ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ 4ನೇ ಬಾರಿ ಆಯ್ಕೆ

|
Google Oneindia Kannada News

ಬೆಂಗಳೂರು ಜೂ. 27: ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಭಾನುವಾರ ಚುನಾಯಿತರಾಗಿದ್ದಾರೆ. ಮುಂದಿನ ಮೂರು ವರ್ಷದವರೆಗೆ ಆಡಳಿತ ನಡೆಸಲಿದ್ದಾರೆ.

ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರ ಆಯ್ಕೆ ಚುನಾವಣೆ ನಡೆಯಿತು. ಈ ವೇಳೆ ಬಿ.ಎಲ್.ಶಂಕರ್ ಅವರು ಒಟ್ಟು 122ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರೊ.ಕೆ.ಇ.ರಾಧಾಕೃಷ್ಣ ಕೇವಲ 20 ಮತಗಳನ್ನು ಪಡೆದರು. ಬಹುಮತ ಪಡೆಯುವ ಮೂಲಕ ಬಿ.ಎಲ್.ಶಂಕರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇನ್ನೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಅಪ್ಪಾಜಯ್ಯ, ಟಿ.ಪ್ರಭಾಕರ್ ಮತ್ತು ಎ.ರಾಮಕೃಷ್ಣಪ್ಪ ಮತ್ತು ಎಸ್.ಎನ್.ಶಶಿಧರ (ಪ್ರಧಾನ ಕಾರ್ಯದರ್ಶಿ) ಚುನಾಯಿತರಾಗಿದ್ದಾರೆ. ಸಹಾಯಕ ಕಾರ್ಯದರ್ಶಿ ಟಿ.ಚಂದ್ರಶೇಖರ್ ಹಾಗೂ ಬಿ.ಎಲ್.ಶ್ರೀನಿವಾಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

B L Shankar Elect to President of Karnataka Chitrakala Parishath

ಕಾರ್ಯಾಕಾರಿ ಸಮಿತಿ ಸದಸ್ಯರಾಗಿ ಟಿ.ವಿ.ತಾರಕೇಶ್ವರಿ, ಆರ್. ಜಿ.ಭಂಡಾರಿ, ಸಿ.ಪಿ.ಉಷಾರಾಣಿ, ಬಿ.ವೈ.ವಿನೋದಾ, ಸುಬ್ರಹ್ಮಣ್ಯ ಕುಕ್ಕೆ ಸೇರಿದಂತೆ ಮತ್ತಿತರರು ಆಯ್ಕೆಯಾಗಿದ್ದಾರೆ.

ಮಾಜಿ ಸಭಾಪತಿ

ಕಾಂಗ್ರೆಸ್ ಮುಖಂಡರು ಆದ ಬಿ.ಎಲ್ ಶಂಕರ್ ಅವರಿಗೆ ಸಭಾಪತಿಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ. ಅಲ್ಲದೇ ಇತ್ತೀಚೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಉಪಾಧ್ಯಕ್ಷರೂ ಆಗಿದ್ದಾರೆ. ಅವರು ಪರಿಷತ್ತಿನ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ತಮ್ಮ ಅವಧಿಯಲ್ಲಿ ಪರಿಷತ್ತು ಕುರಿತು ಹಲವು ಕನಸುಗಳನ್ನು ಹೊಂದಿದ್ದಾರೆ.

Recommended Video

ದುರ್ಗಾ ದೇವಿಯ ಹರಕೆಯ ಕೋಣ ಕೊಡ್ತಿರೋ ಕಾಟದಿಂದ ಇವ್ರಿಬ್ಬರಿಗೆ ಯಾವಾಗ ಮುಕ್ತಿ.. | *Viral | OneIndia Kannada

"ಇಲ್ಲಿನ ವಸ್ತು ಸಂಗ್ರಹಾಲಯ ಮೇಲ್ದರ್ಜೆಗೆ ಏರಿಸುವುದು, ಇರುವ ಒಂದೇ ಸಂಜೆ ಕಾಲೇಜನ್ನು ವಿಸ್ತರಿಸಿ ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು. ದೆಹಲಿ ಮಾದರಿಯಲ್ಲಿ ಬೆಂಗಳೂರಿನ ಪರಿಷತ್ತಿನ ಆವರಣದಲ್ಲಿ ಕಲಾ ಉತ್ಸವ ಹಮ್ಮಿಕೊಳ್ಳುವ ಕನಸು ಹೊಂದಿದ್ದೇನೆ," ಎಂದು ಅವರು ನಾಲ್ಕನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿ.ಎಲ್.ಶಂಕರ್ ಪ್ರತಿಕ್ರಿಯಿಸಿದ್ದಾರೆ.

English summary
KPCC Vice President B L Shankar Elect to President of Karnataka Chitrakala Parishath on Sunday, Who received total 122votes,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X