B Khata to A Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ: ಗೈಡ್‌ಲೈನ್ಸ್‌ ವ್ಯಾಲ್ಯೂ ಇಳಿಕೆ - ಡಿ.ಕೆ ಶಿವಕುಮಾರ್‌ ಗುಡ್‌ನ್ಯೂಸ್

B Khata to A Khata: ಬೆಂಗಳೂರು ಸೇರಿದಂತೆ ಕರ್ನಾಟಕದ ಆಸ್ತಿದಾರರಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಆಸ್ತಿದಾರರಿಗೆ ಆಸ್ತಿ ಮೇಲಿನ ಗೈಡ್‌ಲೈನ್ಸ್‌ ವ್ಯಾಲ್ಯೂ ಸಮಸ್ಯೆ ಆಗಿತ್ತು.

ಇದೀಗ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಆಸ್ತಿಗಳ ಮೇಲಿನ ಗೈಡ್‌ಲೈನ್ಸ್‌ ವ್ಯಾಲ್ಯೂ ಇಳಿಕೆ ಮಾಡಲಾಗಿದೆ. ಎಷ್ಟು ಬದಲಾವಣೆ ಮಾಡಲಾಗಿದೆ ಹಾಗೂ ಬಿ - ಖಾತಾದಿಂದ ಎ - ಖಾತಾ ಬದಲಾವಣೆಯಲ್ಲಿ ಆಗಿರುವ ಹೊಸ ಬದಲಾವಣೆಗಳೇನು ಮತ್ತು ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

B Khata to A Khata

B Khata to A Khata: ಗೈಡ್‌ಲೈನ್ಸ್‌ ವ್ಯಾಲ್ಯೂ ಇಳಿಕೆ

ಬೆಂಗಳೂರಿನ ಆಸ್ತಿದಾರರಿಗೆ ಸಮಸ್ಯೆ ಆಗುತ್ತಿದ್ದ ಗೈಡ್‌ಲೈನ್ಸ್‌ ವ್ಯಾಲ್ಯೂ ಇಳಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಿ ಖಾತಾ ಆಸ್ತಿದಾರರು ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಾಗಿತ್ತು. ಈ ಹಿಂದೆ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಶೇ 5ರಷ್ಟು ಗೈಡ್‌ಲೈನ್ಸ್‌ ವ್ಯಾಲ್ಯೂ ನಿಗದಿ ಮಾಡಲಾಗಿತ್ತು. ಅದನ್ನು ಇದೀಗ ಶೇ 2ಕ್ಕೆ ಇಳಿಕೆ ಮಾಡಿರುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದೀಗ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಅಂತಿಮವಾಗಿ - ಹೊಸದಾಗಿ 100 ದಿನಗಳ ಕಾಲಾವಕಾಶ ನೀಡಲಾಗಿದೆ. ಒಂದೊಮ್ಮೆ ಈ ಅವಧಿಯಲ್ಲಿ ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಳ್ಳದೆ ಇದ್ದರೆ ಆ ಆಸ್ತಿದಾರರಿಗೆ ತಮ್ಮ ಆಸ್ತಿಯ ಗೈಡ್‌ಲೈನ್ಸ್‌ ವ್ಯಾಲ್ಯೂನ ಮೇಲೆ ಶೇ 5ರಷ್ಟು ಹಣ ಪಾವತಿ ಮಾಡಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+