ಭಜರಂಗ ಕಾರ್ಯಕರ್ತನ ಹತ್ಯೆ; ಸಚಿವ ಈಶ್ವರಪ್ಪ ಹೇಳಿಕೆ ಸಮರ್ಥಿಸದ ಸಿಎಂ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 21: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 'ಮುಸ್ಲಿಂ ಗೂಂಡಾಗಳೇ ಹಿಂದೂ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ' ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದರು.

ಬೆಂಗಳೂರಿನಲ್ಲಿ ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅವರು (ಈಶ್ವರಪ್ಪ) ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ ಎಂದು ಸ್ಪಷ್ಟಪಡಿಸಿದರು. ಆ ಮೂಲಕ ಪರೋಕ್ಷವಾಗಿ ಸಚಿವ ಈಶ್ವರಪ್ಪನವರಿಗೂ ಟಾಂಗ್ ಕೊಟ್ಟರು.

ಕಳೆದ ಭಾನುವಾರ ರಾತ್ರಿ ಹರ್ಷ ಎನ್ನುವ ಯುವಕನ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ. ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

BajrangDal Activist Murder; CM Bommai Unsubstantiated Minister Eshwarappa Statement

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, "ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ. ತನಿಖೆ ಈಗಾಗಲೇ ಪ್ರಾರಂಭವಾಗಿದ್ದು, ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು. ಶಿವಮೊಗ್ಗದ ಜನತೆ ಯಾವುದೇ ಉದ್ವೇಗಕ್ಕೆ, ಪ್ರಚೋದನೆಗೆ ಒಳಗಾಗದೇ ಶಾಂತಿಯನ್ನು ಕಾಪಾಡಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,'' ಎಂದು ತಿಳಿಸಿದ್ದಾರೆ.

BajrangDal Activist Murder; CM Bommai Unsubstantiated Minister Eshwarappa Statement

ಸಚಿವ ಈಶ್ವರಪ್ಪ ಹೇಳಿಕೆ ಏನು?
ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ (ಭಾನುವಾರ) ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂಥವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಎಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಎಂದು ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು.

ಕೆಲವೇ ಹೊತ್ತಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತೇನೆ. ಇದರ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಜತೆ ಮಾತಾಡಿದೀನಿ. ಶಿವಮೊಗ್ಗದಲ್ಲಿ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಡಿ.ಕೆ. ಶಿವಕುಮಾರ್ ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿ.ಕೆ. ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ ಕಿಡಿಕಾರಿದ್ದರು.

Recommended Video

      ಪಂದ್ಯದ ದಿಕ್ಕನ್ನೇ ಬದಲಿಸಿ ಇಶಾನ್ ಕಿಶನ್! | Oneindia kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+