Bandh for Cauvery: 1000 ಜನರನ್ನು ಅರೆಸ್ಟ್ ಮಾಡಿದ್ದಾರೆ- ಕುರುಬೂರು ಶಾಂತ್ ಕುಮಾರ್ ಗರಂ
ಬೆಂಗಳೂರು ಸೆಪ್ಟೆಂಬರ್ 26: ಕಾವೇರಿ ನದಿ ನೀರು ನಮಗೆ ಬೇಕೇ ಬೇಕು ಎಂದು ಕರ್ನಾಟಕದಾದ್ಯಂತ ಜನ ಬೀದಿಗಿಳಿದಿದ್ದಾರೆ. ಇಂದು ಬಂದ್‌ಗೆ ಕರೆ ಕೊಟ್ಟ ಬೆನ್ನಲ್ಲೆ ಕಾವೇರಿಗಾಗಿ ಹೋರಾಟಕ್ಕೆ ಬೆಂಬಲ ಹೆಚ್ಚಾಗಿದೆ. ವಿವಿದ ಸಂಘ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಫ್ರೀಡಂ ಪಾರ್ಕ್‌ನತ್ತ ಹೆಜ್ಜೆ ಹಾಕಿದ್ದಾರೆ. ಈ ವೇಳೆ 1000 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಕುರುಬೂರು ಶಾಂತಕುಮಾರ್ ಆಕ್ರೋಶಗೊಂಡಿದ್ದಾರೆ.
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪ್ರತಿಭಟನೆಯ ವೇಳೆ ಪೊಲೀಸರು ವಶಕ್ಕೆ ಪಡೆದರು. ಬಳಿಕ ಕುರುಬೂರು ಶಾಂತಕುಮಾರ್ ಅವರನ್ನು ಫ್ರೀಡಂ ಪಾರ್ಕ್‌ನಲ್ಲಿ ಬಿಡಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್‌ಗೆ ಬೆಂಬಲಿಸಿ ಆಯಾ ಸ್ಥಳದಿಂದ ಹೊರಟ ಕಾರ್ಯಕರ್ತರನ್ನು, ರೈತರನ್ನು, ಸದಸ್ಯರು, ಮುಖಂಡರು, ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆಕ್ರೋಶಗೊಂಡರು.

'ಇವರಿಗೆ ತಮಿಳುನಾಡು ನೀರು ಕೊಡುತ್ತಾ? ಇವರಿಗೆ ಸಂಬಳ ತಮಿಳುನಾಡು ಕೊಡುತ್ತಾ? ಇವರ ದುಡಿಮೆ ತಮಿಳುನಾಡಿಗಾಗಿ ಇರೋದಾ? ಇಡೀ ರಾಜ್ಯದ ಜನ ಸಮಸ್ಯೆಗೆ ಸಿಲುಕಿದ್ದಾರೆ. ನೀರಿಲ್ಲದೆ ಪರದಾಡುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿರುವುದು ಯಾಕೆ?' ಎಂದು ಕುರುಬೂರು ಶಾಂತಕುಮಾರ್ ಅವರು ಪ್ರಶ್ನೆ ಮಾಡಿದರು.
ಹದಿನೇಳು ಸಂಘಟನೆಗಳ ಫ್ರೀಡಂ ಪಾರ್ಕ್‌ನಲ್ಲಿ ಸ್ವಯಂ ಪ್ರೇರಣೆಯಾಗಿ ಫ್ರೀಡಂ ಪಾರ್ಕ್‌ಗೆ ಬರಲಿದ್ದಾರೆ. ಅವರಲ್ಲಿ ವಿವಿಧ ಸಂಘಟನೆಗಳು ಸದಸ್ಯರು, ಮುಖಂಡರು ಸೇರಿದಂತೆ ಒಂದು ಸಾವಿರ ಜನರನ್ನು ಅರೆಸ್ಟ್ ಮಾಡಿದ್ದಾರೆ. ಇವರಿಗೆ ಕಾವೇರಿಗೆ ಉಳಿಸಿಕೊಳ್ಳುವುದಕ್ಕಿಂತ ಕಳೆದುಕೊಳ್ಳು ಆಸೆ ಹೆಚ್ಚಾಗಿರುವುದನ್ನು ಇದು ತೋರಿಸುತ್ತದೆ ಎಂದು ಅವರು ಕಿಡಿ ಕಾರಿದರು.
ಸಿಸಿಬಿ ಪೊಲೀಸರ ಮಿಡ್ ನೈಟ್ ಕಾರ್ಯಾಚರಣೆ
ಇಂದು ಬಂದ್ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರ ಮಿಡ್ ನೈಟ್ ಕಾರ್ಯಾಚರಣೆ ಮಾಡಿದ್ದಾರೆಂದು ವರದಿಯಾಗಿದೆ. ಐವತ್ತಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಕ್ರೈಂ ಬ್ರಾಂಚ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸರು ಪ್ರತಿಭಟನೆ ಮಾಡುವವರಿಗೆ ಕೊಲವೊಂದು ಸಮಸ್ಯೆ ಆಗುತ್ತಿದೆ ಎಂದು ಗೊತ್ತಾಗುತ್ತಿದೆ. ಸದ್ಯದವರೆಗೂ ಬಂದ್ ಯಶಸ್ವಿಯಾಘಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳಿವಳಿ ಇರಲಿದೆ. ಇಲ್ಲಿ ಏನೇ ನಡೆದರೂ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಪೊಲೀಸರು ಎಚ್ಚರಿಕೆಯಿಂದ ಇರಬೇಕು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.
ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ
ಪ್ರತಿಭಟನೆಯನ್ನು ಹತ್ತಿಕ್ಕುವಂತ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ. ನಮ್ಮ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ನೀರುಗಂಟಿ ಕೆಲಸ ಮಾಡುತ್ತಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.












Click it and Unblock the Notifications