ಬೆಂಗಳೂರು: ಪೋಲಿಸರ ಹಾವಳಿಗೆ ಬ್ರೇಕ್‌ ಹಾಕಿ, ಪ್ರತಿಭಟನೆಯಲ್ಲಿ ಬೇಕರಿ, ಕಾಂಡಿಮೆಂಟ್ಸ್ ಮಾಲೀಕರ ಆಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಾನಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸರ ಕಿರುಕುಳದಿಂದ ಬೇಸತ್ತಿರುವ 58 ಸಾವಿರಕ್ಕೂ ಹೆಚ್ಚು ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿ ಮಾಲೀಕರು ಮತ್ತು ಬೀದಿ ವ್ಯಾಪಾರಿಗಳು ಗುರುವಾರ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ತಮ್ಮ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಸೂಕ್ತ ಪರಿಹಾರ ಒದಗಿಸುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನೀಡಿದ ಭರವಸೆಯ ಮೇರೆಗೆ ಪ್ರತಿಭಟನೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ. ಕಾನೂನುಬದ್ಧವಾಗಿ ವ್ಯಾಪಾರ ಮಾಡುತ್ತಿದ್ದರೂ, ನಿಯಮಗಳ ಜಾರಿಯ ನೆಪದಲ್ಲಿ ನಡೆಯುತ್ತಿರುವ ಅನಿಯಂತ್ರಿತ ದಬ್ಬಾಳಿಕೆಯಿಂದ ನಗರದ ಸಣ್ಣ ವ್ಯಾಪಾರಿಗಳು ತೀವ್ರ ಹತಾಶರಾಗಿದ್ದಾರೆ.

Bakery Owners Protest

ಪೊಲೀಸ್ ಕಿರುಕುಳ ಹಾಗೂ ಅಧಿಕಾರಿಗಳ ದಂಡದ ಭೀತಿ

ಸಣ್ಣ ಪ್ರಮಾಣದ ವ್ಯವಹಾರಗಳನ್ನು ನಡೆಸಿಕೊಂಡು ಪ್ರಾಮಾಣಿಕವಾಗಿ ಜೀವನ ಸಾಗಿಸುತ್ತಿರುವ ವ್ಯಾಪಾರಿಗಳು ನಿತ್ಯವೂ ಒಂದಲ್ಲಾ ಒಂದು ರೀತಿಯ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ನಿಯಮಾನುಸಾರ ಸರಿಯಾಗಿ ತೆರಿಗೆ ಪಾವತಿಸುತ್ತಿದ್ದರೂ, ಆಗಾಗ ಅಂಗಡಿಗಳ ಮೇಲೆ ದಿಢೀರ್ ತಪಾಸಣೆ ನಡೆಸುವುದು, ಸುಮ್ಮಸುಮ್ಮನೆ ದಂಡ ವಿಧಿಸುವುದು ಹಾಗೂ ಬೆದರಿಕೆ ಒಡ್ಡುವಂತಹ ಘಟನೆಗಳು ಹೆಚ್ಚಾಗುತ್ತಿವೆ. ವ್ಯಾಪಾರಿಗಳು ಮೌಖಿಕ ನಿಂದನೆಗೆ ಒಳಗಾಗುತ್ತಿರುವುದು ಮಾತ್ರವಲ್ಲದೆ, ಪೊಲೀಸ್ ಠಾಣೆಗಳು ಹಾಗೂ ನಾಗರಿಕ ಕಚೇರಿಗಳಲ್ಲಿ ದೀರ್ಘಕಾಲದ ವಿಚಾರಣೆಗೆ ಗುರಿಯಾಗುತ್ತಿದ್ದಾರೆ.

ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ರಾಜಧಾನಿಯಾದ್ಯಂತ ಸಣ್ಣ ಬೇಕರಿ, ಕಾಂಡಿಮೆಂಟ್ಸ್‌ ಬಂದ್!
ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ರಾಜಧಾನಿಯಾದ್ಯಂತ ಸಣ್ಣ ಬೇಕರಿ, ಕಾಂಡಿಮೆಂಟ್ಸ್‌ ಬಂದ್!

ಇಲಾಖೆಗಳ ಈ ಕಿರುಕುಳದಿಂದಾಗಿ ವ್ಯಾಪಾರವನ್ನು ಅರ್ಧಕ್ಕೇ ನಿಲ್ಲಿಸಿ, ಅಂಗಡಿಗಳನ್ನು ಅನಿಯಂತ್ರಿತವಾಗಿ ಮುಚ್ಚಬೇಕಾದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಾಪಾರಿಗಳು ಫ್ರೀಡಂ ಪಾರ್ಕ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ.

ಸಣ್ಣ ವ್ಯಾಪಾರಿಗಳ ಸಮಸ್ಯೆ: ಪ್ಲಾಸ್ಟಿಕ್ ಹಾಗೂ ತಂಬಾಕು ನೆಪದಲ್ಲಿ ದೌರ್ಜನ್ಯ

ಕೆಲವು ಅಧಿಕಾರಿಗಳು ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ಹೊಂದಿದ್ದಕ್ಕಾಗಿ ಕೇವಲ ಸಣ್ಣ ಚಿಲ್ಲರೆ ವ್ಯಾಪಾರಿಗಳಿಗೆ ಮಾತ್ರ ಭಾರಿ ಮೊತ್ತದ ದಂಡ ವಿಧಿಸುತ್ತಿದ್ದಾರೆ. ಆದರೆ, ಅದೇ ಪ್ಲಾಸ್ಟಿಕ್ ಕವರ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸುವ ಕಾರ್ಖಾನೆಗಳು ಮತ್ತು ಸಗಟು ಪೂರೈಕೆದಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿದೆ.

ಇದರ ಜೊತೆಗೆ, ಸರ್ಕಾರದಿಂದಲೇ ಮಾರಾಟಕ್ಕೆ ಅಧಿಕೃತವಾಗಿ ಅನುಮತಿಸಲಾದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೂ ಸಹ ಅಂಗಡಿಯವರಿಗೆ ಹೆಚ್ಚಿನ ದಂಡ ವಿಧಿಸಲಾಗುತ್ತಿದೆ. ಲಕ್ಷಾಂತರ ಜನರ ಹಸಿವು ನೀಗಿಸುವ ಕೇಂದ್ರಗಳಾಗಿರುವ ಬೇಕರಿಗಳು, ಇಂತಹ ಅವೈಜ್ಞಾನಿಕ ಕ್ರಮಗಳಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅಂಗಡಿಗಳನ್ನು ಮುನ್ನಡೆಸುವುದೇ ಕಷ್ಟಸಾಧ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯು.ಟಿ. ಖಾದರ್ ಭರವಸೆ: ಬೇಡಿಕೆ ಈಡೇರದಿದ್ದರೆ ಬೃಹತ್ ಪ್ರತಿಭಟನೆ

ತಮ್ಮ ಹಕ್ಕುಗಳ ರಕ್ಷಣೆಗಾಗಿ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದ ಸಾವಿರಾರು ವ್ಯಾಪಾರಿಗಳು, ತಮಗೆ ನ್ಯಾಯ ಸಿಗುವವರೆಗೆ ಅಂಗಡಿಗಳನ್ನು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್, ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿ ಮನವಿ ಪತ್ರವನ್ನು ಸ್ವೀಕರಿಸಿದರು.

ಬೇಕರಿ ಹಾಗೂ ಕಾಂಡಿಮೆಂಟ್ಸ್ ಮಾಲೀಕರಿಗೆ ಬಿಬಿಎಂಪಿ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗುವುದು ಮತ್ತು ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ದೃಢವಾದ ಭರವಸೆ ನೀಡಿದರು.

ಸಚಿವರ ಈ ಭರವಸೆಗೆ ಸ್ಪಂದಿಸಿದ ವ್ಯಾಪಾರಿಗಳು, ಮುಷ್ಕರವನ್ನು ಒಂದು ವಾರದ ಕಾಲ ಮುಂದೂಡಲು ನಿರ್ಧರಿಸಿದ್ದಾರೆ. ಆದರೆ, ಈ ಒಂದು ವಾರದೊಳಗೆ ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಗೃಹ ಸಚಿವರ ನಿವಾಸದ ಎದುರು ಎಲ್ಲಾ 58,000ಕ್ಕೂ ಹೆಚ್ಚು ವ್ಯಾಪಾರಿಗಳು ಒಟ್ಟುಗೂಡಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಸಿ ಬಿಸಿ ಬೋಂಡಾ, ಸಮೋಸಾವನ್ನು ಇನ್ಮುಂದೆ ನ್ಯೂಸ್ ಪೇಪರ್‌ನಲ್ಲಿ ಸುತ್ತಿ ಕೊಡುವಂತಿಲ್ಲ: FSSAI ಕಟ್ಟುನಿಟ್ಟಿನ ಆದೇಶ
ಬಿಸಿ ಬಿಸಿ ಬೋಂಡಾ, ಸಮೋಸಾವನ್ನು ಇನ್ಮುಂದೆ ನ್ಯೂಸ್ ಪೇಪರ್‌ನಲ್ಲಿ ಸುತ್ತಿ ಕೊಡುವಂತಿಲ್ಲ: FSSAI ಕಟ್ಟುನಿಟ್ಟಿನ ಆದೇಶ

ಈ ಕುರಿತು ವಿಶೇಷ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷರಾದ ರವಿಶೆಟ್ಟಿ ಬೈಂದೂರ್, "ಸಣ್ಣ ಉದ್ಯಮಿದಾರರ 27 ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾವು ಈ ಪ್ರತಿಭಟನೆ ನಡೆಸಿದ್ದೇವೆ. ಒಂದು ವೇಳೆ ಕಿರುಕುಳ ಇದೇ ರೀತಿ ಮುಂದುವರಿದರೆ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಸರ್ಕಾರ ನಮ್ಮ ನ್ಯಾಯಯುತ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ರಕ್ಷಣೆ ನೀಡಬೇಕು," ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+