Atul Subhash suicide case: ಟೆಕ್ಕಿ ಅತುಲ್ ಪತ್ನಿ ನಿಕಿತಾ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ?
ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಆತ್ಮಹ*ಗೆ ಕಾರಣರಾದವರು ಎನ್ನುವವರನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿ ಯಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್ ಅವರು ಈಚೆಗೆ ಆತ್ಮಹ* ಮಾಡಿಕೊಂಡಿದ್ದರು. ಆದರೆ, ಅವರ ಆತ್ಮಹ* ಗೆ ಕಾರಣರಾಗಿದ್ದಾರೆ ಎನ್ನಲಾಗಿರುವ ಅವರ ಪತ್ನಿ ನಿಕಿತಾ ಸಂಘಾನಿಯಾ ಹಾಗೂ ಕುಟುಂಬದವರು ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅತುಲ್ ಸುಭಾಷ್ ಕೇಸ್‌ನಲ್ಲಿ ಬೆಂಗಳೂರು ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದೇ ರೋಚಕವಾಗಿದೆ. ಅತುಲ್ ಕೇಸ್‌ನಲ್ಲಿ ಬೆಂಗಳೂರು ಪೊಲೀಸರ ಕಾರ್ಯವೈಖರಿ ಇದೀಗ ರಾಷ್ಟ್ರದಾದ್ಯಂತ ಸದ್ದು ಮಾಡುತ್ತಿದೆ.
ಬೆಂಗಳೂರು ಪೊಲೀಸರು ಕೇವಲ ಒಂದೇ ಒಂದು ಪೋನ್ ಕಾಲ್‌ನ ಮೂಲಕ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ ಅವರನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ಅತುಲ್ ಅವರ ಸಹೋದರ ಹಾಗೂ ಕುಟುಂಬದವರು ಅತುಲ್ ಅವರ ಪತ್ನಿ ಹಾಗೂ ಕುಟುಂಬದವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಮಾಡಿದ್ದರು. ಈ ಸಂಬಂಧ ಪ್ರಕರಣ ಸಹ ದಾಖಲಾಗಿತ್ತು. ಆದರೆ, ನಿಕಿತಾ ಅವರು ಪೊಲೀಸರಿಂದ ತಲೆಮರೆಸಿಕೊಂಡಿದ್ದರು. ಆಕೆ ಪ್ರತಿ ದಿನವೂ ಸ್ಥಳ ಬದಲಾಯಿಸುತ್ತಿದ್ದಳು ಎನ್ನಲಾಗಿದೆ.

ನಿಕಿತಾ ಅವರು ಅತುಲ್ ಅವರು ಆತ್ಮಹ*ಗೆ ಶರಣಾದ ಮೇಲೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಅವರ ಕುಟುಂಬದ ಇತರ ಸದಸ್ಯರನ್ನು ಬಂಧಿಸಿದ ಮೇಲೂ ಅವರು ಪತ್ತೆಯಾಗಿರಲಿಲ್ಲ. ಇದೀಗ ಆಕೆ ಮಾಡಿದ ಒಂದೇ ಒಂದು ತಪ್ಪು ಆಕೆಯ ಬಂಧನಕ್ಕೆ ಕಾರಣವಾಗಿದೆ. ಬೆಂಗಳೂರಿನ ಪೊಲೀಸರ ಕೆಲಸದ ಬಗ್ಗೆ ಹಾಗೂ ತನಿಖಾ ಮಾದರಿಯ ಬಗ್ಗೆ ಮೊದಲಿನಿಂದಲೂ ಒಳ್ಳೆಯ ಮೆಚ್ಚುಗೆ ಇದೆ. ಇದೀಗ ಈ ಕೇಸ್‌ನಲ್ಲಿ ಬೆಂಗಳೂರು ಪೊಲೀಸರು ಎಷ್ಟು ಸ್ಮಾರ್ಟ್ ಆಗಿ ಕೆಲಸ ಮಾಡುತ್ತಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಅತುಲ್ ಅವರ ಹೆಂಡತಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರತಿದಿನವೂ ಸ್ಥಳ ಬದಲಾಯಿಸಿದ್ದಾಳೆ. ಯಾರೊಂದಿಗಾದರೂ ಮಾತನಾಡುವುದಕ್ಕೆ ಕೇವಲ ವಾಟ್ಸಾಪ್ ಅನ್ನು ಮಾತ್ರ ಈ ಸಂದರ್ಭದಲ್ಲಿ ಬಳಸಿದ್ದಾಳೆ. ಅಲ್ಲದೆ ಗಮನ ಬೇರೆ ಕಡೆ ಸೆಳೆಯುವುದಕ್ಕೆ ಹಲವು ಸರ್ಕಸ್‌ಗಳನ್ನು ಮಾಡಿದ್ದು, ಇದೇ ಸಂದರ್ಭದಲ್ಲಿ ನಿರೀಕ್ಷಣಾ ಜಾಮೀನಿಗೆ ಸಹ ಅರ್ಜಿ ಸಲ್ಲಿಸಿದ್ದಳು ಎನ್ನಲಾಗಿದೆ. ಆದರೆ, ಆಕೆ ಮಾಡಿದ ಒಂದೇ ಒಂದು ತಪ್ಪಿನಿಂದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಅದೇ ಪೋನ್ ಕಾಲ್!

ಅತುಲ್ ಅವರು ಆತ್ಮಹ* ಮಾಡಿಕೊಂಡ ಮೇಲೆ ನಿಕಿತಾ ಗುರುಗ್ರಾಮ್‌ನ ಪಿಜಿಗೆ ಶಿಫ್ಟ್ ಆಗಿದ್ದಳು ಎನ್ನಲಾಗಿದೆ. ಆದರೆ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನೆಲೆಸಿದ್ದರು. ಬೆಂಗಳೂರು ಪೊಲೀಸರು ಮೊದಲು ಇವರನ್ನು ಬಂಧಿಸಿದ್ದರು. ಆದರೆ, ನಿಕಿತಾ ಸಿಕ್ಕಿಬಿದ್ದಿರಲಿಲ್ಲ. ಆದರೆ, ಪೊಲೀಸರು ವಿವಿಧ ತಂಡಗಳಾಗಿ ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆಯನ್ನು ನಡೆಸಿದ್ದರು.
ನಿಕಿತಾ ಅವರ ಸಂಬಂಧಿಕರೊಬ್ಬರಿಗೆ ಕರೆ ಮಾಡಿದ್ದು, ಪೊಲೀಸರು ಸಿಗ್ನಲ್ ಟ್ರೇಸ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಾದ ಮೇಲೆ ಗುರುಗ್ರಾಮ್‌ಗೆ ಭೇಟಿ ನೀಡಿ ವಶಕ್ಕೆ ಪಡೆದಿದ್ದಾರೆ. ಆಕೆಯನ್ನು ಬಂಧಿಸಿದ ಮೇಲೆ ಅವರ ತಾಯಿಗೆ ಕರೆ ಮಾಡುವಂತೆ ಹೇಳಲಾಗಿದೆ. ಆಕೆ ಅವರ ತಾಯಿಗೆ ಕರೆ ಮಾಡಿದಾಗ ಪೊಲೀಸರು ನಿಶಾ ಮತ್ತು ಅನುರಾಗ್ ಎನ್ನುವವರನ್ನು (ತಾಯಿ) ಪ್ರಯಾಗ್‌ರಾಜ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications