ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಫೆ. 13 ರಂದು ಆಟೋ ರಸ್ತೆಗಿಳಿಯಲ್ಲ

|
Google Oneindia Kannada News

ಬೆಂಗಳೂರು, ಫೆ. 10: ಫೆಬ್ರವರಿ 13 ರಂದು ಆಟೋಗಳು ರಸ್ತೆಗೆ ಇಳಿಯುವುದಿಲ್ಲ. ಮ್ಯಾಕ್ಸಿ ಕ್ಯಾಬ್ ಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ವಿರೋಧ ಮತ್ತು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಆಟೋ ಸಂಘಟನೆಗಳು ಮುಷ್ಕರ ನಡೆಸಲಿವೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಸಭೆ ಸೇರಲಿರುವ ಆಟೋರಿಕ್ಷಾ ಸಂಘಟನೆಯ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.[ಆಟೋ ಸಂಚಾರಕ್ಕೆ ಮೊದಲು ಮುಂಜಾಗ್ರತೆಗೆ ಹೀಗೆ ಮಾಡಿ...]

auto

ವಿದೇಶಿ ಹೂಡಿಕೆಗೆ ಸಂಬಂಧಿಸಿ ಸಾರಿಗೆ ಇಲಾಖೆ ಸೂಕ್ತ ನಿಯಮಾವಳಿ ರಚಿಸಬೇಕು ಎಂಬ ಬೇಡಿಕೆ ಇಡಲಾಗುವುದು ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದ್ದಾರೆ.

ಮೊಬೈಲ್ ಅಪ್ಲಿಕೇಷನ್ ನೆರವಿನಲ್ಲಿ ಗ್ರಾಹಕರಿಗೆ ಸೇವೆ ನೀಡುವ ಟ್ಯಾಕ್ಸಿಗಳು ನಗರದಲ್ಲಿ ಹೆಚ್ಚುತ್ತಿವೆ. ಟ್ಯಾಕ್ಸಿ ಕಂಪನಿಗಳು ಕಡಿಮೆ ಬಾಡಿಗೆ ತೆಗೆದುಕೊಳ್ಳುತ್ತಿರುವುದು ಮತ್ತು ಪ್ರಚಾರಕ್ಕೆಂದು ಅನೇಕ ಕೊಡುಗೆ ನೀಡುತ್ತಿರುವುದು ಆಟೋ ಗಳಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಆರೋಪಿಸಿದ್ದಾರೆ.[ಕ್ಯಾಬ್ ಬ್ಯಾನ್: ಬೆಂಗಳೂರು ಟ್ಯಾಕ್ಸಿ ಚಾಲಕರು ಏನಂತಾರೆ?]

ಟ್ಯಾಕ್ಸಿ ಸೇವೆಗೆ ಸ್ಪಷ್ಟ ನಿಯಮಾವಳಿ ರೂಪಿಸಲು ಸಾರಿಗೆ ಇಲಾಖೆಯನ್ನು ಒತ್ತಾಯಿಸಿ ಆರ್ ಟಿಒ ಮುಂದೆಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರುದ್ರಮೂರ್ತಿ ತಿಳಿಸಿದ್ದಾರೆ.

English summary
Bengaluru: Autorickshaw Union decided to go on a day strike against FDI investment in Taxi and Maxi cabs. Union ready to siege Vidhana Soudha on February 13.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X