ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಬೇಡ: ಪೊಲೀಸ್ ಆಯುಕ್ತರಿಗೆ ಪತ್ರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 24: ಬೆಂಗಳೂರಲ್ಲಿ ಹೊಸ ವರ್ಷಾಚರಣೆ ನಡೆಸಲು ಅನುಮತಿ ನೀಡಬಾರದು ಎಂದು ಹಿಂದೂ ಸಂಘಟನೆಯೊಂದು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.

ಹೊಸ ವರ್ಷದ ಆರಂಭದಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಹಿತದೃಷ್ಟಿಯಿಂದ ಬೆಂಗಳೂರಿನ ಅತಿ ಹೆಚ್ಚು ಜನರು ಓಡಾಡುವ ಪ್ರದೇಶಗಳಾಗಿರುವ ಎಂಜಿ ರಸ್ತೆ, ಬ್ರಿಗೆಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದೆ.

ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಸಂಚಾಲಕ ಮೋಹನ್ ಗೌಡ ಒಟ್ಟು 2 ಪುಟಗಳ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಪಾಶ್ಚಾತ್ಯ ಸಂಸ್ಕೃತಿಯು ಭಾರತೀಯ ಸಂಸ್ಕೃತಿಯನ್ನು ಹಾಳು ಮಾಡುತ್ತಿದೆ, ಪುರುಷರು, ಮಹಿಳೆಯರೆಲ್ಲರೂ ಒಟ್ಟಿಗೆ ಮದ್ಯಪಾನ, ದೂಮಪಾನ ಮಾಡುತ್ತಾ ತುಂಡು ಉಡುಗೆ ತೊಟ್ಟು ರಸ್ತೆಯಲ್ಲಿ ನೃತ್ಯ ಮಾಡುವುದು ನಮ್ಮ ಸಂಸ್ಕೃತಿಯಲ್ಲ.

Ban new year celebrations in Bengaluru

ಆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ ಹಾಗಾಗಿ ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಮಾಡಿಕೊಡಬಾರದು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ನಡೆದಿರುವ ಘಟನೆಗಳನ್ನು ಮೆಲುಕು ಹಾಕಿರುವ ಅವರು, ಎರಡು ವರ್ಷಗಳ ಹಿಂದೆ ಸಾಕಷ್ಟು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಗಳು ದಾಖಲಾಗಿತ್ತು. ಆ ರೀತಿ ಘಟನೆಗಳು ಮರುಕಳಿಸದಿರುವಂತೆ ನೋಡಿಕೊಳ್ಳಬೇಕು ಹಾಗಾಗಿ ವರ್ಷಾಚರಣೆಯನ್ನೇ ಮಾಡಬಾರದು ಎಂದು ತಿಳಿಸಿದ್ದಾರೆ.

English summary
A right-wing Hindu outfit has appealed to police to ban new year celebrations at the city's signature locations like MG Road and Brigade Road on December 31 to protect the sanctity of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X