ಬೆಂಗಳೂರಿನ ಪಾದರಾಯನಪುರದಲ್ಲಿ ಸೀಲ್ ಡೌನ್ ಉಲ್ಲಂಘನೆ: ದಾಂಧಲೆಗೆ ಯಾರು ಹೊಣೆ?

ಬೆಂಗಳೂರು, ಏಪ್ರಿಲ್.19: ಕೊರೊನಾ ವೈರಸ್ ಸೋಂಕಿನಿಂದ ರಾಜ್ಯವನ್ನು ರಕ್ಷಿಸಲು ವೈದ್ಯರು ಮತ್ತು ಪೊಲೀಸರು ನಿರಂತರವಾಗಿ ಹಗಲು ರಾತ್ರಿ ಮನೆಗಳನ್ನು ತೊರೆದು ದುಡಿಯುತ್ತಿದ್ದಾರೆ. ಇದರ ನಡುವೆ ಬೆಂಗಳೂರಿನ ಪಾದರಾಯನಪುರದಲ್ಲಿ ಕಿಡಿಗೇಡಿಗಳು ಹೇಯಕೃತ್ಯ ಎಸಗಿದ್ದಾರೆ.

ಸೀಲ್ ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ವೈರಸ್ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದ 58ಕ್ಕೂ ಹೆಚ್ಚು ಜನರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿತ್ತು. 58 ಜನರ ಪೈಕಿ 20 ಜನರನ್ನು ಬೇರೆಡೆ ಶಿಫ್ಟ್ ಮಾಡಲಾಗಿದ್ದು, ಉಳಿದ 38 ಜನರನ್ನು ಸ್ಥಳಾಂತರಿಸಲು ಬಿಬಿಎಂಪಿ ಅಧಿಕಾರಿಗಳು ತೆರಳಿದ್ದಾರೆ.

Sealdown Violation: Bangalore Padarayanapura Area People Break The Rules

ಪಾದರಾಯನಪುರದಲ್ಲಿ ಕ್ವಾರೆಂಟೈನ್ ಗೆ ಒಳಪಡಿಸಲು ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಿದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೆರಳಿದ ಕೆಲವರು ಸೀಲ್ ಡೌನ್ ಮಾಡಿರುವ ಏರಿಯಾದಲ್ಲಿ ಅಳವಡಿಸಿದ ಬ್ಯಾರಿಕೇಡ್ ಹಾಗೂ ತಗಡುಗಳನ್ನು ಕಿತ್ತೆಸೆದು ಗಲಾಟೆ ಮಾಡಿದ್ದಾರೆ.

ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ:

ಬೆಂಗಳೂರಿನಲ್ಲೇ ಅಪಾಯಕಾರಿ ಎಂದು ಗುರುತಿಸಲ್ಪಟ್ಟಿರುವ ಪಾದರಾಯನಪುರವನ್ನು ಇತ್ತೀಚಿಗಷ್ಟೇ ಸೀಲ್ ಡೌನ್ ಮಾಡಲಾಗಿತ್ತು. ಇಂದು ವೈದ್ಯಕೀಯ ತಪಾಸಣೆ ಹಾಗೂ ಕ್ವಾರೆಂಟೈನ್ ನಲ್ಲಿ ಇರುವವರನ್ನು ಸ್ಥಳಾಂತರಿಸಲು ತೆರಳಿದ್ದ ವೇಳೆ ಗಲಾಟೆ ನಡೆದಿದೆ. 200ಕ್ಕೂ ಅಧಿಕ ಮಂದಿ ದುಷ್ಕೃತ್ಯ ಎಸಗಿದ್ದು, ಸಿಸಿ ಕ್ಯಾಮರಾ ಮತ್ತು ಮೊಬೈಲ್ ದೃಶ್ಯಗಳನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+