B-Khata: ಬಿ - ಖಾತಾದಿಂದ ಎ - ಖಾತಾ ಗುಡ್‌ನ್ಯೂಸ್ ಜೊತೆ ಈ ಆಸ್ತಿಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಬೇಡ!
B-Khata: ಬೆಂಗಳೂರಿನಲ್ಲಿ ಆಸ್ತಿಗಳ ಬಿ - ಖಾತಾದಿಂದ ಎ - ಖಾತಾಗೆ ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರವು ಬೆಂಗಳೂರಿನ ಆಸ್ತಿದಾರರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನಲ್ಲಿ ಹಾಗೂ ರಾಜ್ಯದಾದ್ಯಂತ ಬಿ ಖಾತಾ ಹೊಂದಿರುವ ಆಸ್ತಿದಾರರು ಭಾರೀ ಸಂಕಷ್ಟವನ್ನು ಅನುಭವಿಸುತ್ತಿದ್ದರು. ಬುಧವಾರ ರಾಜ್ಯ ಸರ್ಕಾರವು ಈ ವಿಚಾರದಲ್ಲಿ ಭಾರೀ ದೊಡ್ಡ ರಿಲೀಫ್ ಕೊಟ್ಟಿದೆ. ಈ ರೀತಿ ಇರುವಾಗಲೇ ಸ್ವಾಧೀನಾನುಭವ ಪ್ರಮಾಣಪತ್ರದ ವಿನಾಯಿತಿ ನೀಡುವ ಮೂಲಕ ಆಸ್ತಿದಾರರಿಗೆ ಸಂತೋಷದ ಸುದ್ದಿಯೊಂದನ್ನು ಕೊಟ್ಟಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ಆಸ್ತಿದಾರರಿಗೆ ಕೆಲವೊಂದು ಭಾರೀ ಭರ್ಜರಿ ಗುಡ್‌ನ್ಯೂಸ್‌ಗಳನ್ನು ಕೊಡುತ್ತಿದೆ. ಮೊದನೆಯದಾಗಿ ಎಲ್ಲಾ ಆಸ್ತಿಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಎಲ್ಲಾ ಆಸ್ತಿಗಳಿಗೂ ಇ ಖಾತಾ ಕಡ್ಡಾಯ ಮಾಡಲಾಗಿದೆ. ಕಳೆದ ಒಂದು ವರ್ಷದ ಹಿಂದ ಎಲ್ಲಾ ಆಸ್ತಿಗಳಿಗೂ ಇ ಖಾತಾ ಕಡ್ಡಾಯ ಮಾಡಲಾಗಿದ್ದು, ಇದರಿಂದ ಆಸ್ತಿಗಳ ಖರೀದಿ ಹಾಗೂ ಮಾರಾಟದಲ್ಲಿನ ಅವ್ಯವಹಾರಗಳು ನಿಂತಿವೆ.

ಅಲ್ಲದೇ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇ ಖಾತಾ ಪಡೆಯುವುದಕ್ಕೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಇ ಖಾತಾಗೆ ಮೊಬೈಲ್ ಆ್ಯಪ್ ಪರಿಚಯಿಸಲಾಗಿದೆ. ಇದೀಗ ಬಿ -ಖಾತಾ ಮತ್ತು ಇ - ಖಾತಾ ಗುಡ್‌ನ್ಯೂಸ್ ಜೊತೆಗೆ ಮತ್ತೊಂದು ಮಹತ್ವದ ಅಪ್ಡೇಟ್ಸ್ ನೀಡಲಾಗಿದೆ.
ಸರ್ಕಾರವು ನಿರ್ದಿಷ್ಟ ಆಸ್ತಿಗಳಿಗೆ ಸಂಬಂಧಿಸಿದಂತೆ ಸ್ವಾಧೀನಾನುಭವ ಪ್ರಮಾಣ ಪತ್ರ ಬೇಡ ಎಂದು ಹೇಳಿದೆ. ಈ ಸಂಬಂಧ ಅಧಿಕೃತ ಆದೇಶವನ್ನೂ ಹೊರಡಿಸಲಾಗಿದೆ. ಇದು ಬೆಂಗಳೂರಿನ ಆಸ್ತಿದಾರರಿಗೆ ಸಂತೋಷವನ್ನುಂಟು ಮಾಡಿದೆ. ಕರ್ನಾಟಕ ಸರ್ಕಾರದ ನಡವಳಿಗಳ ಪ್ರಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024 ರ ಕಲಂ 241(7) ಅವಕಾಶದಡಿ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪುಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರವು ಮಹತ್ವದ ಆದೇಶವನ್ನು ಮಾಡಿದೆ.
ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅನ್ವಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, 1200 ಚದರ ಅಡಿಗಳ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ, ನೆಲ+2 ಅಂತಸ್ತು ಅಥವಾ + 3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ, ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಮಾಡಿದೆ.
ಈ ಆದೇಶವನ್ನು ದಿನಾಂಕ: 09-10-2025 ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಹೊರಡಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಲಕ್ಷ್ಮೀಸಾಗರ್ ಎನ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸ್ತಿದಾರರಿಗೆ ಗುಡ್‌ನ್ಯೂಸ್: ಇನ್ನು ಬೆಂಗಳೂರಿನಲ್ಲಿ ಸಾವಿರಾರು ಜನ ಆಸ್ತಿದಾರರು ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದಕ್ಕೆ ಸಂಕಷ್ಟ ಅನುಭವಿಸುತ್ತಿದ್ದರು. ಅಲ್ಲದೇ ನಿರ್ದಿಷ್ಟ ಕಟ್ಟಡಗಳು / ಆಸ್ತಿಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರದಿಂದ ವಿನಾಯಿತಿ ನೀಡಬೇಕು ಎಂದು ಆಸ್ತಿದಾರರು ಮನವಿ ಮಾಡಿದ್ದರು. ಈ ಸಂಬಂಧ ಈಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿತ್ತು. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನೇ ಕೈಗೊಳ್ಳಲಾಗಿದೆ.












Click it and Unblock the Notifications