ಮೊಹಮ್ಮದ್ ನಲಪಾಡ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು
ಬೆಂಗಳೂರು, ಫೆಬ್ರವರಿ 19 : ಮೊಹಮ್ಮದ್ ನಲಪಾಡ್ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ. ಮೊಹಮ್ಮದ್ ನಲಪಾಡ್ ಸದ್ಯ, ಕಬ್ಬನ್ ಪಾರ್ಕ್ ಪೊಲೀಸರ ವಶದಲ್ಲಿದ್ದಾನೆ.
ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಸೋಮವಾರ ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಶರಣಾಗಿದ್ದಾನೆ.
ಶನಿವಾರ ರಾತ್ರಿ ಯು.ಬಿ.ಸಿಟಿಯ ಬಾರ್‌ನಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಆರೋಪಿಗಳಾಗಿದ್ದಾರೆ.

ಮೊಹಮ್ಮದ್ ನಲಪಾಡ್ ನಾಲ್ವರು ಸ್ನೇಹಿತರನ್ನು ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದರು. ಆದರೆ, ನಲಪಾಡ್ ತಲೆಮರೆಸಿಕೊಂಡಿದ್ದ. ಮೊಹಮ್ಮದ್ ನಲಪಾಡ್ ಯುವಕನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.
ಮೊಹಮ್ಮದ್ ನಲಪಾಡ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸರು ಮೊಹಮ್ಮದ್ ನಲಪಾಡ್ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿ ಕೊಲೆ ಯತ್ನ ಪ್ರಕರಣ ದಾಖಲು ಮಾಡಿದ್ದಾರೆ. ಇಂದು ಪೊಲೀಸರು ಆರೋಪಿಯನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಐಪಿಸಿ ಸೆಕ್ಷನ್ 143, 147, 148, 353, 336, 307 ಸೇರಿದಂತೆ ಇತರ ಪ್ರಕರಣಗಳು ಗಂಭೀರ ಸ್ವರಪದ್ದಾಗಿದೆ ಮತ್ತು ಜಾಮೀನು ರಹಿತ ಅಪರಾಧ ಪ್ರಕರಣಗಳಾಗಿವೆ.












Click it and Unblock the Notifications