Get Updates
Get notified of breaking news, exclusive insights, and must-see stories!

Auto Strike : ಪ್ರಯಾಣಿಕರೇ ಗಮನಿಸಿ: ಮಾರ್ಚ್ 20ಕ್ಕೆ ಮುಷ್ಕರಕ್ಕೆ ಕರೆ ನಿಡಿದ ಆಟೋ ಚಾಲಕರು, ಸೇವೆ ಸ್ಥಗಿತ

'ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಮುಷ್ಕರ ನಡೆಸುತ್ತೇವೆ. ಈ ಅವಧಿಯಲ್ಲಿ, ಆಟೋರಿಕ್ಷಾ ಸೇವೆಗಳು ನಗರದಲ್ಲಿ ಲಭ್ಯವಿರುವುದಿಲ್ಲ'

ಬೆಂಗಳೂರು, ಮಾರ್ಚ್ 15: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಮಾರ್ಚ್ 20 ರಂದು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಬೆಂಗಳೂರಿನಲ್ಲಿ ಆಟೋರಿಕ್ಷಾ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಆಟೋಗಳ ಮೇಲೆ ಅವಲಂಭಿಸಿರುವವ ಪ್ರಯಾಣಿಕರು ಬೇರೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್, ರಾಜ್ಯ ಸರ್ಕಾರದ ವಿರುದ್ಧ ಮೂರು ದಿನಗಳ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ. ''ನಗರದಲ್ಲಿ ಅಕ್ರಮ ಬೈಕ್ ಟ್ಯಾಕ್ಸಿಗಳ ಓಡಾಟಕ್ಕೆ ಸಾರಿಗೆ ಇಲಾಖೆ ಅನುಮತಿ ನೀಡಿದೆ. ಆಟೋರಿಕ್ಷಾ ಚಾಲಕರ ಜೀವನೋಪಾಯಕ್ಕೆ ಧಕ್ಕೆಯಾಗುತ್ತಿದೆ. ಸಾರಿಗೆ ಸಚಿವರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ" ಎಂದು ಹೇಳಿದ್ದಾರೆ.

Auto Unions Call Strike on March 20 Against Bike Taxis

"ಬೈಕ್ ಟ್ಯಾಕ್ಸಿಗಳನ್ನು ಓಡಿಸಲು ಅಗ್ರಿಗೇಟರ್‌ಗಳಿಗೆ ನೀಡಿರುವ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ನಾವು ನಾಳೆ ಆಟೋರಿಕ್ಷಾಗಳಿಗೆ ಕಪ್ಪು ಬಾವುಟಗಳನ್ನು ಕಟ್ಟಿ ಮೂರು ದಿನಗಳ ಪ್ರತಿಭಟನೆಯನ್ನು ಪ್ರಾರಂಭಿಸುತ್ತೇವೆ. ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡುತ್ತಿದ್ದೇವೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಮುಷ್ಕರ ನಡೆಸುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.

'ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯ ಈ ಅವಧಿಯಲ್ಲಿ, ಆಟೋರಿಕ್ಷಾ ಸೇವೆಗಳು ನಗರದಲ್ಲಿ ಲಭ್ಯವಿರುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಸಂಘಗಳು ಯೋಜಿಸಿವೆ" ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್ ಹೇಳಿದ್ದಾರೆ.

Auto Unions Call Strike on March 20 Against Bike Taxis

ಬೆಂಗಳೂರು ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಅಡಿಯಲ್ಲಿ ಸುಮಾರು 21 ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ. ಸೋಮವಾರ ಮುಷ್ಕರದ ವೇಳೆ ಬೆಂಗಳೂರಿನಲ್ಲಿ ಸುಮಾರು 2.1 ಲಕ್ಷ ಆಟೋರಿಕ್ಷಾಗಳು ಸೇವೆಯಿಂದ ಹೊರಗುಳಿಯುವ ನಿರೀಕ್ಷೆಯಿದೆ. ಹೀಗಾಗಿ ಪ್ರಯಾಣಿಕರು ಬೇರೆ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+