ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಕೃಷಿ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಖಾಲಿ: ಬಿ.ಸಿ.ಪಾಟೀಲ್ ಪತ್ರ

|
Google Oneindia Kannada News

ಬೆಂಗಳೂರು, ಮಾರ್ಚ್.09: ಕರ್ನಾಟಕ ಕೃಷಿ ಇಲಾಖೆಯ ಗ್ರೂಪ್ -ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕೃಷಿ ಸಚಿವ ಬಿ.ಸಿ ಪಾಟೀಲ್ ಪತ್ರ ಬರೆದಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿದರು. ಮುಂಬಡ್ತಿ ಕೋಟಾದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರ ಕುರಿ ಕಾಯಲು ತೋಳವನ್ನು ಬಿಟ್ಟಂತೆ ಆಗಿದೆಸರ್ಕಾರ ಕುರಿ ಕಾಯಲು ತೋಳವನ್ನು ಬಿಟ್ಟಂತೆ ಆಗಿದೆ

ಸೋಮವಾರ ಜೆಡಿಎಸ್ ಸದಸ್ಯ ಹೆಚ್.ಡಿ.ರೇವಣ್ಣ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಸಚಿವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿ ಇರಿಸಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

Agricultural Minister B.C.Patil Letter To Fill The Vacancies In The Agriculture Department

ನೇರ ನೇಮಕಾತಿ ಮೂಲಕ ಹುದ್ದೆಗಳ ಭರ್ತಿ:

2018-19 ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು. ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಕೃಷಿ ಇಲಾಖೆಯಲ್ಲಿ 3,640 ಹುದ್ದೆಗಳು ಖಾಲಿಯಿದ್ದು, 2018-19ನೇ ಸಾಲಿನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಡಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

English summary
Agricultural Minister B.C.Patil Letter To Fill The Vacancies In The Agriculture Department. Now More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X