Bengaluru property: ಬಿ - ಖಾತಾ ವಿಚಾರದಲ್ಲಿ ಭರ್ಜರಿ ಗುಡ್ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್
Bengaluru property: ಬೆಂಗಳೂರಿನ ಆಸ್ತಿದಾರರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಆಸ್ತಿಗಳ ಪರಿವರ್ತನೆಯಲ್ಲಿ ಎದುರಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾ ಆಸ್ತಿ ಪರಿವರ್ತನೆಯಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅವಕಾಶ ಮಾಡಿಕೊಟ್ಟಿದೆಯಾದರೂ, ಖಾತಾ ಪರಿವರ್ತನೆ ವಿಳಂಬ ಹಾಗೂ ಗೈಡ್ಲೈನ್ ವ್ಯಾಲ್ಯೂವ್ನ ಮೇಲೆ ಭಾರೀ ಮೊತ್ತ ನಿಗದಿ ಮಾಡಿರುವುದು ಸಮಸ್ಯೆ ಆಗುತ್ತಿದೆ. ಇದೀಗ ಕಾಲ ಮಿತಿಯಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಗಡುವು ನಿಗದಿ ಮಾಡಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

15 ದಿನಗಳಲ್ಲಿ ಸಿಗಲಿದೆ ಬಿ ಖಾತಾ
ಬಿ ಖಾತಾದಿಂದ ಎ ಖಾತಾ ಪರಿವರ್ತನೆ ವಿಚಾರದಲ್ಲಿ 7 ಸಾವಿರ ಜನರು ಅರ್ಜಿ ನೀಡಿದ್ದು, ಅವರು ನಕ್ಷೆ ನೀಡಬೇಕಿತ್ತು. ಈಗ ನಮ್ಮ ಅಧಿಕಾರಿಗಳೇ ಸ್ಥಳಕ್ಕೆ ಹೋಗಿ ನಕ್ಷೆ ರೂಪಿಸುವ ಕೆಲಸ ಮಾಡಬೇಕು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ 15 ದಿನಗಳಲ್ಲಿ ಬಿ ಖಾತಾದಿಂದ ಎ ಖಾತಾ ಅನುಮೋದನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 300 ಅರ್ಜಿಗಳನ್ನು ನಕ್ಷೆ ಹೊರತಾಗಿಯೂ ಅನುಮೋದನೆ ಮಾಡಲಾಗಿದೆ. ನಕ್ಷೆ ಒದಗಿಸುಲು ಆಗದವರಿಗೆ 15 ದಿನಗಳಲ್ಲಿ ಆನ್ಲೈನ್ ಶುಲ್ಕ ಕಟ್ಟಿಸಿಕೊಂಡು ಖಾತಾ ಬದಲಾವಣೆ ಮಾಡಲು ನಿರ್ಧರಿಸಿದ್ದೇವೆ. 1.02 ಲಕ್ಷ ಅರ್ಜಿಗಳ ಪೈಕಿ 56 ಸಾವಿರ ಅರ್ಜಿಗಳು ಅನುಮೋದನೆ ಪಡೆದಿದ್ದು, 45 ಸಾವಿರ ಅರ್ಜಿಗಳು ವಜಾಗೊಂಡಿವೆ. ವಜಾಗೊಂಡ ಅರ್ಜಿಗಳನ್ನು ಮತ್ತೆ ಪರಿಶೀಲಿಸಿ ವಜಾ ಮಾಡುವುದಕ್ಕೆ ಕಾರಣ ಪತ್ತೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಜಿಬಿಎ ಹಾಗೂ ಪಾಲಿಕೆಗಳು 15 ದಿನಗಳಲ್ಲಿ ಬಿ ಖಾತಾಯಿಂದ ಎ ಖಾತಾ ಅನುಮೋದನೆ ಮಾಡಬೇಕು ಎಂದು ಸೂಚಿಸಲಾಗಿದೆ.#BKhata #AKhata pic.twitter.com/tpEBDYhUWC
— DK Shivakumar (@DKShivakumar) February 8, 2026
ಡಿ.ಕೆ ಶಿವಕುಮಾರ್ ಟ್ವೀಟ್
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ 15 ದಿನಗಳಲ್ಲಿ ಬಿ ಖಾತಾಯಿಂದ ಎ ಖಾತಾ ಅನುಮೋದನೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
-
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications