ವಾಹನ ಸವಾರರು, ಗಮನಿಸಬೇಕಾಗಿ ವಿನಂತಿ..! ಬೆಂಗಳೂರಿನಲ್ಲಿ ನಾಳೆ ಬಕ್ರೀದ್ ಆಚರಣೆ: ಸಂಚಾರ ನಿರ್ಬಂಧಗಳನ್ನು ಇಲ್ಲಿ ಪರಿಶೀಲಿಸಿ
ಬೆಂಗಳೂರು, ಜೂನ್ 28: ಬೆಂಗಳೂರಿನಲ್ಲಿ ಗುರುವಾರ ಬಕ್ರೀದ್ (ಈದ್ ಅಲ್-ಅಧಾ) ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಹಲವಾರು ಸಂಚಾರ ವ್ಯತ್ಯಯಗಳನ್ನು ಘೋಷಿಸಲಾಗಿದೆ. ಬೆಳಗ್ಗೆ 8 ರಿಂದ 11.30 ರ ವರೆಗೆ ಸಂಚಾರ ವ್ಯತ್ಯಯ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಗುರುವಾರ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬಕ್ರೀದ್ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಯಾಣಿಕರು ಗಮನಿಸಬೇಕಿಗಿ ವಿನಂತಿ
ಬಸವೇಶ್ವರ ವೃತ್ತದಿಂದ ಸಿಐಡಿ ಜಂಕ್ಷನ್‌ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಪ್ರಯಾಣಿಕರು ದೇವರಾಜ ಅರಸು ರಸ್ತೆಯನ್ನು ಬಳಸಲು ಕೋರಲಾಗಿದೆ.
ಲಾಲ್‌ಬಾಗ್ ಮುಖ್ಯ ಗೇಟ್‌ನಿಂದ ಕಣ್ಣಪ್ಪ ಪೆಟ್ರೋಲ್ ಬಂಕ್‌ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಯಾಣಿಕರು ಊರ್ವಶಿ, ಸಿದ್ದಯ್ಯ ರಸ್ತೆ, 34ನೇ ಜಂಕ್ಷನ್, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ ಮತ್ತು ಹೊಸೂರು ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.
ಟೋಲ್ ಗೇಟ್ ಜಂಕ್ಷನ್‌ನಿಂದ ಶಿರಸಿ ವೃತ್ತದವರೆಗೆ ಸಂಚಾರ ನಿರ್ಬಂಧಿಸಿರುವುದರಿಂದ ಸಿರ್ಸಿ ವೃತ್ತದಿಂದ ಬಲ ತಿರುವು ಪಡೆದು ಬಿನ್ನಿ ಮಿಲ್, ಟ್ಯಾಂಕ್ ಬಂಡ್ ರಸ್ತೆ, ಮಾಗಡಿ ರಸ್ತೆ ಮತ್ತು ವಿಜಯನಗರ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಮೈಸೂರು ರಸ್ತೆಯಿಂದ ಸಿಟಿ ಮಾರ್ಕೆಟ್ ಕಡೆಗೆ ಪ್ರಯಾಣಿಸುವವರು ಕಿಮ್ಕೋ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ವಿಜಯನಗರ, ಮಾಗಡಿ ಮುಖ್ಯರಸ್ತೆ ಮತ್ತು ಸಿರ್ಸಿ ವೃತ್ತದ ಮೂಲಕ ಮಾರುಕಟ್ಟೆಗೆ ತೆರಳಬಹುದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಪ್ರಾಣಿ ಬಲಿಗೆ ನಿಷೇಧ
ಸಾರ್ವಜನಿಕ ಸ್ಥಳಗಳಾದ ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಉದ್ಯಾನವನಗಳು ಮತ್ತು ಪೂಜಾ ಸ್ಥಳಗಳ ಆವರಣದ ಒಳಗೆ ಅಥವಾ ಹೊರಗೆ ಪ್ರಾಣಿಗಳನ್ನು ಬಲಿ ನೀಡುವುದನ್ನು ಬಿಬಿಎಂಪಿ ನಿಷೇಧಿಸಿದೆ. ಸೋಮವಾರ ಹೊರಡಿಸಿದ ಸುತ್ತೋಲೆಯಲ್ಲಿ, ಅಧಿಕೃತ ಕಸಾಯಿಖಾನೆಗಳಿಗೆ ಮಾತ್ರ ಪ್ರಾಣಿಗಳನ್ನು ಕಡಿಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬಿಬಿಎಂಪಿಯು ಬೆಂಗಳೂರಿನಲ್ಲಿ ಮಾಂಸ ಮತ್ತು ಗೋಹತ್ಯೆ ನಿಷೇಧ ಹೇರಿತ್ತು.












Click it and Unblock the Notifications