಸವರಾಜು ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ, ಕಾಲು ಹಾಗೂ ಎಡಕೈಗೆ ಬಲವಾಗಿ ಚಾಕುವಿನಿಂದ ಇರಿದಿದ್ದಾರೆ.ಹತ್ಯೆಗೆ ಯತ್ನಿಸಿದ್ದಾರೆ.

Attack On JDS Leader During Campaign In Bengaluru

ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆಗೆ ಕಾರಣಗಳು ತಿಳಿದುಬಂದಿಲ್ಲ.

ವಿವಾಹ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನರಸಿಂಹ ರಾಜ ಕ್ಷೇತ್ರದ ಶಾಸಕ ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಏಕಾಏಕಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇನ್ನೂ ಆರಿಲ್ಲ, ಅಷ್ಟರೊಳಗೆ ಜೆಡಿಎಸ್ ಮುಖಂಡನ ಮೇಲೂ ದಾಳಿ ನಡೆದಿದೆ.

ಇದೀಗ ತನ್ವೀರ್ ಸೇಠ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 24 ಗಂಟೆಗಳಿಗಿಂತಲೂ ಹೆಚ್ಚಿನ ಸಮಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಇದೀಗ ಆಕ್ಸಿಜನ್ ಮಾಸ್ಕ್ ತೆರವುಗೊಳಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸಿದರೆ ವಾರ್ಡ್‌ಗೆ ಶಿಫ್ಟ್‌ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+