ವಿದ್ವತ್ ಮೇಲೆ ಹಲ್ಲೆ ಪ್ರಕರಣ : ಸಿಸಿಬಿ ಪೊಲೀಸರಿಂದ 600 ಪುಟಗಳ ಚಾರ್ಜ್‌ಶೀಟ್
ಬೆಂಗಳೂರು, ಮೇ 10 : ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಕೃಷ್ಣ ಇನ್ನೂ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆದಿದೆ.
ಸಿಸಿಬಿ ತನಿಖಾಧಿಕಾರಿಗಳು ಬೆಂಗಳೂರಿನ ಎಸಿಎಂಎಂ ಕೋರ್ಟ್‌ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಸಿಟಿವಿ ದೃಶ್ಯಾವಳಿಗಳನ್ನು ಒಳಗೊಂಡ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. 8 ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದು, ಒಬ್ಬ ಆರೋಪಿಗಾಗಿ ಇನ್ನೂ ಹುಡುಕಾಟ ಮುಂದುವರೆದಿದೆ.
ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಮುಖ ಆರೋಪಿ...

ಮೊಹಮ್ಮದ್ ನಲಪಾಡ್ ಮೊದಲ ಆರೋಪಿ
ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. 600 ಪುಟಗಳ ಜಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ವಿರುದ್ಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.

ಕೃಷ್ಣ ಎಂಬ ಆರೋಪಿಗಾಗಿ ಹುಡುಕಾಟ
ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮೇ 9ರಂದು ಸಿಸಿಬಿ ಪೊಲೀಸರು ಚಾರ್ಚ್‌ಶೀಟ್ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುವಾಗ ಕೃಷ್ಣ ಎಂಬ ಆರೋಪಿಯನ್ನು ಇನ್ನೂ ಹುಡುಕಬೇಕಾಗಿದೆ ಎಂದು ಹೇಳಿದ್ದಾರೆ. 2014ರಿಂದಲೂ ಕೃಷ್ಣ ಮೊಬೈಲ್ ಬಳಸುತ್ತಿಲ್ಲ. ವಿದೇಶದಲ್ಲಿ ಅವರು ತಲೆಮರೆಸಿಕೊಂಡಿರಬಹುದು ಎಂದು ಪೊಲೀಸರು ಹೇಳಿದ್ದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲೇನಿದೆ?
ಸಿಸಿಬಿ ಪೊಲೀಸರು ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಸಿಟಿವಿ ದೃಶ್ಯಾವಳಿಗಳನ್ನು ಒಳಗೊಂಡ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.
ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಆರೋಪಿಗಳ ದಾಖಲಾಗಿದ್ದ ಕೊಲೆ ಯತ್ನದ ಆರೋಪ ಸಾಬೀತಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಪೊಲೀಸರು ಹೇಳಿದ್ದಾರೆ.

ನ್ಯಾಯಾಂಗ ಬಂಧನದಲ್ಲಿ ಆರೋಪಿಗಳು
ಮೊಹಮ್ಮದ್ ನಲಪಾಡ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮೇ 11ರಂದು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದ್ದು, ಮತ್ತೆ ವಿಚಾರಣೆ ನಡೆಯಲಿದೆ.
ಮೊಹಮ್ಮದ್ ನಲಪಾಡ್ ಈ ಪ್ರಕರಣದಲ್ಲಿ ಜಾಮೀನು ಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದರು. ಮೊದಲು ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಬಳಿಕ ಕರ್ನಾಟಕ ಹೈಕೋರ್ಟ್ ಸಹ ಜಾಮೀನು ನೀಡಲು ನಿರಾಕರಿಸಿತು.












Click it and Unblock the Notifications