Bandh for Cauvery: ಬೆಂಗಳೂರಿನಲ್ಲಿ ರೋಗಿಗಳಿಗೆ ತಟ್ಟಿದ ಬಂದ್ ಬಿಸಿ: ಬಸ್ ಇಲ್ಲದೆ ಪರದಾಟ!
ಬೆಂಗಳೂರು ಸೆಪ್ಟೆಂಬರ್ 26: ಬೆಂಗಳೂರಿನಲ್ಲಿ ಕಾವೇರಿ ನೀರಿಗಾಗಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಬೆಳ್ಳಂಬೆಳಿಗ್ಗೆ ರೈತರು, ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಯ ಕಾರ್ಯಕರ್ತರು ರಸ್ತೆಗಿಳಿದು ಬಂದ್ ಬಿಗಿಗೊಳಿಸಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ರೋಗಿಗಳಿಗೂ ಬಂದ್ ಬಿಸಿ ತಟ್ಟಿದೆ.
ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್‌ಗೆ ಪ್ರಯಾಣಿಕರು ಬಂದಿದ್ದರು. ಈ ವೇಳೆ ಇಲ್ಲಿಂದ ಅಂದರೆ ಬೆಂಗಳೂರಿನಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದರು. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣ ಕೆಎಸ್‌ಆರ್‌ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುವಂತಾಗಿದೆ.

ಮೆಟ್ರೋದಲ್ಲೂ ಪ್ರಯಾಣಿಕರ ಸಂಖ್ಯೆ ಇಳಿಮುಖ
ನಗರದ ಮೆಟ್ರೋ ಸ್ಟೇಷನ್‌ಗೂ ಕೂಡ ಬಂದ್ ಬಿಸಿ ತಟ್ಟಿದೆ. ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ. ಇಂದು ಎಂದಿನಂತೆ ಮೆಟ್ರೋ ಸಂಚಾರ ಬೆಳಿಗ್ಗೆ ಆರರಿಂದ ಆರಂಭವಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ತುಂಬಾ ಕಡಿಮೆಯಾಗಿರುವುದರಿಂದ ಮೆಟ್ರೋ ಸಂಚಾರದ ಸಮಯವನ್ನು ಹೆಚ್ಚಿಸಲಾಗಿದೆ. ಅಂದರೆ ನಿಲ್ದಾಣದಿಂದ ಮೆಟ್ರೋಗಳು ತಡವಾಗಿ ಸಂಚರಿಸುತ್ತಿವೆ.
ಬಂದ್‌ನಿಂದಾಗಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರೇ ಕಾಣಿಸುತ್ತಿಲ್ಲ. ಬಿಎಂಆರ್‌ಸಿಎಲ್ ಬಂದ್‌ಗೆ ನೈತಿಕ ಬೆಂಬಲ ನೀಡಿದೆ. ಆದರೆ ಮೆಟ್ರೋ ಸಂಚಾರ ಇದ್ದರೂ ಕೂಡ ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆ ಇದೆ. ಬೆರಳೆಣಿಕೆಯಷ್ಟು ಜನ ಮಾತ್ರ ಪ್ರಯಾಣ ಮಾಡುತ್ತಿದ್ದಾರೆ.
ಕೆಆರ್ ಮಾರುಕಟ್ಟೆ ಬಂದ್
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಿದ್ದಾರೆ. ಬೆಳಿಗ್ಗೆ ಒಂಬತ್ತು ಗಂಟೆಯ ನಂತರ ಕೆಆರ್ ಮಾರುಕಟ್ಟೆ ಸಂಪೂರ್ಣ ಬಂದ್ ಆಗಲಿವೆ.
ಖಾಕಿ ಕಟ್ಟೆಚ್ಚರ
ಜೊತೆಗೆ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಇಂದು ಧರಣಿ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಎರಡು ಕೆಎಸ್‌ಆರ್‌ಪಿ, ಒಂದು ವಾಟರ್ ಜೆಟ್ ಹಾಗೂ ಹತ್ತು ಹೆಚ್ಚು ಬಸ್‌ಗಳನ್ನು ನಿಯೋಜಿಸಲಾಗಿದೆ. ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್fನತ್ತ ಬರುವ ರ್ಯಾಲಿಯನ್ನು ಮಾರ್ಗ ಮಧ್ಯದಲ್ಲಿಯೇ ತಡೆಯಲು ಪೊಲೀಸರನ್ನು ವ್ಯವಸ್ಥೆ ಮಾಡಲಾಗಿದೆ.
ತಮಿಳುನಾಡಿನಿಂದ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತ
ತಮಿಳುನಾಡು ನೋಂದಣಿ ವಾಹನಗಳು ಕರ್ನಾಟಕಕ್ಕೆ ತೆರಳುವುದು ಬೇಡ ಎಂದು ಊಟಿ ಜಿಲ್ಲಾಡಳಿತ ನಿರ್ಧರಿಸಿದೆ. ಏಕಾಏಕಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದರಿಂದ ಎರಡು ರಾಜ್ಯದ ವಾಹನ ಸವಾರರು 2 ತಾಸು ಪರದಾಡುವಂತಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದರು.












Click it and Unblock the Notifications