B- Khata: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ: ಡಿಸಿಎಂ ಡಿ.ಕೆ ಶಿವಕುಮಾರ್ ಲೆಕ್ಕಾಚಾರ ತಲೆಕೆಳಗೆ!
B- Khata: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಲಿದೆ. ಅಲ್ಲದೇ ಇದರಿಂದ ಕೋಟ್ಯಾಂತರ ರೂಪಾಯಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಲಾಭವಾಗಲಿದೆ ಎನ್ನುವ ಲೆಕ್ಕಾಚಾರಗಳು ಬಿ- ಖಾತಾ ಹಾಗೂ ಇ - ಖಾತಾದಲ್ಲಿ ತೆಲೆಕೆಳಗಿದೆ. ಮುಖ್ಯವಾಗಿ ಬಿ - ಖಾತಾದ ಆಸ್ತಿದಾರರು ಎ - ಖಾತಾಗೆ ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಲೆಕ್ಕಾಚಾರವಾಗಿತ್ತು. ಆದರೆ ಈ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರಗಳು ತೆಲೆಕೆಳಗಾಗಿವೆ. ಅದರ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅಂದಾಜು 30ರಿಂದ 40 ಲಕ್ಷಕ್ಕೂ ಹೆಚ್ಚು ಬಿ - ಖಾತಾ ಆಸ್ತಿಗಳಿದ್ದು, ಈ ಆಸ್ತಿಗಳ ಆಸ್ತಿದಾರರು ಬಿ ಖಾತಾಗೆ ತಮ್ಮ ಆಸ್ತಿಯನ್ನು ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದರಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರ ಪೂರ್ತಿ ಉಲ್ಟಾ ಹೊಡೆದಿದೆ.

ಆಸ್ತಿದಾರರು ತಮ್ಮ ಆಸ್ತಿಯನ್ನು ಬಿ - ಖಾತಾ ದಿಂದ ಎ - ಖಾತಾ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ನಿರಾಸಕ್ತಿ ತೋರಿಸಿದ್ದಾರೆ. ಬೆಂಗಳೂರಿನಲ್ಲಿ ಲಕ್ಷ ಲಕ್ಷ ಬಿ ಖಾತಾ ಆಸ್ತಿಗಳಿದ್ದು, ಈ ಖಾತಾಗಳನ್ನು ಎ ಖಾತಾಗಳಿಗೆ ಪರಿವರ್ತನೆ ಮಾಡಿಕೊಂಡರೆ ರಾಜ್ಯ ಸರ್ಕಾರಕ್ಕೂ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ. ಅಲ್ಲದೇ ಅರ್ಜಿಗಳ ಸಲ್ಲಿಕೆ ಹಾಗೂ ವಿಲೇವಾರಿಯಿಂದಲೂ ಆದಾಯ ಬರಲಿದೆ ಎಂದು ನಿರೀಕ್ಷಿಸಲಾಗಿತ್ತು.
ಇನ್ನು ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಂಡರೆ ರಿಯಲ್ ಎಸ್ಟೇಟ್ ಬೂಸ್ಟ್ ಆಗಲಿದೆ. ರಿಯಲ್ ಎಸ್ಟೇಟ್ ಬೂಸ್ಟ್‌ನಿಂದ ಆಸ್ತಿಗಳ ಬೆಲೆ ಭರ್ಜರಿ ಹೆಚ್ಚಳವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಇದೀಗ ಆ ಲೆಕ್ಕಾಚಾರಗಳು ಸಂಪೂರ್ಣವಾಗಿ ತೆಲೆಕೆಳಗಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳ ವ್ಯಾಪ್ತಿಯಲ್ಲೂ ಬಿ - ಖಾತಾದಿಂದ ಎ- ಖಾತಾ ಪರಿವರ್ತನೆಗೆ ಸಂಪೂರ್ಣ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ನಗರ ಪಾಲಿಕೆಯಲ್ಲಿ ಕೇವಲ 5 ಅರ್ಜಿಗಳು ಬಿ - ಖಾತಾದಿಂದ ಎ - ಖಾತಾ ಪರಿವರ್ತನೆಗೆ ಸಲ್ಲಿಕೆಯಾಗಿವೆ. ಇನ್ನುಳಿದ ನಾಲ್ಕು ಪಾಲಿಕೆಗಳಲ್ಲಿ ಈ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿ ಖಾತಾ ಇರುವ ಆಸ್ತಿದಾರರಿಗೆ ನಗರಾಭಿವೃದ್ಧಿ ಇಲಾಖೆಯು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿತ್ತು. ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಅವಕಾಶ ಮಾಡಿಕೊಡಲಾಗಿದ್ದು, 5% ಮಾರ್ಗಸೂಚಿ ದರ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಇದೆ. ಆದರೆ, ಡಿ.ಕೆ ಶಿವಕುಮಾರ್ ಅವರ ಮಹತ್ವಕಾಂಕ್ಷೆಯ ಎ ಖಾತಾ ಪರಿವರ್ತನೆ ಪ್ಲ್ಯಾನ್‌ಗೆ ಆಸ್ತಿದಾರರು ಕ್ಯಾರೇ ಎನ್ನುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇದಕ್ಕೆ ಮುಖ್ಯ ಕಾರಣ ಪರಿವರ್ತನೆಗೆ ಲಕ್ಷ ಲಕ್ಷ ರೂಪಾಯಿ ಖರ್ಚಾಗುವ ಸಾಧ್ಯತೆ ಇರುವುದು ಸಹ ಒಂದಾಗಿದೆ ಎಂದು ಹೇಳಲಾಗುತ್ತಿದೆ.
ಬಿ ಖಾತಾ ಆದಾಯ ನಿರೀಕ್ಷೆ: ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ಯೋಜನೆಯಿಂದ ಭಾರೀ ಆದಾಯ ಗಳಿಸಲಿದೆ ಎಂದು ನಿರೀಕ್ಷೆ ಮಾಡಿತ್ತು. ಆದರೆ ರಾಜ್ಯ ಸರ್ಕಾರದ ಆ ನಿರೀಕ್ಷೆಗಳು ತಲೆಕೆಳಗಾಗಿವೆ.
ಇನ್ನು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಬಿ ಖಾತಾದ ವಿಚಾರದಲ್ಲಿ ನೀಡಿದ ಒಂದೇ ಒಂದು ಹೇಳಿಕೆಯಿಂದ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರಗಳು ತಲೆಕೆಳಗಾಗಿವೆ ಎಂದು ಹೇಳಲಾಗುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications