ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ. ಅಯ್ಯಪ್ಪ ದೊರೆ ಹತ್ಯೆ; ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20 : ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಡಾ. ಅಯ್ಯಪ್ಪ ದೊರೆ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ಹಿಡಿಯಲು ಹೋದಾಗ ಇಬ್ಬರು ಪೊಲೀಸರು ಸಹ ಗಾಯಗೊಂಡಿದ್ದಾರೆ.

ಡಾ. ಅಯ್ಯಪ್ಪ ದೊರೆ ಹತ್ಯೆ ಪ್ರಕರಣದ ಮೂರನೇ ಆರೋಪಿ ಗಣೇಶ್ ಮೇಲೆ ಪೊಲೀಸರು ಭಾನುವಾರ ಗುಂಡು ಹಾರಿಸಿದ್ದಾರೆ. ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಅಯ್ಯಪ್ಪ ಕೊಲೆಗೆ ಮೂರು ತಿಂಗಳು ಸ್ಕೆಚ್, ಹತ್ಯೆ ಬಳಿಕ ಪಾರ್ಟಿ! ಅಯ್ಯಪ್ಪ ಕೊಲೆಗೆ ಮೂರು ತಿಂಗಳು ಸ್ಕೆಚ್, ಹತ್ಯೆ ಬಳಿಕ ಪಾರ್ಟಿ!

ಹೆಬ್ಬಾಳ ಬಳಿ ಗಣೇಶ್ ಅಡಗಿ ಕುಳಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಪೊಲೀಸರು ಸುತ್ತುವರೆದಿದ್ದರು. ಈ ವೇಳೆ ಆತ ಪಿಎಸ್‌ಐ ಯಲ್ಲವ್ವ ಮತ್ತು ಕಾನ್ಸ್‌ಟೇಬಲ್ ಮಲ್ಲಿಕಾರ್ಜುನ್ ಮೇಲೆ ಆತ ಹಲ್ಲೆ ಮಾಡಿದ್ದ.

ಅಯ್ಯಪ್ಪ ಕೊಲೆಗೆ 1 ಕೋಟಿ ಸುಪಾರಿ, ಹತ್ಯೆ ಮಾಡಿದ್ದು ವಿವಿ ನೌಕರ ಅಯ್ಯಪ್ಪ ಕೊಲೆಗೆ 1 ಕೋಟಿ ಸುಪಾರಿ, ಹತ್ಯೆ ಮಾಡಿದ್ದು ವಿವಿ ನೌಕರ

Ayyappa Dore Murder Case Police Open Fire On Accused

ಆದ್ದರಿಂದ, ಪೊಲೀಸರು ಗಣೇಶ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಆರೋಪಿ ಗಣೇಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಯಲ್ಲವ್ವ ಮತ್ತು ಮಲ್ಲಿಕಾರ್ಜುನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಾ. ಅಯ್ಯಪ್ಪ ದೊರೆ ಹತ್ಯೆ; ಸುಧೀರ್ ಅಂಗೂರ್ ಬಂಧನಡಾ. ಅಯ್ಯಪ್ಪ ದೊರೆ ಹತ್ಯೆ; ಸುಧೀರ್ ಅಂಗೂರ್ ಬಂಧನ

ಆರೋಪಿ ಗಣೇಶ್ ಮುನಿರೆಡ್ಡಿಪಾಳ್ಯದಲ್ಲಿ ಪಂಕ್ಚರ್ ಶಾಪ್ ಇಟ್ಟುಕೊಂಡಿದ್ದಾನೆ. ಡಾ. ಅಯ್ಯಪ್ಪ ದೊರೆ ಹತ್ಯೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದಾನೆ. ಹತ್ಯೆಯ ಸಂಚು ರೂಪಿಸಿದ ಜೊತೆಗೆ ಇತರ ಆರೋಪಿಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ.

ಅಯ್ಯಪ್ಪ ದೊರೆ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಧೀರ್ ಅಂಗೂರ್ ಮತ್ತು ಸೂರಜ್ ಸಿಂಗ್‌ರನ್ನು ಪೊಲೀಸರು ಅಕ್ಟೋಬರ್ 30ರ ತನಕ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

English summary
Police open fire on Ganesh accused of murder case of Dr. Ayyappa Dore former VC of Alliance University. 5 accused arrested till connection with murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X