ಬೆಂಗಳೂರು 2ನೇ ವಿಮಾನ ನಿಲ್ದಾಣ: ಪ್ರಮುಖ ಜಿಲ್ಲೆಗೆ ಕೈತಪ್ಪಿದ ಅವಕಾಶ!
ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅವಕಾಶ ಕರ್ನಾಟಕದ ಪ್ರಮುಖ ಜಿಲ್ಲೆಯಾಗಿರುವ ತುಮಕೂರಿನಿಂದ ಕೈತಪ್ಪಿದೆ. ಈ ಬಗ್ಗೆ ಇದೀಗ ಚರ್ಚೆಗಳು ಜೋರಾಗಿವೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತೀವ್ರ ಪೈಪೋಟಿ ನಡೆದಿದೆ. ಈ ರೀತಿ ಇರುವಾಗಲೇ ರಾಜ್ಯದ ಪ್ರಮುಖ ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಈ ಸಂಬಂಧ ಸಚಿವ ಎಂ.ಬಿ ಪಾಟೀಲ್ ಅವರೇ ಮಾಹಿತಿ ನೀಡಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ಎರಡನೇ ವಿಮಾನ ನಿಲ್ದಾಣದಿಂದ ತುಮಕೂರು ಜಿಲ್ಲೆ ಔಟಾಗಿದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ಆದರೆ, ಈ ಭಾಗದಲ್ಲಿ ವಿಮಾನ ನಿಲ್ದಾಣ ಸಾಧ್ಯವೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ರಾಜಕೀಯ ಕಾರಣಗಳಿಂದ ತುಮಕೂರಲ್ಲಿ ವಿಮಾನ ನಿಲ್ದಾಣದ ಪ್ರಸ್ತಾವನೆ ಕೈಬಿಟ್ಟು ಹೋಗಿದೆಯೇ ಎನ್ನುವ ಅನುಮಾನವೂ ಇತ್ತು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರ ನಡುವೆ ಈ ವಿಚಾರವಾಗಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಇದೀಗ ಇಲ್ಲಿ ಯಾವ ಕಾರಣಕ್ಕೆ ವಿಮಾನ ನಿಲ್ದಾಣ ಪ್ರಸ್ತಾವನೆಯನ್ನು ಕೈಬಿಡಲಾಯಿತು ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ತುಮಕೂರಿನ ಶಿರಾ ಬಳಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ಭಾರೀ ಬೇಡಿಕೆ ವ್ಯಕ್ತವಾಗಿತ್ತು. ಈ ಸಂಬಂಧ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ರಾಜ್ಯ ಸಚಿವ ಜಿ. ಪರಮೇಶ್ವರ್ ಅವರು ಪ್ರಯತ್ನಪಟ್ಟಿದ್ದರು. ಮಾತ್ರವಲ್ಲ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ಪಕ್ಷಾತೀತ ಅಭಿಪ್ರಾಯ ವ್ಯಕ್ತವಾಗಿತ್ತು.
ತುಮಕೂರು ಜಿಲ್ಲೆಯ ಶಿರಾ ಬಳಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಅಂತ ಕೆಲವರು ಪ್ರಸ್ತಾವನೆ ಸಲ್ಲಿಸಿದ್ದು ನಿಜ. ಆದರೆ, ಇಲ್ಲಿ ನಿರ್ಮಾಣ ಮಾಡಲು ಆಗಲ್ಲ. ಶಿರಾ ಬಳಿ ಏನಾದರೂ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ. ಅದು ವಿಜಯಪುರ ಹಾಗೂ ಶಿವಮೊಗ್ಗ ಮಾದರಿಯ ಜಿಲ್ಲಾ ಮಟ್ಟದ ವಿಮಾನ ನಿಲ್ದಾಣಕ್ಕೆ ಸೀಮಿತವಾಗಲಿದೆ. ಬೆಂಗಳೂರಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು. ಆಗ ಹೂಡಿಕೆದಾರರನ್ನು ಆಕರ್ಷಿಸಲು ಸಾಧ್ಯವಿದೆ. ಎಲ್ಲದ್ದಕ್ಕಿಂತ ಮುಖ್ಯವಾಗಿ ಬೆಂಗಳೂರಿಗೆ ಸಮೀಪದಲ್ಲೇ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

ರಾಜಕೀಯ ಕಾರಣವಲ್ಲ: ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ತುಮಕೂರು ಜಿಲ್ಲೆಯಿಂದ ಔಟ್ ಆಗುವುದಕ್ಕೆ ರಾಜಕೀಯ ಕಾರಣವಲ್ಲ ಎನ್ನುವುದು ಇದೀಗ ಬಹಿರಂಗವಾಗಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಇಲ್ಲೇ ನಿರ್ಮಾಣವಾಗಬೇಕು. ಇದರಿಂದ ಸುತ್ತಮುತ್ತಲಿನ 21 ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಹೂಡಿಕೆ ಹಾಗೂ ಬೆಂಗಳೂರಿಗೆ ಸಮೀಪ ಮತ್ತು ಪ್ರಯಾಣಿಕರ ಅನುಕೂಲವನ್ನು ನೋಡಿಕೊಂಡು ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿರುವುದಾಗಿ ಸರ್ಕಾರ ಹೇಳಿದೆ.
ಐಟಿ ಕನಸು ನುಚ್ಚುನೂರು: ಇನ್ನು ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಈ ಭಾಗದಲ್ಲೂ ಐಟಿ ವಲಯ ವೃದ್ಧಿಯಾಗಲಿದ್ದು. ಭಾರೀ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದೀಗ ಈ ಕನಸು ನುಚ್ಚುನೂರಾಗಿದೆ. ವಿಮಾನ ನಿಲ್ದಾಣದ ಲೆಕ್ಕಾಚಾರಗಳು ತಲೆಕೆಳಗಾಗಿವೆ.












Click it and Unblock the Notifications