ಬೆಂಗಳೂರಿನ ಇಂದಿರಾನಗರದಲ್ಲಿ ರಾಪಿಡೋ ಬೈಕ್ ಚಾಲಕನಿಗೆ ಕಿರುಕುಳ ನೀಡಿದ ಆಟೋ ಚಾಲಕ

ಬೆಂಗಳೂರಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ರಾಪಿಡೋ ಬೈಕ್ ಚಾಲಕನಿಗೆ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು ಮಾರ್ಚ್ 8: ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ರಾಪಿಡೋ ಬೈಕ್ ಚಾಲಕನಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ದೃಶ್ಯ ವೈರಲ್ ಆಗಿದ್ದು ಆಟೋ ಚಾಲಕನ ನಡೆಯನ್ನು ವಿರೋಧಿಸಲಾಗಿದೆ.

ಬೆಂಗಳೂರಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಬೈಕ್ ಟ್ಯಾಕ್ಸಿ ಚಾಲಕನಿಗೆ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ವಿಡಿಯೊದಲ್ಲಿ ಆಟೋ ಚಾಲಕನೊಬ್ಬ ರಾಪಿಡೋ ಬೈಕ್ ಚಾಲಕನ ಫೋನ್ ಕಸಿದುಕೊಂಡು ಕೋಪದ ಭರದಲ್ಲಿ ನೆಲಕ್ಕೆ ಫೋನ್‌ ಅನ್ನು ಎಸೆಯುವುದು ಕಂಡುಬಂದಿದೆ.

Auto driver harasses bike taxi driver in Bengalurus Indiranagar: Video viral

ಬಳಿಕ ಆಟೋ ಚಾಲಕ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುತ್ತಾನೆ. "ಸ್ನೇಹಿತರೇ, ಅಕ್ರಮ ರಾಪಿಡೋ ದಂಧೆ ಹೇಗೆ ನಡೆಯುತ್ತಿದೆ ಎಂಬುದನ್ನು ನೋಡಿ. ಈ ಸಹೋದ್ಯೋಗಿ ಬೇರೆ ದೇಶದಿಂದ ಬಂದು ರಾಜನಂತೆ ಓಡಿಸುತ್ತಾನೆ. ಆಟೋ ಇಲಾಖೆ ಎಷ್ಟು ಹಾಳಾಗಿದೆ ಮತ್ತು ಹೇಗೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಇಲಾಖೆಯು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ, ಬೇರೆ ದೇಶದಿಂದ ಬಂದವನು, ವೈಟ್ ಬೋರ್ಡ್ ಹೊಂದಿದ್ದರೂ ಹುಡುಗಿಯನ್ನು ಕರೆದುಕೊಂಡು ಹೋಗಲು ಬಂದಿದ್ದಾನೆ'' ಎಂದು ಆಟೋ ಚಾಲಕನೊಬ್ಬ ರಾಪಿಡೋ ಬೈಕ್ ಚಾಲಕನ ಮೇಲೆ ಕೈ ಮಾಡಲು ಮುಂದಾಗುತ್ತಾನೆ.

ಬೈಕ್ ಸವಾರರು ಇನ್ನೂ ಯಾವುದೇ ದೂರು ದಾಖಲಿಸಿಲ್ಲವಾದರೂ, ವೈರಲ್ ವಿಡಿಯೋ ಆಧರಿಸಿ ಪೊಲೀಸರು ಘಟನೆಯ ಬಗ್ಗೆ ಗಮನ ಹರಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಮತ್ತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಆಟೋ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Auto driver harasses bike taxi driver in Bengalurus Indiranagar: Video viral

ಬೆಂಗಳೂರಿನಂತಹ ಮಹಾನಗರಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ಬುಕ್ಕಿಂಗ್‌ ಮಾಡಿ ನಾವು ತಲುಪಬೇಕಾದ ಸ್ಥಳಕ್ಕೆ ಸುಲಭವಾಗಿ ಹೋಗಬಹುದು. ಇದಕ್ಕಾಗಿ ರಾಪಿಡೋ ಬೈಕ್ ಸೇವೆಯನ್ನು ಒದಗಿಸುತ್ತದೆ. ರಾಪಿಡೋ ಬೈಕ್ ಬುಕ್ ಮಾಡುವ ಮೂಲಕ ಏಕಾಂಗಿಯಾಗಿರುವವರು ತಾವು ತಲುಪಬೇಕಾದ ಸ್ಥಳಕ್ಕೆ ತಲುಪಬಹುದು. ರ‍್ಯಾಪಿಡೋ ಕಂಪನಿಯು 100 ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ ಮತ್ತು ಇಲ್ಲಿ 10 ಲಕ್ಷಕ್ಕೂ ಹೆಚ್ಚು ಚಾಲಕರು ಕೆಲಸ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+