30 ಸಾವಿರ ಆಟೋಗಳ ಪರವಾನಗಿ ಆದೇಶ ಹಿಂಪಡೆಯಲು ಆಗ್ರಹ
Recommended Video

ಬೆಂಗಳೂರು, ಏಪ್ರಿಲ್ 04: ರಾಜ್ಯ ಸರ್ಕಾರವು 30 ಸಾವಿರ ಆಟೋಗಳಿಗೆ ಪರವನಾಗಿ ನೀಡಲು ಆದೇಶವನ್ನು ಹೊರಡಿಸಿದೆ. ಇದನ್ನು ಹಿಂಪಡೆಯುವಂತೆ ಆಟೊರಿಕ್ಷಾ ಚಾಲಕರ ಒಕ್ಕೂಟ ಆಗ್ರಹಿಸಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಆಟೊರಿಕ್ಷಾ ತಯಾರಿಕಾ ಕಂಪನಿಗಳಿಗೆ ಲಾಭ ಮಾಡಿಕೊಟ್ಟು ಆ ಮೂಲಕ ಕಂಪನಿಗಳಿಂದ ಚುನಾವಣೆ ನಿಧಿ ಪಡೆಯಲು ಆಡಳಿತ ಪಕ್ಷ ನಡೆಸಿದ ತಂತ್ರ ಇದಾಗಿದೆ. ಸರ್ಕಾರದ ಈ ನಿರ್ಧಾರ ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಏಪ್ರಿಲ್ 9ರಂದು 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದ್ದಾರೆ.
ಹೊಸ ಆಟೊಗಳಿಗೆ ಪರವಾನಗಿ ನೀಡುವ ಮೊದಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಆಟೊರಿಕ್ಷಾ ಒಕ್ಕೂಟದ ಸಭೆ ಕರೆದು ಅವರ ಅಹವಾಲು ಆಲಿಸಬೇಕು. ಇದೂ ಅಲ್ಲದೇ ಆಟೊಗಳಿಗೆ ಬೇಡಿಕೆ ಇರುವ ಬಗ್ಗೆ ಸಾರ್ವಜನಿಕರಿಂದ ಮನವಿಗಳು ಸಲ್ಲಿಕೆಯಾಗಬೇಕು ಆಗ ಮಾತ್ರ ಹೊಸ ಪರವಾನಗಿ ನೀಡಲು ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಈ ನಿಯಮ ಪಾಲಿಸದೆ ಏಕಾಏಕಿ ಪರವಾನಗಿ ನೀಡಲು ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ತಿಳಿಸಿದರು.

ನಗರದಲ್ಲಿ 1.5 ಲಕ್ಷ ಆಟೊಗಳಿವೆ. ಅವುಗಳನ್ನೇ ನಿಲ್ಲಿಸಲು ಸರಿಯಾದ ನಿಲ್ದಾಣಗಳ ವ್ಯವಸ್ಥೆ ಇಲ್ಲ. ಇದರ ಮಧ್ಯೆ ಇನ್ನಷ್ಟು ಆಟೊಗಳಿಗೆ ಪರವಾನಗಿ ನೀಡಿದರೆ ಸಂಚಾರ ದಟ್ಟಣೆ ಸಮಸ್ಯೆ ಇನ್ನಷ್ಟು ಹೆಚ್ಚಲಿದೆ ಎಂದು ಅವರು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications